ಒಂದೇ ರನ್‌ಗೆ ಸುಸ್ತಾದ ಗಿಲ್, ಗೋಲ್ಡನ್ ಡಕ್‌ಗೆ ಬಲಿಯಾದ ಕೊಹ್ಲಿ..!
ನ್ಯೂ ಚಂಡೀಗಢದಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತು. ಸರಣಿ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ಶುಭಮನ್ ಗಿಲ್ 1 ರನ್‌ಗೆ, ವಿರಾಟ್ ಕೊಹ್ಲಿ ಗೋಲ್ಡನ್ ಡಕ್‌ಗೆ ಔಟಾದರು. 6 ಓವರ್‌ಗಳ ಬಳಿಕ ಭಾರತ 18/2. ರೋಹಿತ್ ಶರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಮೇಲೆ ಈಗ ತಂಡದ ಜವಾಬ್ದಾರಿಯಿದೆ.

ನ್ಯೂ ಚಂಡೀಗಢದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ಯುವ ನಾಯಕ ಶುಭಮನ್ ಗಿಲ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ದೃಢನಿಶ್ಚಯದಿಂದ ಮೈದಾನಕ್ಕೆ ಇಳಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ಉತ್ತಮ ಆರಂಭ ಪಡೆದುಕೊಂಡಿತ್ತು. ಆದರೆ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 4 ರನ್ ಗಳಿಸುವಲ್ಲಿ ಪ್ರಮುಖ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಕಳಪೆ ಆರಂಭವನ್ನು ಪಡೆದುಕೊಂಡಿದೆ.
ಗಿಲ್ 1ರನ್, ಕೊಹ್ಲಿ ಗೋಲ್ಡನ್ ಡಕ್
ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಆರಂಭದಿಂದಲೇ ಅನಿರೀಕ್ಷಿತ ಆಘಾತ ಎದುರಾಯಿತು. ಮೊದಲ ಪಂದ್ಯದಲ್ಲಿ ಶತಕ ಮತ್ತು ಎರಡನೇ ಹಿಂದಿನ ಪಂದ್ಯದಲ್ಲಿ ಅದ್ಭುತ ದ್ವಿಶತಕ ಬಾರಿಸಿದ್ದ ನಾಯಕ ಶುಭ್ಮನ್ ಗಿಲ್ ಮೂರನೇ ಏಕದಿನ ಪಂದ್ಯದಲ್ಲಿ ಸೀಲ್ಸ್ ಬೌಲಿಂಗ್‌ನಲ್ಲಿ ಕೇವಲ 1 ರನ್ ಗಳಿಸಿ ಔಟಾದರು. ಗಿಲ್ ವಿಕೆಟ್ ಪತನದ ಬಳಿಕ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ ಕೂಡ ಅದೇ ಓವರ್‌ನಲ್ಲಿ ಖಾತೆ ತೆರೆಯದೆ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆಗುವ ಮೂಲಕ ಗೋಲ್ಡನ್ ಡಕ್‌ಗೆ ಬಲಿಯಾದರು.
Golden Duck for Virat Kohli!! Ye kya ho gya 😭#INDvsWI #3rdODI pic.twitter.com/eJDcABEgNj
— Prof. Dhoomketu (@prof_dhoomk2) October 3, 2026
ರೋಹಿತ್ ಮೇಲೆ ಜವಾಬ್ದಾರಿ
ಅದ್ಭುತ ಫಾರ್ಮ್ನಲ್ಲಿದ್ದ ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಪತನವಾಗಿರುವುದು ಭಾರತ ತಂಡವನ್ನು ಕೊಂಚ ಹಿನ್ನಡೆಗೆ ತಳ್ಳಿದೆ. ಇದರ ಪರಿಣಾಮವಾಗಿ ಟೀಂ ಇಂಡಿಯಾ 6 ಓವರ್‌ಗಳ ಅಂತ್ಯಕ್ಕೆ 2 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 18 ರನ್ಗಳನ್ನು ಕಲೆಹಾಕಿದೆ. ತಂಡದ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮೇಲೆ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿಯಿದೆ. ಕೊಹ್ಲಿ ವಿಕೆಟ್ ಪತನದ ಬಳಿಕ ಬಂದಿರುವ ರುತುರಾಜ್ ಗಾಯಕ್ವಾಡ್ಗೆ ಏಕದಿನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ.
2027 ರ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್
ಟಾಸ್ ಗೆದ್ದ ಭಾರತ
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಹಾಗೆಯೇ ತಂಡದ ಪ್ಲೇಯಿಂಗ್ 11 ರಲ್ಲಿ 3 ಬದಲಾವಣೆಗಳನ್ನು ಮಾಡಿತು. ನಿತೀಶ್ ರೆಡ್ಡಿ, ಮೊಹಮ್ಮದ್ ಸಿರಾಜ್ ಮತ್ತು ಅನ್ಶುಲ್ ಕಾಂಬೋಜ್ ಅವರಿಗೆ ಆಡುವ ಅವಕಾಶ ಸಿಕ್ಕಿದೆ. ಇತ್ತ ವೆಸ್ಟ್ ಇಂಡೀಸ್ ಕೂಡ ಪ್ಲೇಯಿಂಗ್ 11 ರಲ್ಲಿ 3 ಬದಲಾವಣೆಗಳನ್ನು ಮಾಡಿದೆ.
ಉಭಯ ತಂಡಗಳು
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅನ್ಶುಲ್ ಕಾಂಬೋಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಗುರ್ನೂರ್ ಬ್ರಾರ್.
ವೆಸ್ಟ್ ಇಂಡೀಸ್: ಜಾನ್ ಕ್ಯಾಂಪ್‌ಬೆಲ್, ಜ್ಯುವೆಲ್ ಆಂಡ್ರ್ಯೂ, ಶೈ ಹೋಪ್, ಅಮೀರ್ ಜಾಂಗೂ, ಶೆರ್ಫೇನ್ ರುದರ್‌ಫೋರ್ಡ್, ಕೀಮೊ ಪಾಲ್, ಮ್ಯಾಥ್ಯೂ ಫೋರ್ಡ್, ಅಲ್ಜಾರಿ ಜೋಸೆಫ್, ಗುಡಕೇಶ್ ಮೋತಿ, ಜೇಡೆನ್ ಸೀಲ್ಸ್, ವಿಟೆಲ್ ಆರ್ಲ್ಯಾಂಡೊ ಲಾಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:45 pm, Sat, 3 October 26




