India vs Zimbabwe 2nd ODI: ಟೀಮ್ ಇಂಡಿಯಾಗೆ ಸುಲಭ ಸವಾಲು ನೀಡಿದ ಜಿಂಬಾಬ್ವೆ

India vs Zimbabwe 2nd ODI: ಈ ಹಂತದಲ್ಲಿ ಕಣಕ್ಕಿಳಿದ ಜಿಂಬಾಬ್ವೆ ನಾಯಕ ಚಕಬ್ವಾ (2) ಠಾಕೂರ್ ಎಸೆತದಲ್ಲಿ ಶುಭ್​ಮನ್​ ಗಿಲ್​ಗೆ ಕ್ಯಾಚ್ ನೀಡಿದರು. ಈ ವೇಳೆ ದಾಳಿಗಿಳಿದ ಪ್ರಸಿದ್ದ್ ಕೃಷ್ಣ ಮಧುವರೆ (2) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು.

India vs Zimbabwe 2nd ODI: ಟೀಮ್ ಇಂಡಿಯಾಗೆ ಸುಲಭ ಸವಾಲು ನೀಡಿದ ಜಿಂಬಾಬ್ವೆ
India vs Zimbabwe 2nd ODI
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 20, 2022 | 4:03 PM

ಹರಾರೆಯ ಸ್ಪೋರ್ಟ್ಸ್​ ಕ್ಲಬ್​ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡವು 161 ರನ್​ಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಬೆಂಬಲಿಸಿದಂತೆ ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಆರಂಭದಲ್ಲೇ ಜಿಂಬಾಬ್ವೆ ಆರಂಭಿಕರ ಮೇಲೆ ಒತ್ತಡ ಹೇರಿದರು. ಪರಿಣಾಮ ಮೊದಲ 10 ಓವರ್​ಗಳಲ್ಲಿ ಜಿಂಬಾಬ್ವೆ ಕಲೆಹಾಕಿದ್ದು ಕೇವಲ 26 ರನ್​ ಮಾತ್ರ.

ಇದರ ನಡುವೆ ಕೈಟಾನೊ (7) ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಇನ್ನೊಸೆಂಟ್ ಕೈಯಾ (16) ವಿಕೆಟ್ ಪಡೆಯುವ ಮೂಲಕ ಶಾರ್ದೂಲ್ ಠಾಕೂರ್ ಜಿಂಬಾಬ್ವೆಗೆ ಆಘಾತ ನೀಡಿದರು.

ಈ ಹಂತದಲ್ಲಿ ಕಣಕ್ಕಿಳಿದ ಜಿಂಬಾಬ್ವೆ ನಾಯಕ ಚಕಬ್ವಾ (2) ಠಾಕೂರ್ ಎಸೆತದಲ್ಲಿ ಶುಭ್​ಮನ್​ ಗಿಲ್​ಗೆ ಕ್ಯಾಚ್ ನೀಡಿದರು. ಈ ವೇಳೆ ದಾಳಿಗಿಳಿದ ಪ್ರಸಿದ್ದ್ ಕೃಷ್ಣ ಮಧುವರೆ (2) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು. ಕೇವಲ 31 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡ ಜಿಂಬಾಬ್ವೆಗೆ ಈ ಹಂತದಲ್ಲಿ ಸಿಕಂದರ್ ರಾಜಾ ಹಾಗೂ ಸೀನ್ ವಿಲಿಯಮ್ಸನ್ ಆಸರೆಯಾದರು. ಈ ಜೋಡಿ 30 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಶ್ರಮಿಸಿದರು. ಆದರೆ ಈ ವೇಳೆ ಸ್ಪಿನ್ ಮೋಡಿ ಮಾಡಿದ ಕುಲ್ದೀಪ್ ಯಾದವ್ ಸಿಕಂದರ್ ರಾಜಾ (16) ವಿಕೆಟ್ ಕಬಳಿಸಿ ಜೊತೆಯಾಟವನ್ನು ಮುರಿಯುವಲ್ಲಿ ಸಫಲರಾದರು.

ಆದರೆ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೀನ್ ವಿಲಿಯಮ್ಸ್ ಭಾರತೀಯ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಂತೆ 42 ಎಸೆತಗಳಲ್ಲಿ 42 ರನ್ ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದರು. ಅಲ್ಲದೆ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು.

ಈ ವೇಳೆ ನಾಯಕ ಕೆಎಲ್ ರಾಹುಲ್ ಬೌಲಿಂಗ್​ನಲ್ಲಿ ಮಾಡಿದ ಬದಲಾವಣೆ ಫಲ ನೀಡಿತು. ಅದರಂತೆ ವಿಲಿಯಮ್ಸ್​ ಪಾರ್ಟ್​ ಟೈಮ್ ಬೌಲರ್ ದೀಪಕ್ ಹೂಡಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್​ ಕಡೆ ಮುಖ ಮಾಡಿದರು. ಅಂತಿಮವಾಗಿ ಜಿಂಬಾಬ್ವೆ ತಂಡವನ್ನು 38.1 ಓವರ್​ಗಳಲ್ಲಿ 161 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಬೌಲರ್​ಗಳು ಪರಾಕ್ರಮ ಮೆರೆದರು. ಭಾರತದ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಕಬಳಿಸಿದರೆ, ಪ್ರಸಿದ್ದ್ ಕೃಷ್ಣ, ಸಿರಾಜ್, ದೀಪಕ್ ಹೂಡಾ, ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

ಜಿಂಬಾಬ್ವೆ (ಪ್ಲೇಯಿಂಗ್ XI): ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ(ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ

ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್

Published On - 4:01 pm, Sat, 20 August 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್