India vs Zimbabwe ODI Series: ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ ಪ್ರಕಟ

| Updated By: ಝಾಹಿರ್ ಯೂಸುಫ್

Updated on: Jul 20, 2022 | 12:09 PM

India vs Zimbabwe Schedule: ಜಿಂಬಾಬ್ವೆ ವಿರುದ್ದ ಭಾರತ ಸರಣಿ ಆಡಿ 6 ವರ್ಷಗಳೇ ಕಳೆದಿವೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿತ್ತು.

India vs Zimbabwe ODI Series: ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ ಪ್ರಕಟ
India vs Zimbabwe,
Follow us on

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಸೀಮಿತ ಓವರ್​ಗಳ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಜಿಂಬಾಬ್ವೆ (India vs Zimbabwe ODI Series) ವಿರುದ್ದ ಸರಣಿ ಆಡಲಿದೆ. ಅಂದರೆ ಏಷ್ಯಾಕಪ್​ ಗೂ ಮುನ್ನ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ವಿರುದ್ದ ಸರಣಿ ಆಡಲು ತೆರಳುತ್ತಿದೆ. ಆದರೆ ಈ ಸರಣಿಯಿಂದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವ ನಿರೀಕ್ಷೆಯಿದೆ.

ಈ ಸರಣಿಯು ಐಸಿಸಿ ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದ್ದು, ಹೀಗಾಗಿ ಈ ಪಂದ್ಯಗಳು ಜಿಂಬಾಬ್ವೆ ಪಾಲಿಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಂಬಾಬ್ವೆ ಹೆಚ್ಚಿನ ಅಂಕಗಳನ್ನು ಪಡೆದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50-ಓವರ್‌ಗಳ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಬಹುದು.

ಆರು ವರ್ಷಗಳ ಬಳಿಕ ಭಾರತ-ಜಿಂಬಾಬ್ವೆ ಸರಣಿ:
ಜಿಂಬಾಬ್ವೆ ವಿರುದ್ದ ಭಾರತ ಸರಣಿ ಆಡಿ 6 ವರ್ಷಗಳೇ ಕಳೆದಿವೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 6 ವರ್ಷಗಳ ಬಳಿಕ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿರುವುದು ವಿಶೇಷ.

ಇದನ್ನೂ ಓದಿ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ ಹೀಗಿದೆ:

  • ಆಗಸ್ಟ್​ 18- ಮೊದಲ ಏಕದಿನ ಪಂದ್ಯ
  • ಆಗಸ್ಟ್ 20- ಎರಡನೇ ಏಕದಿನ ಪಂದ್ಯ
  • ಆಗಸ್ಟ್ 22- ಮೂರನೇ ಏಕದಿನ ಪಂದ್ಯ

ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ಸರಣಿಗೂ ಮುನ್ನ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ದ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಿದೆ.

ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:

ಏಕದಿನ ಸರಣಿ ವೇಳಾಪಟ್ಟಿ:

  • ಜುಲೈ 22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)

ಟಿ20 ಸರಣಿ ವೇಳಾಪಟ್ಟಿ:

  • ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 1​- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
  • ಆಗಸ್ಟ್​ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
  • ಆಗಸ್ಟ್​ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)