India vs Zimbabwe, 1st ODI: ಜಿಂಬಾಬ್ವೆ ವಿರುದ್ದ ಟೀಮ್ ಇಂಡಿಯಾಗೆ ಭರ್ಜರಿ ಜಯ

India vs Zimbabwe, 1st ODI: 11ನೇ ಓವರ್​ನಲ್ಲಿ ಮತ್ತೆ ಬೌಲಿಂಗ್​ಗೆ ಮರಳಿದ ದೀಪಕ್ ಚಹರ್ ವೆಸ್ಲಿ ಮಧುವರೆ (5) ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮತ್ತೊಮ್ಮೆ ಜಿಂಬಾಬ್ವೆಗೆ ಆಘಾತ ನೀಡಿದರು. ಇನ್ನು ಡೇಂಜರಸ್ ಸಿಂಕಂದರ್ ರಾಜಾ (12) ಪ್ರಸಿದ್ದ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು.

India vs Zimbabwe, 1st ODI: ಜಿಂಬಾಬ್ವೆ ವಿರುದ್ದ ಟೀಮ್ ಇಂಡಿಯಾಗೆ ಭರ್ಜರಿ ಜಯ
India vs Zimbabwe
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 18, 2022 | 6:37 PM

India vs Zimbabwe, 1st ODI: ಹರಾರೆಯ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಜಿಂಬಾಬ್ವೆ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳ  ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಟೀಮ್ ಇಂಡಿಯಾ ವೇಗಿಗಳು ದಾಳಿ ಸಂಘಟಿಸಿದ್ದರು. ಇಬ್ಬರು ಆರಂಭಿಕರನ್ನು ಬೇಗನೆ ಪೆವಿಲಿಯನ್​ಗೆ ಕಳುಹಿಸಿದ ದೀಪಕ್ ಚಹರ್ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಸೀನ್ ವಿಲಿಯಮ್ಸ್ (1) ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಮೂರನೇ ವಿಕೆಟ್ ಉರುಳಿಸಿದರು.

11ನೇ ಓವರ್​ನಲ್ಲಿ ಮತ್ತೆ ಬೌಲಿಂಗ್​ಗೆ ಮರಳಿದ ದೀಪಕ್ ಚಹರ್ ವೆಸ್ಲಿ ಮಧುವರೆ (5) ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮತ್ತೊಮ್ಮೆ ಜಿಂಬಾಬ್ವೆಗೆ ಆಘಾತ ನೀಡಿದರು. ಇನ್ನು ಡೇಂಜರಸ್ ಸಿಂಕಂದರ್ ರಾಜಾ (12) ಪ್ರಸಿದ್ದ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಕೇವಲ 66 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಜಿಂಬಾಬ್ವೆಗೆ ನಾಯಕ ರೆಗಿಸ್ ಚಕಬ್ವಾ ಆಸರೆಯಾದರು. 35 ರನ್​ಗಳಿಸಿ ತಂಡಕ್ಕೆ ಆಸರೆಯಾಗಿದ್ದ ಚಕಬ್ವಾ ಕೊನೆಗೂ ಅಕ್ಷರ್ ಪಟೇಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಪ್ರಸಿದ್ಧ್ ಕೃಷ್ಣ ರಿಯಾನ್ ಬರ್ಲ್ ವಿಕೆಟ್ ಪಡೆದರೆ, ಲೂಕ್​ರನ್ನು ಅಕ್ಷರ್ ಪಟೇಲ್ ಔಟ್ ಮಾಡಿದರು.

ಪರಿಣಾಮ 110 ರನ್​ಗಳಿಗೆ ಜಿಂಬಾಬ್ವೆ ತಂಡವು 8 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಯಾದ ರಿಚರ್ಡ್ ಹಾಗೂ ಬ್ರಾಡ್ ಇವನ್ಸ್ ಅರ್ಧಶತಕದ ಜೊತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಅಲ್ಲದೆ ಅತ್ಯಮೂಲ್ಯ ಕಾಣಿಕೆ ನೀಡುವ ತಂಡದ ಮೊತ್ತವನ್ನು 180ರ ಗಡಿದಾಟಿಸಿದರು. ಈ ಹಂತದಲ್ಲಿ 34 ರನ್​ ಬಾರಿಸಿದ ರಿಚರ್ಡ್​ರನ್ನು ಔಟ್ ಮಾಡುವಲ್ಲಿ ಕೊನೆಗೂ ಪ್ರಸಿದ್ಧ್ ಕೃಷ್ಣ ಯಶಸ್ವಿಯಾದರು. ಮತ್ತೊಂದೆಡೆ ಅಜೇಯರಾಗಿ ಉಳಿದ ಬ್ರಾಡ್ ಇವನ್ಸ್ 29 ಎಸೆತಗಳಲ್ಲಿ 33 ರನ್​ ಬಾರಿಸಿದರು. ಅಂತಿಮವಾಗಿ ವಿಕ್ಟರ್ (8) ವಿಕೆಟ್ ಪಡೆದ ಅಕ್ಷರ್ ಪಟೇಲ್ ಜಿಂಬಾಬ್ವೆ ತಂಡವನ್ನು 40.3 ಓವರ್​ಗಳಲ್ಲಿ 189 ರನ್​ಗಳಿಗೆ ಆಲೌಟ್ ಮಾಡಿದರು.

190 ರನ್​ಗಳ ಸಾಧಾರಣ ಸವಾಲು ಪಡೆದ ಟೀಮ್ ಇಂಡಿಯಾಗೆ ಆರಂಭಿಕರಾದ ಶುಭ್​ಮನ್ ಗಿಲ್ ಹಾಗೂ ಶಿಖರ್ ಧವನ್ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್​ 111 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರು. ಪರಿಣಾಮ ಶಿಖರ್ ಧವನ್ 75 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದ್ದರು. ಅಲ್ಲದೆ 20 ಓವರ್​ಗಳಲ್ಲಿ 105 ರನ್​ ಬಾರಿಸಿ ಸುಲಭ ಗೆಲುವಿಗೆ ರಹದಾರಿ ಮಾಡಿಕೊಟ್ಟರು.

ಇನ್ನೊಂದೆಡೆ ಧವನ್​ಗೆ ಉತ್ತಮ ಸಾಥ್ ನೀಡಿದ ಶುಭ್​ಮನ್ ಗಿಲ್ ಕೂಡ 51 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿದರು. ಮೂಲಕ 25 ಓವರ್​ಗಳಲ್ಲಿ ತಂಡದ ಮೊತ್ತವನ್ನು 140 ಕ್ಕೆ ತಂದು ನಿಲ್ಲಿಸಿದರು. ಅಂತಿಮವಾಗಿ ಶಿಖರ್ ಧವನ್ 113 ಎಸೆತಗಳಲ್ಲಿ 9 ಫೋರ್​ನೊಂದಿಗೆ 81 ರನ್​ ಬಾರಿಸಿದರೆ, ಶುಭ್​ಮನ್ ಗಿಲ್ 72 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ 82 ರನ್​ ಚಚ್ಚಿದರು. ಈ ಮೂಲಕ 30.5 ಓವರ್​ಗಳಲ್ಲಿ 190 ರನ್​ ಕಲೆಹಾಕುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷ =ರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್

ಜಿಂಬಾಬ್ವೆ (ಪ್ಲೇಯಿಂಗ್ XI): ತಡಿವಾನಾಶೆ ಮರುಮಣಿ, ಇನೊಸೆಂಟ್ ಕೈಯಾ, ಸೀನ್ ವಿಲಿಯಮ್ಸ್, ವೆಸ್ಲಿ ಮಾಧೆವೆರೆ, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ (ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ರಿಚರ್ಡ್ ನಾಗರವಾ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ