ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಹರಾರೆಯಲ್ಲಿ ಆರಂಭವಾಗಿದೆ. ಟಿ20 ವಿಶ್ವಕಪ್ ಗೆದ್ದ ಒಂದು ವಾರದ ನಂತರ ಭಾರತ ತಂಡ ಮೊದಲ ಬಾರಿಗೆ ಮೈದಾನಕ್ಕಿಳಿಯುತ್ತಿದೆ. ಈ ತಂಡದಲ್ಲಿ ಟಿ20 ವಿಶ್ವ ಚಾಂಪಿಯನ್ ತಂಡದ ಸದಸ್ಯರಿಲ್ಲದಿದ್ದರೂ ಅದರಲ್ಲಿ ಸೇರಿರುವ ಹಲವು ಯುವ ಆಟಗಾರರು ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ. ಶುಭ್ಮನ್ ಗಿಲ್ ಚೊಚ್ಚಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಚೊಚ್ಚಲ ನಾಯಕತ್ವದಲ್ಲಿ ಗೆಲುವಿನ ಶುಭಾರಂಭ ಮಾಡುವ ಇರಾದೆಯಲ್ಲಿ ಗಿಲ್ ಅಖಾಡಕ್ಕಿಳಿಯುತ್ತಿದ್ದಾರೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಶುಭಮನ್ ಗಿಲ್ ನಾಯಕತ್ವದಲ್ಲಿ ಯುವ ತಂಡ ಆಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮೂವರು ಆಟಗಾರರು ಸರಣಿಯ ಮೊದಲ ಪಂದ್ಯದಲ್ಲೇ ಟಿ20ಐಗೆ ಪದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂವರು ಆಟಗಾರರು ಅಭಿಷೇಕ್ ಶರ್ಮಾ, ಧ್ರುವ್ ಜುರೆಲ್ ಮತ್ತು ರಿಯಾನ್ ಪರಾಗ್. ಇದು ಅಭಿಷೇಕ್ ಶರ್ಮಾ ಮತ್ತು ರಿಯಾನ್ ಪರಾಗ್ ಅವರ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದ್ದರೆ, ಧ್ರುವ್ ಜುರೆಲ್ ಅವರ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವಾಗಿದೆ. ಜುರೆಲ್ ಈಗಾಗಲೇ ಟೀಂ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂವರು ಆಟಗಾರರು ತಮ್ಮ ಚೊಚ್ಚಲ ಪ್ರದರ್ಶನವನ್ನು ಸ್ಮರಣೀಯವಾಗಿಸುವತ್ತ ಗಮನಹರಿಸಲಿದ್ದಾರೆ.
A round of applause for #TeamIndia Debutants from today! 👏👏
Go well 👌👌
Follow The Match ▶️ https://t.co/r08h7yfNHO#ZIMvIND | @IamAbhiSharma4 | @ParagRiyan | @dhruvjurel21 pic.twitter.com/tt1oeKem2u
— BCCI (@BCCI) July 6, 2024
ಐಪಿಎಲ್ 2024 ರಲ್ಲಿ ಅಭಿಷೇಕ್ ಶರ್ಮಾ ಮತ್ತು ರಿಯಾನ್ ಪರಾಗ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಐಪಿಎಲ್ 2024ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ರಿಯಾನ್ ಪರಾಗ್. ಅಲ್ಲದೆ ಪರಾಗ್ ಸೀಸನ್ನ ಮೂರನೇ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿದ್ದರು. ಅವರು 16 ಪಂದ್ಯಗಳಲ್ಲಿ 149.22 ಸ್ಟ್ರೈಕ್ ರೇಟ್‌ನಲ್ಲಿ 573 ರನ್ ಬಾರಿಸಿದ್ದರು. ಈ ಅವಧಿಯಲ್ಲಿ ಅವರ ಬ್ಯಾಟ್ನಿಂದ 4 ಅರ್ಧಶತಕಗಳು ಸಿಡಿದಿದ್ದವು. ಅದೇ ಸಮಯದಲ್ಲಿ, ಅಭಿಷೇಕ್ ಶರ್ಮಾ ಐಪಿಎಲ್ 2024 ರ 16 ಪಂದ್ಯಗಳಲ್ಲಿ 204.22 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 484 ರನ್ ಬಾರಿಸಿದ್ದರು. ಈ ಅವಧಿಯಲ್ಲಿ ಅವರು ಒಟ್ಟು 42 ಸಿಕ್ಸರ್‌ಗಳನ್ನು ಬಾರಿಸಿದ್ದರು.
🚨 Toss and Team Update 🚨#TeamIndia elect to field in the 1st T20I
Abhishek Sharma & Riyan Parag are all set to make their international Debuts 👏👏
Dhruv Jurel also makes his T20I Debut 👌👌
Follow The Match ▶️ https://t.co/r08h7yfNHO#ZIMvIND pic.twitter.com/kBrVlaClKg
— BCCI (@BCCI) July 6, 2024
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.
ಜಿಂಬಾಬ್ವೆ ತಂಡ: ತಡಿವಾನಾಶೆ ಮರುಮಣಿ, ಇನೋಸೆಂಟ್ ಕಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಜಾ (ನಾಯಕ), ಡಿಯೋನ್ ಮೈಯರ್ಸ್, ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮಡ್ನಾಡೆ (ವಿಕೆಟ್ ಕೀಪರ್), ವೆಸ್ಲಿ ಮಾಧೆವೆರೆ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಬಾನಿ, ತೆಂಡೈ ಚಟಾರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:19 pm, Sat, 6 July 24