AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಸರಣಿ ಕೈವಶ ಮಾಡಿಕೊಂಡ ಸ್ಮೃತಿ ಪಡೆ

ಭಾರತ ಮಹಿಳಾ ತಂಡ ಜಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಜಿಂಬಾಬ್ವೆ ನೀಡಿದ 103 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಕೇವಲ 8.5 ಓವರ್‌ಗಳಲ್ಲಿ ಗೆಲುವು ಸಾಧಿಸಿತು. ಶಫಾಲಿ ವರ್ಮಾ (55) ಮತ್ತು ಸ್ಮೃತಿ ಮಂಧನಾ (47*) ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ನಿಕಿ ಪ್ರಸಾದ್ 2 ವಿಕೆಟ್ ಪಡೆದು ಮಿಂಚಿದರು. ಮಂಧನಾ ನಾಯಕಿಯಾಗಿ ಮೊದಲ ಸರಣಿ ಗೆಲುವು ಇದು.

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಸರಣಿ ಕೈವಶ ಮಾಡಿಕೊಂಡ ಸ್ಮೃತಿ ಪಡೆ
ಭಾರತ ಮಹಿಳಾ ಪಡೆImage Credit source: BCCI Women X
ಪೃಥ್ವಿಶಂಕರ
|

Updated on:Oct 18, 2026 | 9:46 PM

Share

ಆತಿಥೇಯ ಭಾರತ ಹಾಗೂ ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ 102 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತದ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಹಾಗೂ ನಾಯಕಿ ಸ್ಮೃತಿ ಮಂಧಾನ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 8.5 ಓವರ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.

2 ವಿಕೆಟ್ ಪಡೆದ ಕನ್ನಡತಿ ನಿಕಿ ಪ್ರಸಾದ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಮಹಿಳಾ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿತು. ಚಿಪೊ ಮುಗೆರಿ-ತಿರಿಪಾನೊ 32 ಎಸೆತಗಳಲ್ಲಿ 34 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ನಾಯಕಿ ಜೋಸೆಫಿನ್ ನ್ಕೊಮೊ 35 ಎಸೆತಗಳಲ್ಲಿ 27 ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ಉಳಿದ ಬ್ಯಾಟರ್‌ಗಳಿಂದ ದೊಡ್ಡ ಕೊಡುಗೆ ಬರಲಿಲ್ಲ. ಇತ್ತ ಭಾರತದ ಪರ ಕನ್ನಡತಿ ನಿಕಿ ಪ್ರಸಾದ್ 2 ಓವರ್‌ಗಳಲ್ಲಿ ಕೇವಲ 7 ರನ್ ನೀಡಿ 2 ವಿಕೆಟ್ ಪಡೆದರೆ, ನಂದಿನಿ ಶರ್ಮಾ, ಕ್ರಾಂತಿ ಗೌಡ್, ದೀಪ್ತಿ ಶರ್ಮಾ ಮತ್ತು ಶ್ರೀ ಚರಣಿ ತಲಾ ಒಂದು ವಿಕೆಟ್ ಪಡೆದರು.

ಶಫಾಲಿ ಸ್ಫೋಟಕ ಬ್ಯಾಟಿಂಗ್

ಈ ಗುರಿ ಬೆನ್ನಟ್ಟಿದ ಭಾರತದ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿ ಜಿಂಬಾಬ್ವೆ ಬೌಲರ್‌ಗಳ ಮೇಲೆ ಒತ್ತಡ ಹೇರಿದರು. ಕೇವಲ 25 ಎಸೆತಗಳಲ್ಲಿ 55 ರನ್ ಗಳಿಸುವ ಮೂಲಕ ಭಾರತದ ಗೆಲುವಿಗೆ ಭದ್ರ ಅಡಿಪಾಯ ಹಾಕಿದರು. ಇತ್ತ ನಾಯಕಿ ಸ್ಮೃತಿ ಮಂಧಾನ ತಮ್ಮ ಅನುಭವಕ್ಕೆ ತಕ್ಕಂತೆ ಬ್ಯಾಟ್ ಬೀಸಿದರು. ಶಫಾಲಿ ಔಟಾದ ಬಳಿಕವೂ ರನ್ ಗಳಿಕೆಯ ವೇಗವನ್ನು ಕಡಿಮೆ ಮಾಡದೆ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಭಾರತ- ವಿಂಡೀಸ್ ಕೊನೆಯ ಟಿ20 ಪಂದ್ಯ ಮಳೆಯಿಂದ ರದ್ದು; ಸರಣಿ 2-2 ರ ಡ್ರಾದಲ್ಲಿ ಅಂತ್ಯ

ಸ್ಮೃತಿ ಮಂಧಾನಗೆ ಶುಭಾರಂಭ

ಸ್ಮೃತಿ 25 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಿತ 47 ರನ್ ಬಾರಿಸಿ ಅಜೇಯರಾಗಿ ಉಳಿದರು. ಹಾಗೆಯೇ ಅನುಷ್ಕಾ ಶರ್ಮಾ 4 ಎಸೆತಗಳಲ್ಲಿ 1 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆತಿಥೇಯ ಭಾರತ ಕೇವಲ ಒಂದು ವಿಕೆಟ್ ಕಳೆದುಕೊಂಡು 67 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಈ ಗೆಲುವಿನೊಂದಿಗೆ ಭಾರತ ಮಹಿಳಾ ಪಡೆ ಟಿ20 ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಹಾಗೆಯೇ ಸ್ಮೃತಿ ಮಂಧಾನ ಪೂರ್ಣ ಪ್ರಮಾಣದ ನಾಯಕಿಯಾಗಿ ಸರಣಿ ಗೆಲುವಿನ ಶುಭಾರಂಭ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Sun, 18 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ