AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಮೆಲ್ಬೋರ್ನ್​ನಲ್ಲಿ ಮಹಾ ಕದನ; ಪಾಕ್ ಮಣಿಸಿದವರನ್ನು ಹಗುರವಾಗಿ ಪರಿಗಣಿಸುವಂತಿಲ್ಲ ರೋಹಿತ್ ಪಡೆ

India Vs Zimbabwe T20 World Cup 2022: ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾದ್ದರೂ ಭಾರತಕ್ಕೆ ಲಾಭವಾಗಲಿದೆ. ಏಕೆಂದರೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡುವುದರಿಂದ ಭಾರತ ಸುಲಭವಾಗಿ ಸೆಮಿಫೈನಲ್‌ಗೆ ಎಂಟ್ರಿಕೊಡಲಿದೆ.

IND vs ZIM: ಮೆಲ್ಬೋರ್ನ್​ನಲ್ಲಿ ಮಹಾ ಕದನ; ಪಾಕ್ ಮಣಿಸಿದವರನ್ನು ಹಗುರವಾಗಿ ಪರಿಗಣಿಸುವಂತಿಲ್ಲ ರೋಹಿತ್ ಪಡೆ
ಟೀಂ ಇಂಡಿಯಾ
TV9 Web
| Edited By: |

Updated on:Nov 05, 2022 | 3:59 PM

Share

ಭಾರತ ತಂಡ (Team India) ಸೂಪರ್ 12 ರ ತನ್ನ ಕೊನೆಯ ಪಂದ್ಯವನ್ನು ಭಾನುವಾರ ಆಡಲಿದ್ದು ಅಲ್ಲಿ ಜಿಂಬಾಬ್ವೆಯನ್ನು (Zimbabwe) ಎದುರಿಸಲಿದೆ. ಭಾರತ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಮೂರು ಗೆಲುವಿನೊಂದಿಗೆ ಆರು ಅಂಕಗಳನ್ನು ಹೊಂದಿದೆ ಮತ್ತು ತನ್ನ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಟೀಂ ಇಂಡಿಯಾ ಅಗ್ರಸ್ಥಾನದಲ್ಲಿ ಉಳಿಯಬೇಕಾದರೆ ಜಿಂಬಾಬ್ವೆಯನ್ನು ಸೋಲಿಸಲೇಬೇಕು. ಭಾರತ ಶ್ರೇಷ್ಠ ಫಾರ್ಮ್‌ನಲ್ಲಿರುವುದನ್ನು ನೋಡಿದರೆ, ಅವರು ಈ ಪಂದ್ಯವನ್ನು ಸುಲಭವಾಗಿ ಗೆಲ್ಲುತ್ತಾರೆ ಎಂದು ತೋರುತ್ತಿದೆ ಆದರೆ ಯಾವ ಸಮಯದಲ್ಲಾದರೂ ತಿರುಗಿಬೀಳುವ ಸಾಮಥ್ಯ್ರ ಹೊಂದಿರುವ ಜಿಂಬಾಬ್ವೆ ತಂಡವನ್ನು ಭಾರತ ಕಡೆಗಣಿಸುವಂತಿಲ್ಲ.

ಈ ಬಾರಿಯ ವಿಶ್ವಕಪ್‌ನಲ್ಲಿ ಮಳೆಯಿಂದಾಗಿ ಹಲವು ಪಂದ್ಯಗಳು ರದ್ದಾಗಿವೆ. ಇದರಿಂದಾಗಿ ಕೆಲವು ಬಲಿಷ್ಠ ತಂಡಗಳೇ ಸೆಮಿಫೈನಲ್‌ಗೆ ಎಂಟ್ರಿಕೊಡಲು ಹರಸಾಹಸ ಪಡುವಂತ್ತಾಗಿದೆ. ಆದರೆ ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾದ್ದರೂ ಭಾರತಕ್ಕೆ ಲಾಭವಾಗಲಿದೆ. ಏಕೆಂದರೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡುವುದರಿಂದ ಭಾರತ ಸುಲಭವಾಗಿ ಸೆಮಿಫೈನಲ್‌ಗೆ ಎಂಟ್ರಿಕೊಡಲಿದೆ.

ಬಿಗ್ ಇನ್ನಿಂಗ್ಸ್ ಆಡಬೇಕಿದೆ ರೋಹಿತ್

ಸೆಮಿಫೈನಲ್‌ಗೆ ಹೋಗಲು ಭಾರತ ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ನಾಯಕ ರೋಹಿತ್ ಶರ್ಮಾ ಕೂಡ ಈ ಪಂದ್ಯದಲ್ಲಿ ಬಿಗ್ ಇನ್ನಿಂಗ್ಸ್ ಆಡಲು ಪ್ರಯತ್ನಿಸಬೇಕಿದೆ. ಈ ಟೂರ್ನಿಯಲ್ಲಿ ರೋಹಿತ್​ರಿಂದ ಇನ್ನೂ ಯಾವುದೇ ಬಿಗ್ ಇನ್ನಿಂಗ್ಸ್‌ ಆಡಲು ಸಾಧ್ಯವಾಗಿಲ್ಲ. ಟೂರ್ನಿಯಲ್ಲಿ ಇದುವರೆಗೆ ನಾಲ್ಕು ಪಂದ್ಯಗಳಲ್ಲಿ ರೋಹಿತ್ ಕೇವಲ 74 ರನ್ ಗಳಿಸಿದ್ದಾರೆ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ರೋಹಿತ್ ಬಿಗ್ ಇನ್ನಿಂಗ್ಸ್‌ ಆಡುವ ಸಲುವಾಗಿಯೇ ಮೈದಾನಕ್ಕೆ ಇಳಿಯಬೇಕಿದೆ.

ಜಿಂಬಾಬ್ವೆ ಬ್ಯಾಟ್ಸ್‌ಮನ್‌ಗಳಿಗೆ ಕಷ್ಟ!

ಜಿಂಬಾಬ್ವೆ ಈ ಪಂದ್ಯಾವಳಿಯಲ್ಲಿ ಉತ್ತಮ ಆರಂಭ ಮಾಡಿತ್ತು. ಆದರೆ ಆ ನಂತರದ ಪಂದ್ಯಗಳಲ್ಲಿ ಲಯ ಕಳೆದುಕೊಂಡ ತಂಡ ಸೆಮಿಫೈನಲ್​ನಿಂದ ಈಗಾಗಲೇ ಹೊರಬಿದ್ದಿದೆ. ಜಿಂಬಾಬ್ವೆ ಬ್ಯಾಟ್ಸ್‌ಮನ್‌ಗಳು ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿಲ್ಲ. ಹೀಗಾಗಿ ಭಾರತದ ಉತ್ತಮ ಬೌಲಿಂಗ್ ಲೈನ್​ ಅಪ್ ಅನ್ನು ಸುಲಭವಾಗಿ ಎದುರಿಸುವುದು ಜಿಂಬಾಬ್ವೆ ಆಟಗಾರರಿಗೆ ಸುಲಭವಾಗಿಲ್ಲ.

ಭಾರತ ಹಗುರವಾಗಿ ಪರಿಗಣಿಸುವಂತಿಲ್ಲ

ಆದರೆ, ಜಿಂಬಾಬ್ವೆಯನ್ನು ಲಘುವಾಗಿ ಪರಿಗಣಿಸುವ ತಪ್ಪನ್ನು ಭಾರತ ಮಾಡುವಂತಿಲ್ಲ. ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಜಿಂಬಾಬ್ವೆ ಬಲಿಷ್ಠ ತಂಡಗಳಿಗೆ ತಿರುಗೇಟು ನೀಡಿದೆ. ಅವರು ಪಾಕಿಸ್ತಾನದಂತಹ ಬಲಿಷ್ಠ ತಂಡವನ್ನು ಸೋಲಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ, ಜಿಂಬಾಬ್ವೆಯನ್ನು ಹಗುರವಾಗಿ ತೆಗೆದುಕೊಂಡರೆ ಭಾರತಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.

ಸೆಮಿಫೈನಲ್‌ ಸಮೀಕರಣ ಹೀಗಿದೆ

ಈ ಪಂದ್ಯದಲ್ಲಿ ಗೆಲುವು ಭಾರತವನ್ನು ಗ್ರೂಪ್ ಎರಡರಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ಯುತ್ತದೆ. ಆದರೆ ಸೋಲು ಪಾಕಿಸ್ತಾನಕ್ಕೆ ಸೆಮಿಫೈನಲ್ ತಲುಪುವ ದಾರಿಯನ್ನು ತೆರೆಯುತ್ತದೆ. ಪಾಕಿಸ್ತಾನ ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದರೆ, ನಂತರ ಉತ್ತಮ ರನ್ ರೇಟ್ ಆಧಾರದ ಮೇಲೆ ಸೆಮಿಫೈನಲ್​ಗೆ ಲಗ್ಗೆ ಇಡಲಿದೆ.

ಗುಂಪಿನಲ್ಲಿರುವ ಮತ್ತೊಂದು ತಂಡವಾದ ದಕ್ಷಿಣ ಆಫ್ರಿಕಾ ಪ್ರಸ್ತುತ ಐದು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸುತ್ತಿರುವ ಹರಿಣಗಳು ಅವರ ವಿರುದ್ಧ ಗೆದ್ದರೆ ಸುಲಭವಾಗಿ ಸೇಮಿಸ್ ತಲುಪಲಿದ್ದಾರೆ. ಆದರೆ ಒಂದು ವೇಳೆ ಆಫ್ರಿಕಾ ಸೋತು, ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ, ನಂತರ ಪಾಕಿಸ್ತಾನ ಮತ್ತು ಭಾರತ ಸೆಮಿಫೈನಲ್ ತಲುಪುತ್ತವೆ. ಕೊನೆಯ ಗೆಲುವು ಸಾಧಿಸುವುದರೊಂದಿಗೆ ಭಾರತ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದರೆ, ಅವರು ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅಥವಾ ಆಸ್ಟ್ರೇಲಿಯಾವನ್ನು ಎದುರಿಸಲಿದ್ದಾರೆ.

ಹೂಡಾಗೆ ಅವಕಾಶ ಸಿಗುತ್ತಾ?

ಭಾರತ ತಂಡ ಇನ್ನೂ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ದಕ್ಷಿಣ ಆಫ್ರಿಕಾ ತಂಡದಲ್ಲಿ ಹೆಚ್ಚು ಎಡಗೈ ಬ್ಯಾಟರ್ಸ್​ಗಳು ಇದಿದ್ದರಿಂದ ಅಕ್ಷರ್ ಪಟೇಲ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಹೀಗಾಗಿ ಜಿಂಬಾಬ್ವೆಯ ಬ್ಯಾಟಿಂಗ್ ಕ್ರಮಾಂಕದಲ್ಲೂ ಕ್ರೇಗ್ ಎರ್ವಿನ್, ಸೀನ್ ಎರ್ವಿನ್, ರಿಯಾನ್ ಬರ್ಲೆ ಮತ್ತು ಸೀನ್ ವಿಲಿಯಮ್ಸ್ ಅವರಂತಹ ಎಡಗೈ ಬ್ಯಾಟರ್ಸ್​ಗಳು ಇರುವುದರಿಂದ ಈ ಪಂದ್ಯಕ್ಕೆ ದೀಪಕ್ ಹೂಡಾಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆಯಿದೆ.

ಆದಾಗ್ಯೂ, ಇದೀಗ ಅತ್ಯುತ್ತಮ ಫಾರ್ಮ್‌ನಲ್ಲಿರುವ ಪಾಕಿಸ್ತಾನ ಮೂಲದ ಸಿಕಂದರ್ ರಜಾ ಅವರನ್ನು ಕಟ್ಟಿಹಾಕಲು ಹರ್ಷಲ್ ಪಟೇಲ್ ಅವರನ್ನು ಪ್ರಯತ್ನಿಸುವುದು ಮತ್ತೊಂದು ಆಯ್ಕೆಯಾಗಿದೆ. ಅಲ್ಲದೆ ಬೌಲಿಂಗ್ ಆಲ್​ರೌಂಡರ್​ಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಯಜುವೇಂದ್ರ ಚಾಹಲ್​ಗೂ ಇನ್ನು ಕೂಡ ಅವಕಾಶ ಸಿಕ್ಕಿಲ್ಲ. ಆದರೆ ಭಾರತ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಿದರೆ, ಆಂಗ್ಲ ಬ್ಯಾಟ್ಸ್‌ಮನ್‌ಗಳ ವಿರುದ್ಧ ಉತ್ತಮ ದಾಖಲೆ ಹೊಂದಿರುವ ಚಹಾಲ್ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.

ತಂಡಗಳು ಈ ಕೆಳಗಿನಂತಿವೆ:

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್, ರಿಷಬ್ ಪಂತ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್.

ಜಿಂಬಾಬ್ವೆ: ರೆಗಿಸ್ ಚಕಬ್ವಾ (ನಾಯಕ), ಸೀನ್ ವಿಲಿಯಮ್ಸ್, ಸೀನ್ ಎರ್ವಿನ್, ಕ್ರೇಗ್ ಎರ್ವಿನ್, ಸಿಕಂದರ್ ರಜಾ, ಟೆಂಡೈ ಚಾತ್ರಾ, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವೆಸ್ಲಿ ಮಾಧೆವೆರೆ, ವೆಲ್ಲಿಂಗ್ಟನ್ ಮಸಕಡಜ್ಕಾ, ಟೋನಿ ಮುನ್ಯೊಂಗಾ, ರಿಚರ್ಡ್ ನ್ಗರ್ವಾ, ಬ್ಲೆಸ್ಸಿಂಗ್ ಬುರ್ಲರ್ವಾ, ಬ್ಲೆಸ್ಸಿಂಗ್ ಬುರ್ಲರ್ವಾ.

Published On - 3:54 pm, Sat, 5 November 22

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ