India vs Zimbabwe: ಟೀಮ್ ಇಂಡಿಯಾದಲ್ಲಿ RCB ಆಟಗಾರನಿಗೆ ಸಿಕ್ತು ಚೊಚ್ಚಲ ಅವಕಾಶ

India vs Zimbabwe: ಜಿಂಬಾಬ್ವೆ ಸರಣಿಗೆ ಭಾರತ ತಂಡ (India Squad): ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್.

India vs Zimbabwe: ಟೀಮ್ ಇಂಡಿಯಾದಲ್ಲಿ RCB ಆಟಗಾರನಿಗೆ ಸಿಕ್ತು ಚೊಚ್ಚಲ ಅವಕಾಶ
RCB
TV9kannada Web Team

| Edited By: Zahir PY

Aug 16, 2022 | 1:54 PM

ಭಾರತ-ಜಿಂಬಾಬ್ವೆ (India vs Zimbabwe) ನಡುವಣ ಏಕದಿನ ಸರಣಿಯು ಆಗಸ್ಟ್ 18 ರಿಂದ ಶುರುವಾಗಲಿದೆ. 3 ಪಂದ್ಯಗಳ ಏಕದಿನ ಸರಣಿ ಆರಂಭಕ್ಕೂ ಮುನ್ನ ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ (Washington Sudar)​ ತಂಡದಿಂದ ಹೊರಗುಳಿದಿದ್ದಾರೆ. ಇದೀಗ ಸುಂದರ್​ ಬದಲಿಗೆ ಮತ್ತೋರ್ವ ಯುವ ಆಲ್​ರೌಂಡರ್ ಶಹಬಾಜ್ ಅಹ್ಮದ್​ಗೆ (Shahbaz Ahmed) ಸ್ಥಾನ ನೀಡಲಾಗಿದೆ. ಬಂಗಾಳ ಮೂಲದ ಶಹಬಾಜ್ ಐಪಿಎಲ್​ನಲ್ಲಿ ಆರ್​ಸಿಬಿ (RCB) ಪರ ಆಡುತ್ತಿದ್ದಾರೆ. ಇದೀಗ ಭುಜದ ಗಾಯದ ಕಾರಣ ತಂಡದಿಂದ ಹೊರಗುಳಿದಿರುವ ವಾಷಿಂಗ್ಟನ್ ಸುಂದರ್​ ಬದಲಿಗೆ ಯುವ ಆಟಗಾರನಿಗೆ ಆಯ್ಕೆ ಸಮಿತಿ ಮಣೆಹಾಕಿದೆ.

ಇಂಗ್ಲೆಂಡ್ ​ನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್​ಶಿಪ್​ ಪಂದ್ಯದಲ್ಲಿ ಆಡುತ್ತಿದ್ದ ಸುಂದರ್ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅರ್ಧದಲ್ಲೇ ಮೈದಾನವನ್ನು ತೊರೆದಿದ್ದರು. ಇದೀಗ ಅವರಿಗೆ ದೀರ್ಘ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸುಂದರ್ ಬದಲಿಗೆ ಬೇರೊಬ್ಬ ಆಟಗಾರನನ್ನು ಜಿಂಬಾಬ್ವೆಗೆ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ.

ಅದರಂತೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದ ಸ್ಪಿನ್ ಆಲ್​ರೌಂಡರ್ ಶಹಬಾಜ್ ಅಹ್ಮದ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಬಾರಿಯ ರಣಜಿ ಟೂರ್ನಿಯಲ್ಲೂ ಶಹಬಾಜ್ ಉತ್ತಮ ಪ್ರದರ್ಶನ ನೀಡಿದ್ದರು. ಸ್ಪಿನ್ ಬೌಲಿಂಗ್ ಮೂಲಕ ಗಮನ ಸೆಳೆದಿದ್ದ ಯುವ ಆಟಗಾರ ಇದೀಗ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ 29 ಪಂದ್ಯಗಳನ್ನಾಡಿರುವ ಶಹಬಾಜ್ 13 ವಿಕೆಟ್ ಹಾಗೂ 279 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಶಹಬಾಜ್ ಅವರನ್ನು ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್​ಗೆ ಬಳಸಿಕೊಳ್ಳಬಹುದು. ಹೀಗಾಗಿ ವಾಷಿಂಗ್ಟನ್ ಸುಂದರ್​ ಸ್ಥಾನದಲ್ಲಿ ಸ್ಪಿನ್ ಆಲ್​ರೌಂಡರ್​ಗೆ ಚಾನ್ಸ್​ ನೀಡಲಾಗಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಏಕದಿನ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದ್ದು, ಎರಡನೇ ಪಂದ್ಯ ಆಗಸ್ಟ್ 20ರಂದು ನಡೆಯಲಿದೆ. ಮೂರನೇ ಏಕದಿನ ಪಂದ್ಯ ಆಗಸ್ಟ್ 22 ರಂದು ಜರುಗಲಿದೆ. ಈ ಮೂರು ಪಂದ್ಯಗಳು ಹರಾರೆಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ಆರ್​ಸಿಬಿ ಆಟಗಾರನಿಗೆ ಸಿಗಲಿದೆಯಾ ಕಾದು ನೋಡಬೇಕಿದೆ.

ಜಿಂಬಾಬ್ವೆ ಸರಣಿಗೆ ಭಾರತ ತಂಡ (India Squad): ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್, ಶಹಬಾಜ್ ಅಹ್ಮದ್.

ಇದನ್ನೂ ಓದಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada