AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ 92 ರನ್ ಜಯ; ಸರಣಿ ಕ್ಲೀನ್ ಸ್ವೀಪ್ ಮಾಡಿದ ಸ್ಮೃತಿ ಮಂಧಾನ ಪಡೆ

ಭಾರತ ಮಹಿಳಾ ತಂಡ ಜಿಂಬಾಬ್ವೆ ವಿರುದ್ಧದ T20 ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಮೂರನೇ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರ ಅಜೇಯ 91 ರನ್ ಮತ್ತು ಶಫಾಲಿ ವರ್ಮಾ ಅವರ 69 ರನ್‌ಗಳ ನೆರವಿನಿಂದ ಭಾರತ 216 ರನ್ ಗಳಿಸಿತು. ಜಿಂಬಾಬ್ವೆ ತಂಡವನ್ನು 127 ರನ್‌ಗಳಿಗೆ ಕಟ್ಟಿಹಾಕಿ, 92 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಭರ್ಜರಿ ಪ್ರದರ್ಶನದಿಂದ ಭಾರತ ಸರಣಿ ಗೆದ್ದು ಬೀಗಿತು.

ಭಾರತಕ್ಕೆ 92 ರನ್ ಜಯ; ಸರಣಿ ಕ್ಲೀನ್ ಸ್ವೀಪ್ ಮಾಡಿದ ಸ್ಮೃತಿ ಮಂಧಾನ ಪಡೆ
ಭಾರತ ಮಹಿಳಾ ಪಡೆ
ಪೃಥ್ವಿಶಂಕರ
|

Updated on:Oct 20, 2026 | 10:41 PM

Share

ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ಸ್ಮೃತಿ ಮಂಧಾನ ಪಡೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಕಲೆಹಾಕಿತು. ತಂಡದ ಪರ ಮಾಜಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೇವಲ 41 ಎಸೆತಗಳಲ್ಲಿ ಅಜೇಯ 91 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಶಫಾಲಿ ವರ್ಮಾ ಕೂಡ 69 ರನ್​ ಬಾರಿಸಿದರು. ಇತ್ತ ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ ತಂಡ 127 ರನ್ ಕಲೆಹಾಕಲಷ್ಟೇ 92 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತಕ್ಕೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಭಾರತ ತಂಡ ತನ್ನ ಎಂದಿನ ಆರಂಭಿಕ ಜೋಡಿಯೊಂದಿಗೆ ಕಣಕ್ಕಿಳಿಯಲಿಲ್ಲ. ನಾಯಕಿ ಸ್ಮೃತಿ ಮಂಧಾನ ಅವರು 7 ವಿಕೆಟ್‌ಗಳು ಪತನಗೊಂಡರೂ ಬ್ಯಾಟಿಂಗ್‌ಗೆ ಇಳಿಯಲಿಲ್ಲ. ಅನುಷ್ಕಾ ಶರ್ಮಾ ಅವರು ಉಪನಾಯಕಿ ಶೆಫಾಲಿ ವರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದರು. ಅನುಷ್ಕಾ 20 ಎಸೆತಗಳಲ್ಲಿ 28 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ ಕೇವಲ 32 ಎಸೆತಗಳಲ್ಲಿ 54 ರನ್‌ಗಳ ಜೊತೆಯಾಟವಾಡಿದರು.

ಹರ್ಮನ್‌ಪ್ರೀತ್ ಅಬ್ಬರದ ಬ್ಯಾಟಿಂಗ್

ಬಳಿಕ ಕಣಕ್ಕಿಳಿದ ನಿಕಿ ಪ್ರಸಾದ್ ಈ ಪಂದ್ಯದಲ್ಲಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಅವರು 12 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದರು. ನಂತರ ಬ್ಯಾಟಿಂಗ್‌ಗೆ ಬಂದ ಹರ್ಮನ್‌ಪ್ರೀತ್ ಕೌರ್ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದರು. ಮತ್ತೊಂದೆಡೆ, ಶೆಫಾಲಿ ವರ್ಮಾ ಕೂಡ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿದರು. ಹರ್ಮನ್‌ಪ್ರೀತ್ ತಮ್ಮ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್‌ಗಳನ್ನು ಸಿಡಿಸಿದರು. ಇನ್ನು, ಎರಡನೇ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ಶೆಫಾಲಿ ವರ್ಮಾ ಸತತ ಎರಡನೇ ಅರ್ಧಶತಕ ಸಿಡಿಸಿ ಮಿಂಚಿದರು. ಅವರು 37 ಎಸೆತಗಳಲ್ಲಿ 69 ರನ್ ಗಳಿಸಿದ್ದು, ತಮ್ಮ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್‌ಗಳನ್ನು ಬಾರಿಸಿದರು.

ಬೆಲವ್ಡ್ ಬಿಜಾ ಅರ್ಧಶತಕ

217 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ತಂಡ ಕಳಪೆ ಆರಂಭ ಪಡೆಯಿತು. ಭಾರತದ ವೇಗಿ ಕ್ರಾಂತಿ ಗೌಡ್ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಕೆಲ್ಲಿಸ್ ಅವರನ್ನು ಗೋಲ್ಡನ್ ಡಕ್‌ಗೆ ಔಟ್ ಮಾಡಿದರು. ಮುಂದಿನ ಓವರ್‌ನಲ್ಲಿ ನಂದಿನಿ ಶರ್ಮಾ, ಮಾಡೆಸ್ಟರ್ ಮುಪಚಿಕ್ವಾ ಅವರನ್ನು ಒಂದು ರನ್‌ಗೆ ಔಟ್ ಮಾಡಿದರು. ಹೀಗಾಗಿ ಜಿಂಬಾಬ್ವೆ ಕೇವಲ 12 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು. 12 ರನ್​ಗಳಿಗೆ ಎರಡು ವಿಕೆಟ್ ಕಳೆದುಕೊಂಡ ನಂತರ, ಮೇಯರ್ಸ್, ಬೆಲವ್ಡ್ ಬಿಜಾ ಜೊತೆಗೂಡಿ ಇನ್ನಿಂಗ್ಸ್ ಸ್ಥಿರಗೊಳಿಸಿದರು. ಮೂರನೇ ವಿಕೆಟ್​ಗೆ 84 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಇದೇ ವೇಳೆ ಬೆಲವ್ಡ್ ಬಿಜಾ ಕೂಡ ಅರ್ಧಶತಕ ಬಾರಿಸಿ 60 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

ನಾಯಕತ್ವ ತ್ಯಜಿಸಿದ ಬಳಿಕ ಭರ್ಜರಿ ಬ್ಯಾಟಿಂಗ್: 91 ರನ್ ಸಿಡಿಸಿ ಕಣ್ಣೀರಿಟ್ಟ ಹರ್ಮನ್‌ಪ್ರೀತ್ ಕೌರ್!

ನಂದಿನಿ ಶರ್ಮಾ ಮೂರು ವಿಕೆಟ್

ಭಾರತ ಪರ ವೇಗಿ ನಂದಿನಿ ಶರ್ಮಾ ಅದ್ಭುತ ಬೌಲಿಂಗ್ ಮಾಡಿದರು. ಅವರು ನಾಲ್ಕು ಓವರ್‌ಗಳಲ್ಲಿ 18 ರನ್‌ಗಳಿಗೆ ಮೂರು ವಿಕೆಟ್ ಪಡೆದರು. ಕ್ರಾಂತಿ ಗೌಡ್, ಅರುಂಧತಿ ರೆಡ್ಡಿ, ದೀಪ್ತಿ ಶರ್ಮಾ ಮತ್ತು ನಿಕ್ಕಿ ಪ್ರಸಾದ್ ಕೂಡ ತಲಾ ಒಂದು ವಿಕೆಟ್ ಪಡೆದರು. ಅಂತಿಮವಾಗಿ ಜಿಂಬಾಬ್ವೆ 7 ವಿಕೆಟ್‌ಗಳ ನಷ್ಟಕ್ಕೆ 124 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು ಮತ್ತು 92 ರನ್‌ಗಳ ಸೋಲನ್ನು ಅನುಭವಿಸಿತು. ಇದರೊಂದಿಗೆ, ಭಾರತ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Tue, 20 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ