IND vs ZIM: 0,7,2,0.. ಭಾರತ ಪೆವಿಲಿಯನ್ ಪರೇಡ್; ಕೇವಲ 22 ರನ್ಗಳಿಗೆ 4 ವಿಕೆಟ್ ಪತನ
IND vs ZIM: ಹರಾರೆಯಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ ಆತಿಥೇಯ ತಂಡದ ಬೌಲಿಂಗ್ ದಾಳಿಗೆ ನಲುಗಿ ಹೋಗಿದೆ. ಜಿಂಬಾಬ್ವೆ ನೀಡಿರುವ 116 ರನ್ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಕೇವಲ 22 ರನ್ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಹರಾರೆಯಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ ಆತಿಥೇಯ ತಂಡದ ಬೌಲಿಂಗ್ ದಾಳಿಗೆ ನಲುಗಿ ಹೋಗಿದೆ. ಜಿಂಬಾಬ್ವೆ ನೀಡಿರುವ 116 ರನ್ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಕೇವಲ 22 ರನ್ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ತಂಡದ ಇಬ್ಬರು ಬ್ಯಾಟರ್ಗಳು ಶೂನ್ಯಕ್ಕೆ ವಿಕೆಟ್ ಒಪ್ಪಿಸಿರುವುದು ಜಿಂಬಾಬ್ವೆಯ ಶಿಸ್ತುಬದ್ಧ ದಾಳಿಗೆ ಹಿಡಿದ ಕೈಗನ್ನಡಿಯಾಗಿದೆ. ಉಳಿದಂತೆ ಇನ್ನಿಬ್ಬರು ಬ್ಯಾಟರ್ಗಳು ಕೇವಲ ಒಂದಂಕಿಗೆ ಸುಸ್ತಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಶೂನ್ಯಕ್ಕೆ ಅಭಿ ಔಟ್
116 ರನ್ಗಳ ಗುರಿ ಬೆನ್ನಟ್ಟಿದ ಭಾರತದ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಅಭಿಷೇಕ್ ಶರ್ಮಾ ಹಾಗೂ ನಾಯಕ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಇನ್ನಿಂಗ್ಸ್ ಆರಂಭಿಸಿದ ಅಭೀಷೇಕ್ ಶರ್ಮಾ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಇದರೊಂದಿಗೆ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಕಳಪೆ ಆರಂಭ ಮಾಡಿದರು. ಆ ನಂತರ ಬಂದ ರುತುರಾಜ್ ಗಾಯಕ್ವಾಡ್ ಕೂಡ 7 ರನ್ ಬಾರಿಸಲಷ್ಟೇ ಶಕ್ತರಾದರು.
A big blow for India.😱
Indian skipper Shubman Gill departs for 31 (29).🤐#ZIMvIND #T20Is #Sportskeeda pic.twitter.com/gDInwp51rC
— Sportskeeda (@Sportskeeda) July 6, 2024
22 ರನ್ಗಳಿಗೆ ಪ್ರಮುಖ 4 ವಿಕೆಟ್
ನಂತರ 4ನೇ ಕ್ರಮಾಂಕದಲ್ಲಿ ಬಂದ ರಿಯಾನ್ ಪರಾಗ್ ಕೂಡ ಹೆಚ್ಚು ಹೊತ್ತು ನಿಲ್ಲದೆ ಬಿಗ್ ಶಾಟ್ ಆಡುವ ಯತ್ನದಲ್ಲಿ 2 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ವಾಸ್ತವವಾಗಿ ರಿಯಾನ್ ಪರಾಗ್ಗೂ ಇದು ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಚೊಚ್ಚಲ ಪಂದ್ಯವನ್ನು ಸ್ಮರಣೀಯವಾಗಿಸುವ ಅವಕಾಶ ಪಡೆದಿದ್ದ ರಿಯಾನ್ ಬೇಡದ ಶಾಟ್ ಆಡಿ ವಿಕೆಟ್ ಕೈಚೆಲ್ಲಿದರು. ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೂಡ ಕಳಪೆ ಶಾಟ್ಗೆ ಬೆಲೆ ತೆರಬೇಕಾಯಿತು. ಅಚ್ಚರಿಯಿಂದರೆ ವಿಕೆಟ್ಗಳ ಪತನದ ನಡುವೆ ಜವಬ್ದಾರಿಯುತ ಬ್ಯಾಟಿಂಗ್ ಮಾಡಬೇಕಿದ್ದ ರಿಂಕು ಸಿಕ್ಸರ್ ಬಾರಿಸುವ ಯತ್ನದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಟೀಂ ಇಂಡಿಯಾ ಕೇವಲ 22 ರನ್ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತು.
The Young Blood ! 🥶#ZIMvIND #ZimVsIndONSony pic.twitter.com/pTs9ehE2CF
— Rahul ! 🇮🇳 (@msdfanboy007) July 6, 2024
ಸೋಲಿನ ಸುಳಿಯಲ್ಲಿ ಭಾರತ
ಈ ಸುದ್ದಿ ಬರೆಯುವ ಹೊತ್ತಿಗೆ ಸೋಲಿನ ದವಡೆಗೆ ಸಿಲುಕಿರುವ ಟೀಂ ಇಂಡಿಯಾ ಕೇವಲ 50 ರನ್ಗಳಿಗೆ ಪ್ರಮುಖ 6 ವಿಕೆಟ್ ಕಳೆದುಕೊಂಡಿದೆ. ಆರಂಭದಿಂದಲೂ ಜವಬ್ದಾರಿಯುತ ಬ್ಯಾಟಿಂಗ್ ಮಾಡುತ್ತಿದ್ದ ನಾಯಕ ಶುಭ್ಮನ್ ಗಿಲ್ ಕೂಡ 31 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ್ದಾರೆ. ವಿಕೆಟ್ ಕೀಪರ್ ಧೃವ್ ಜುರೇಲ್ ಕೂಡ 6 ರನ್ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಪರ ಬಾಲಂಗೋಚಿಗಳು ಬ್ಯಾಟಿಂಗ್ ಮಾಡುತ್ತಿದ್ದು, ತಂಡಕ್ಕೆ ಸೋಲಿನ ಭಯ ಶುರುವಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Sat, 6 July 24