IND vs ZIM: 3ನೇ ಪಂದ್ಯಕ್ಕೆ ಭಾರತ ತಂಡದಲ್ಲಿ 4, ಜಿಂಬಾಬ್ವೆ ತಂಡದಲ್ಲಿ 2 ಬದಲಾವಣೆ..!

IND vs ZIM: ಈ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ನಡೆದಿರುವ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ತಂಡವೇ ಗೆದ್ದಿರುವುದರಿಂದ ಗಿಲ್ ಮತ್ತೆ ಬ್ಯಾಟಿಂಗ್ ಮಾಡಲು ಮನಸು ಮಾಡಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

IND vs ZIM: 3ನೇ ಪಂದ್ಯಕ್ಕೆ ಭಾರತ ತಂಡದಲ್ಲಿ 4, ಜಿಂಬಾಬ್ವೆ ತಂಡದಲ್ಲಿ 2 ಬದಲಾವಣೆ..!
ಭಾರತ- ಜಿಂಬಾಬ್ವೆ
Follow us
|

Updated on:Jul 10, 2024 | 4:23 PM

ಭಾರತ ಮತ್ತು ಜಿಂಬಾಬ್ವೆ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಇಲ್ಲಿಯವರೆಗೆ 2 ಪಂದ್ಯಗಳು ನಡೆದಿದ್ದು, ಇದರಲ್ಲಿ ಜಿಂಬಾಬ್ವೆ ಒಂದು ಪಂದ್ಯವನ್ನು ಗೆದ್ದಿದ್ದರೆ, ಎರಡನೇ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಸರಣಿಯ ಮೂರನೇ ಪಂದ್ಯ ಇಂದು ನಡೆಯುತ್ತಿದೆ. ಸರಣಿಯಲ್ಲಿ ಮುನ್ನಡೆ ಸಾಧಿಸಲು ಉಭಯ ತಂಡಗಳು ಈ ಪಂದ್ಯವನ್ನು ಗೆಲ್ಲಲು ಬಯಸುತ್ತಿವೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ ಪಂದ್ಯವಾಗಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ನಡೆದಿರುವ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ತಂಡವೇ ಗೆದ್ದಿರುವುದರಿಂದ ಗಿಲ್ ಮತ್ತೆ ಬ್ಯಾಟಿಂಗ್ ಮಾಡಲು ಮನಸು ಮಾಡಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಎರಡು ತಂಡಗಳಲ್ಲೂ ಬದಲಾವಣೆ

ನಿರೀಕ್ಷೆಯಂತೆ ಮೂರನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಇದಕ್ಕೆ ಕಾರಣವೂ ಇದ್ದು, ಟಿ20 ವಿಶ್ವಕಪ್ ವಿಜೇತ ತಂಡದಲ್ಲಿದ್ದ ಕೆಲವು ಆಟಗಾರರನ್ನು ಈ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಟಿ20 ವಿಶ್ವಕಪ್ ವಿಜೇತ ತಂಡದ ಆಟಗಾರರು ಜಿಂಬಾಬ್ವೆ ಪ್ರವಾಸಕ್ಕೆ ತೆರಳಲು ಸಾಧ್ಯವಾಗಲಿಲ್ಲ. ಇದೀಗ ಆ ಆಟಗಾರರು ಜಿಂಜಾಬ್ವೆಯಲ್ಲಿ ತಂಡವನ್ನು ಸೇರಿಕೊಂಡಿದ್ದು, ಅವರಿಗೆ ಅವಕಾಶ ನೀಡುವ ಸಲುವಾಗಿ ಟೀಂ ಇಂಡಿಯಾದಲ್ಲಿ 4 ಬದಲಾವಣೆಗಳನ್ನು ಮಾಡಲಾಗಿದೆ.

ಅದರಂತೆ ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಆಡಲಿದ್ದಾರೆ. ಮುಖೇಶ್ ಕುಮಾರ್ ಬದಲಿಗೆ ಖಲೀಲ್ ಅಹ್ಮದ್​ಗೆ ಅವಕಾಶ ಸಿಕ್ಕಿದೆ. ಇದರರ್ಥ ಕಳೆದೆರಡು ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ಮಾಡಿದ್ದ ಧೃವ್ ಜುರೇಲ್, ರಿಯಾನ್ ಪರಾಗ್, ಸಾಯಿ ಸುದರ್ಶನ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅದೇ ಸಮಯದಲ್ಲಿ, ಜಿಂಬಾಬ್ವೆ ತಂಡವು ಎರಡು ಬದಲಾವಣೆಗಳೊಂದಿಗೆ ಮೈದಾನಕ್ಕಿಳಿಯಲ್ಲಿದೆ.

ಉಭಯ ತಂಡಗಳು

ಭಾರತ ತಂಡ: ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್.

ಜಿಂಬಾಬ್ವೆ ತಂಡ: ತಡಿವಾನಾಶೆ ಮಾರುಮಣಿ, ವೆಸ್ಲಿ ಮಾಧೆವೆರೆ, ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್, ಸಿಕಂದರ್ ರಾಝಾ (ನಾಯಕ), ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ವೆಲ್ಲಿಂಗ್ಟನ್ ಮಸಕಡ್ಜಾ, ರಿಚರ್ಡ್ ನಗರ್ವಾ, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Wed, 10 July 24

ತಾಜಾ ಸುದ್ದಿ
ಪರಿಷತ್ ನಲ್ಲಿ ಸಿದ್ದರಾಮಯ್ಯ ಮತ್ತು ಬೋಜೇಗೌಡ ನಡುವೆ ದೋಸ್ತಿ ಮಾತುಕತೆ!
ಪರಿಷತ್ ನಲ್ಲಿ ಸಿದ್ದರಾಮಯ್ಯ ಮತ್ತು ಬೋಜೇಗೌಡ ನಡುವೆ ದೋಸ್ತಿ ಮಾತುಕತೆ!
ಹಿಮದಿಂದ ಮುಚ್ಚಿಕೊಂಡ ಜಗತ್ತಿನ ಅತಿ ಎತ್ತರದ ಶಿವನ ದೇವಸ್ಥಾನ
ಹಿಮದಿಂದ ಮುಚ್ಚಿಕೊಂಡ ಜಗತ್ತಿನ ಅತಿ ಎತ್ತರದ ಶಿವನ ದೇವಸ್ಥಾನ
ಶಿರೂರು ದುರಂತ ನಡೆದು ವಾರ ಕಳೆದರೂ ಪತ್ತೆಯಾಗದ ಇನ್ನೂ ಮೂರು ದೇಹಗಳು
ಶಿರೂರು ದುರಂತ ನಡೆದು ವಾರ ಕಳೆದರೂ ಪತ್ತೆಯಾಗದ ಇನ್ನೂ ಮೂರು ದೇಹಗಳು
ಪ್ರೀಮಿಯಂ ಸ್ಮಾರ್ಟ್​ವಾಚ್ ಲಾಂಚ್ ಮಾಡಿದ ಸ್ಯಾಮ್​ಸಂಗ್
ಪ್ರೀಮಿಯಂ ಸ್ಮಾರ್ಟ್​ವಾಚ್ ಲಾಂಚ್ ಮಾಡಿದ ಸ್ಯಾಮ್​ಸಂಗ್
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ವಿರೋಧ ಪಕ್ಷದ ಸದಸ್ಯರಿಂದ ಸಭಾತ್ಯಾಗ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ವಿರೋಧ ಪಕ್ಷದ ಸದಸ್ಯರಿಂದ ಸಭಾತ್ಯಾಗ
ಪ್ರೀತಿ ಪ್ರಾರಂಭದಲ್ಲೇ ಸೋನಲ್-ತರುಣ್ ಪ್ರೀ-ವೆಡ್ಡಿಂಗ್ ವಿಡಿಯೋ
ಪ್ರೀತಿ ಪ್ರಾರಂಭದಲ್ಲೇ ಸೋನಲ್-ತರುಣ್ ಪ್ರೀ-ವೆಡ್ಡಿಂಗ್ ವಿಡಿಯೋ
ವಿಧಾನಮಂಡಲ ಅಧಿವೇಶನ ಪುನರಾರಂಭ; ಇಲ್ಲಿ ಲೈವ್ ವೀಕ್ಷಿಸಿ
ವಿಧಾನಮಂಡಲ ಅಧಿವೇಶನ ಪುನರಾರಂಭ; ಇಲ್ಲಿ ಲೈವ್ ವೀಕ್ಷಿಸಿ
ಬೆಂಗಳೂರು: ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಬಿ ದಯಾನಂದ್​ ಬುಲೆಟ್ ರೈಡ್​​
ಬೆಂಗಳೂರು: ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಬಿ ದಯಾನಂದ್​ ಬುಲೆಟ್ ರೈಡ್​​
ಬಾಸ್ ಎಂದು ಹೋಗಿದ್ದೇ ತಪ್ಪಾಯ್ತು; ಪ್ರದೋಶ್ ಸಿಕ್ಕಿಬಿದ್ದಿದ್ದು ಹೀಗೆ
ಬಾಸ್ ಎಂದು ಹೋಗಿದ್ದೇ ತಪ್ಪಾಯ್ತು; ಪ್ರದೋಶ್ ಸಿಕ್ಕಿಬಿದ್ದಿದ್ದು ಹೀಗೆ
Daily Devotional: ಶತ್ರು ಕಾಟದಿಂದ ಪಾರಾಗಲು ಗೃಹಿಣಿಯರು ಈ ಕಾರ್ಯ ಮಾಡಿ
Daily Devotional: ಶತ್ರು ಕಾಟದಿಂದ ಪಾರಾಗಲು ಗೃಹಿಣಿಯರು ಈ ಕಾರ್ಯ ಮಾಡಿ