India vs Zimbabwe ODI Series: ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ ಪ್ರಕಟ
India vs Zimbabwe Schedule: ಜಿಂಬಾಬ್ವೆ ವಿರುದ್ದ ಭಾರತ ಸರಣಿ ಆಡಿ 6 ವರ್ಷಗಳೇ ಕಳೆದಿವೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿತ್ತು.
ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಸೀಮಿತ ಓವರ್‌ಗಳ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಜಿಂಬಾಬ್ವೆ (India vs Zimbabwe ODI Series) ವಿರುದ್ದ ಸರಣಿ ಆಡಲಿದೆ. ಅಂದರೆ ಏಷ್ಯಾಕಪ್ ಗೂ ಮುನ್ನ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ವಿರುದ್ದ ಸರಣಿ ಆಡಲು ತೆರಳುತ್ತಿದೆ. ಆದರೆ ಈ ಸರಣಿಯಿಂದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವ ನಿರೀಕ್ಷೆಯಿದೆ.
ಈ ಸರಣಿಯು ಐಸಿಸಿ ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದ್ದು, ಹೀಗಾಗಿ ಈ ಪಂದ್ಯಗಳು ಜಿಂಬಾಬ್ವೆ ಪಾಲಿಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಂಬಾಬ್ವೆ ಹೆಚ್ಚಿನ ಅಂಕಗಳನ್ನು ಪಡೆದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50-ಓವರ್‌ಗಳ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಬಹುದು.
ಆರು ವರ್ಷಗಳ ಬಳಿಕ ಭಾರತ-ಜಿಂಬಾಬ್ವೆ ಸರಣಿ: ಜಿಂಬಾಬ್ವೆ ವಿರುದ್ದ ಭಾರತ ಸರಣಿ ಆಡಿ 6 ವರ್ಷಗಳೇ ಕಳೆದಿವೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 6 ವರ್ಷಗಳ ಬಳಿಕ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿರುವುದು ವಿಶೇಷ.
ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ ಹೀಗಿದೆ:
- ಆಗಸ್ಟ್ 18- ಮೊದಲ ಏಕದಿನ ಪಂದ್ಯ
- ಆಗಸ್ಟ್ 20- ಎರಡನೇ ಏಕದಿನ ಪಂದ್ಯ
- ಆಗಸ್ಟ್ 22- ಮೂರನೇ ಏಕದಿನ ಪಂದ್ಯ
ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಇನ್ನು ಸರಣಿಗೂ ಮುನ್ನ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ದ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಿದೆ.
ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:
ಏಕದಿನ ಸರಣಿ ವೇಳಾಪಟ್ಟಿ:
- ಜುಲೈ 22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್ ಓವಲ್)
- ಜುಲೈ 24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್ ಓವಲ್)
- ಜುಲೈ 27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್ ಓವಲ್)
ಟಿ20 ಸರಣಿ ವೇಳಾಪಟ್ಟಿ:
- ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
- ಆಗಸ್ಟ್ 1- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
- ಆಗಸ್ಟ್ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
- ಆಗಸ್ಟ್ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
- ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)