ಭಾರತ ಮತ್ತು ಜಿಂಬಾಬ್ವೆ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಇಲ್ಲಿಯವರೆಗೆ 3 ಪಂದ್ಯಗಳು ನಡೆದಿದ್ದು, ಇದರಲ್ಲಿ ಜಿಂಬಾಬ್ವೆ ಒಂದು ಪಂದ್ಯವನ್ನು ಗೆದ್ದಿದ್ದರೆ, ಎರಡು ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಸರಣಿಯ ನಾಲ್ಕನೇ ಪಂದ್ಯ ಇಂದು ನಡೆಯುತ್ತಿದೆ. ಸರಣಿಯಲ್ಲಿ ಜೀವಂತವಾಗಿರಲು ಜಿಂಬಾಬ್ವೆ ಬಯಸುತ್ತಿದ್ದರೆ, ಇತ್ತ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ ಪಂದ್ಯವಾಗಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ನಡೆದಿರುವ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ತಂಡವೇ ಗೆಲುವು ಸಾಧಿಸಿತ್ತು. ಅದಾಗ್ಯೂ ಗಿಲ್ ಟಾಸ್ ಗೆದ್ದು ಬೌಲಿಂಗ್ ಮಾಡಲು ಮುಂದಾಗಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.
ವೇಗದ ಬೌಲರ್ ತುಷಾರ್ ದೇಶಪಾಂಡೆ ಅವರು ಸರಣಿಯ ನಾಲ್ಕನೇ ಪಂದ್ಯದಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದಾರೆ. ಈ ಬಲಗೈ ವೇಗದ ಬೌಲರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದು, ಅವರ ಟಿ20 ದಾಖಲೆ ಅತ್ಯುತ್ತಮವಾಗಿದೆ. 28 ವರ್ಷದ ವೇಗದ ಬೌಲರ್ ತುಷಾರ್ ದೇಶಪಾಂಡೆ 15 ಮೇ 1995 ರಂದು ಮುಂಬೈನಲ್ಲಿ ಜನಿಸಿದರು. ದೇಶಿಯ ಕ್ರಿಕೆಟ್‌ನಲ್ಲಿ ಮುಂಬೈ ತಂಡದ ಪರ ಆಡುತ್ತಾರೆ. ತುಷಾರ್ ದೇಶಪಾಂಡೆ ಐಪಿಎಲ್‌ನಲ್ಲಿ ಇದುವರೆಗೆ 36 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 42 ವಿಕೆಟ್‌ಗಳನ್ನು ಪಡೆದಿದ್ದಾರೆ. 2024 ರ ಸೀಸನ್ನಲ್ಲಿ, ತುಷಾರ್ ದೇಶಪಾಂಡೆ 13 ಪಂದ್ಯಗಳಲ್ಲಿ 17 ವಿಕೆಟ್ಗಳನ್ನು ಪಡೆದಿದ್ದರು. ಹಾಗೆಯೇ 2023 ಐಪಿಎಲ್‌ನಲ್ಲಿ ಅವರು 16 ಪಂದ್ಯಗಳಲ್ಲಿ 21 ವಿಕೆಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.
Tushar Deshpande is all set to make his international Debut!
He receives the cap 🧢 in presence of his wife 👏👏
Go well! 🙌
Follow The Match ▶️ https://t.co/AaZlvFY7x7#TeamIndia | #ZIMvIND pic.twitter.com/kRtjgxmOJ0
— BCCI (@BCCI) July 13, 2024
ಭಾರತ ತಂಡ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ (ನಾಯಕ), ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ, ಖಲೀಲ್ ಅಹ್ಮದ್.
ಜಿಂಬಾಬ್ವೆ ತಂಡ: ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ, ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್, ಸಿಕಂದರ್ ರಾಝಾ (ನಾಯಕ), ಜೊನಾಥನ್ ಕ್ಯಾಂಪ್‌ಬೆಲ್, ಫರಾಜ್ ಅಕ್ರಂ, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ರಿಚರ್ಡ್ ನ್ಗರ್ವಾ, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:18 pm, Sat, 13 July 24