Asia Cup 2022: ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಪಂದ್ಯ ಆರಂಭ ಎಷ್ಟು ಗಂಟೆಗೆ ಗೊತ್ತಾ?
India W vs Sri Lanka W T20 Live Streaming: ಲೀಗ್ ಸುತ್ತು ಮತ್ತು ನಾಕೌಟ್ ಪಂದ್ಯಗಳನ್ನು ಒಳಗೊಂಡಂತೆ ಭಾರತ ಏಷ್ಯಾಕಪ್‌ನಲ್ಲಿ ಇದುವರೆಗೆ ಒಟ್ಟು ಏಳು ಪಂದ್ಯಗಳನ್ನು ಆಡಿದೆ. ಈ ಏಳು ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ.
ಈ ಆವೃತ್ತಿಯ ಮಹಿಳಾ ಏಷ್ಯಾಕಪ್ನ (Women’s Asia Cup 2022) ಅಂತಿಮ ಪಂದ್ಯ ಶುಕ್ರವಾರ ಭಾರತ ಮತ್ತು ಶ್ರೀಲಂಕಾ (India and Sri Lanka) ನಡುವೆ ನಡೆಯಲಿದೆ. ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಥಾಯ್ಲೆಂಡ್ ತಂಡವನ್ನು 74 ರನ್‌ಗಳಿಂದ ಸೋಲಿಸಿ ದಾಖಲೆಯ ಎಂಟನೇ ಬಾರಿಗೆ ಏಷ್ಯಾಕಪ್ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿದೆ. 2012 ರ ಮೊದಲು, ಈ ಪಂದ್ಯಾವಳಿ ಏಕದಿನ ಸ್ವರೂಪದಲ್ಲಿ ನಡೆಯುತ್ತಿತ್ತು. ಆ ವೇಳೆ ಟೀಂ ಇಂಡಿಯಾ ಏಕದಿನ ಮತ್ತು ಟಿ20 ಸ್ವರೂಪದಲ್ಲಿ ನಾಲ್ಕು ಬಾರಿ ಫೈನಲ್ ತಲುಪಿತು. ಅದೇ ಸಮಯದಲ್ಲಿ, ಶ್ರೀಲಂಕಾ ತಂಡವು ಮೊದಲ ಬಾರಿಗೆ ಪ್ರಶಸ್ತಿ ಸುತ್ತಿಗೆ ತಲುಪಿದೆ. ಇದುವರೆಗೆ ಭಾರತ ತಂಡ ಆರು ಬಾರಿ ಪ್ರಶಸ್ತಿ ಜಯಿಸಿದ್ದು, ಎರಡೂ ತಂಡಗಳು ಟೂರ್ನಿಯಲ್ಲಿ ಎರಡನೇ ಬಾರಿ ಮುಖಾಮುಖಿಯಾಗಲಿವೆ.
ಲೀಗ್ ಸುತ್ತಿನಲ್ಲಿ ಶ್ರೀಲಂಕಾವನ್ನು ಸೋಲಿಸಿದ್ದ ಭಾರತ
ಲೀಗ್ ಸುತ್ತು ಮತ್ತು ನಾಕೌಟ್ ಪಂದ್ಯಗಳನ್ನು ಒಳಗೊಂಡಂತೆ ಭಾರತ ಏಷ್ಯಾಕಪ್‌ನಲ್ಲಿ ಇದುವರೆಗೆ ಒಟ್ಟು ಏಳು ಪಂದ್ಯಗಳನ್ನು ಆಡಿದೆ. ಈ ಏಳು ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ. ಲೀಗ್ ಸುತ್ತಿನಲ್ಲಿ ಪಾಕಿಸ್ತಾನ ಹರ್ಮನ್ ಪಡೆಯನ್ನು 13 ರನ್‌ಗಳಿಂದ ಸೋಲಿಸಿತ್ತು. ಶ್ರೀಲಂಕಾವನ್ನು ಸೋಲಿಸುವ ಮೂಲಕ ಹರ್ಮನ್ ಪಡೆ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಿತು. ಈ ಪಂದ್ಯದಲ್ಲಿ ಭಾರತದ ಪರ ಜೆಮಿಮಾ ರೋಡ್ರಿಗಸ್ 76 ಮತ್ತು ಹರ್ಮನ್‌ಪ್ರೀತ್ ಕೌರ್ 33 ರನ್ ಗಳಿಸಿದ್ದರು. ಅಂತಿಮವಾಗಿ ಭಾರತ ಆರು ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತ್ತು. ಮತ್ತೊಂದೆಡೆ ಶ್ರೀಲಂಕಾ ಉತ್ತರವಾಗಿ 109 ರನ್ ಗಳಿಸಲಷ್ಟೇ ಶಕ್ತವಾಯಿತು. ಡೈಲನ್ ಹೇಮಲತಾ ಮೂರು, ಪೂಜಾ ವಸ್ತ್ರಕರ್ ಮತ್ತು ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ
ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಫೈನಲ್ ಪಂದ್ಯ ಅಕ್ಟೋಬರ್ 15 ಶನಿವಾರದಂದು ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯವು ಸಿಲ್ಹೆಟ್‌ನಲ್ಲಿರುವ ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಈ ಪಂದ್ಯ ಮಧ್ಯಾಹ್ನ 1:00 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 12:30 ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್ನಲ್ಲಿ?
ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಆಗಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯವು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.