IND vs ZIM: ಟಾಸ್ ಗೆದ್ದ ಶುಭ್ಮನ್ ಗಿಲ್; 2ನೇ ಪಂದ್ಯಕ್ಕೆ ತಂಡದಲ್ಲಿ 1 ಬದಲಾವಣೆ
IND vs ZIM: ಇಂದು ಭಾರತ ಮತ್ತು ಜಿಂಬಾಬ್ವೆ ನಡುವೆ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಎರಡನೇ ಟಿ20 ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯೊಂದಿಗೆ ಆಡಲಿದೆ ಎಂದರು.
ಇಂದು ಭಾರತ ಮತ್ತು ಜಿಂಬಾಬ್ವೆ ನಡುವೆ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಎರಡನೇ ಟಿ20 ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯೊಂದಿಗೆ ಆಡಲಿದೆ ಎಂದರು. ಅಂದರೆ ಖಲೀಲ್ ಅಹ್ಮದ್ ಬದಲಿಗೆ ಸಾಯಿ ಸುದರ್ಶನ್ ತಂಡದಲ್ಲಿ ಆಡಲಿದ್ದಾರೆ. ಇತ್ತ ಜಿಂಬಾಬ್ವೆ ತಂಡ ತನ್ನ ಗೆಲುವಿನ ಸಂಯೋಜನೆಯನ್ನು ಬದಲಿಸದೆ ಹಿಂದಿನ ಪಂದ್ಯದ ಆಡುವ ಹನ್ನೊಂದರ ಬಳಗವನ್ನು ಕಣಕ್ಕಿಳಿಸಿದೆ.
ಟೀಂ ಇಂಡಿಯಾದಲ್ಲಿ 1 ಬದಲಾವಣೆ
ಈ ಪಂದ್ಯದಲ್ಲಿ ಟೀಂ ಇಂಡಿಯಾ ಒಬ್ಬ ಕಡಿಮೆ ಬೌಲರ್‌ನೊಂದಿಗೆ ಆಡುತ್ತಿದೆ. ಕಳೆದ ಪಂದ್ಯದ ಭಾಗವಾಗಿದ್ದ ಖಲೀಲ್ ಅಹ್ಮದ್ ಈ ಪಂದ್ಯದ ಆಡುವ 11 ರಲ್ಲಿ ಸೇರ್ಪಡೆಗೊಂಡಿಲ್ಲ. ಸರಣಿಯ ಮೊದಲ ಪಂದ್ಯದಲ್ಲಿ ಖಲೀಲ್ ಅಹ್ಮದ್ ಗೆ ಯಾವುದೇ ವಿಕೆಟ್ ಸಿಗಲಿಲ್ಲ. ಮೂರು ಓವರ್ ಬೌಲ್ ಮಾಡಿದ್ದ ಅವರು 9.33 ರ ಎಕಾನಮಿಯಲ್ಲಿ 28 ರನ್ ನೀಡಿದ್ದರು. ಖಲೀಲ್ ಸುಮಾರು 5 ವರ್ಷಗಳ ನಂತರ ಟೀಮ್ ಇಂಡಿಯಾ ಪರ ಯಾವುದೇ ಪಂದ್ಯವನ್ನು ಆಡಿರಲಿಲ್ಲ. 2019 ರ ಆರಂಭದಲ್ಲಿ ಅವರು ಟೀಮ್ ಇಂಡಿಯಾದ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಆ ನಂತರ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.
A day to remember for T20I Debutant Sai Sudharsan 💙
He receives his T20I cap 🧢 from Captain Shubman Gill ahead of the second T20I 👏👏
Follow the Match ▶️ https://t.co/yO8XjNpOro… #ZIMvIND#TeamIndia | #ZIMvIND pic.twitter.com/9XfRBVT1Im
— BCCI (@BCCI) July 7, 2024
ಸಾಯಿ ಸುದರ್ಶನ್ಗೆ ಅವಕಾಶ
ಖಲೀಲ್ ಅಹ್ಮದ್ ಬದಲಿಗೆ ಸಾಯಿ ಸುದರ್ಶನ್ ಈ ಪಂದ್ಯದಲ್ಲಿ ಅವಕಾಶ ಪಡೆದಿದ್ದಾರೆ. ಸಾಯಿ ಸುದರ್ಶನ್ ಅವರ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಇದಾಗಿದೆ. ಇದಕ್ಕೂ ಮುನ್ನ ಅವರು ಟೀಂ ಇಂಡಿಯಾ ಪರ ಏಕದಿನ ಮಾದರಿಯಲ್ಲಿ ಆಡಿದ್ದಾರೆ. ಐಪಿಎಲ್ 2024 ರಲ್ಲಿ ಗುಜರಾತ್ ಪರ ಅದ್ಭುತ ಪ್ರದರ್ಶನ ನೀಡಿದ್ದ ಸುದರ್ಶನ್ 14 ಪಂದ್ಯಗಳಲ್ಲಿ 47.91 ಸರಾಸರಿಯಲ್ಲಿ 527 ರನ್ ಬಾರಿಸಿದ್ದರು. ಇದರಲ್ಲಿ ಅವರು 2 ಅರ್ಧ ಶತಕ ಮತ್ತು 1 ಶತಕವನ್ನೂ ಬಾರಿಸಿದ್ದರು.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್.
ಜಿಂಬಾಬ್ವೆ ತಂಡ: ವೆಸ್ಲಿ ಮಾಧೆವೆರೆ, ಇನೋಸೆಂಟ್ ಕಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಜಾ (ನಾಯಕ), ಡಿಯೋನ್ ಮೈಯರ್ಸ್, ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ವೆಲ್ಲಿಂಗ್ಟನ್ ಮಸಕಡ್ಜಾ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಬಾನಿ, ಟೆಂಡೈ ಚಟಾರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:17 pm, Sun, 7 July 24