ಭಾರತ ಹಾಗೂ ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವೆ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆತಿಥೇಯ ಭಾರತ ವನಿತಾ ಪಡೆ 2-1 ಅಂತರದಿಂದ ಗೆದ್ದುಕೊಂಡಿತ್ತು. ಈ ಮೂಲಕ ತವರಿನಲ್ಲಿ ಐದು ವರ್ಷಗಳ ಬಳಿಕ ಟಿ20 ಸರಣಿ ಗೆದ್ದ ಸಾಧನೆಯನ್ನು ಟೀಂ ಇಂಡಿಯಾ ಮಾಡಿತ್ತು. ಇದೀಗ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಮೂರು ಪಂದ್ಯಗಳಿಗೂ ಬರೋಡಾದಲ್ಲಿ ಹೊಸದಾಗಿ ನಿರ್ಮಿಸಲಾದ ಕೊಟಂಬಿ ಕ್ರೀಡಾಂಗಣ ಆತಿಥ್ಯವಹಿಸಲಿದೆ.
ವಾಸ್ತವವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಉಳಿದೆರಡು ಪಂದ್ಯಗಳಲ್ಲಿ ಆಡಿರಲಿಲ್ಲ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಸ್ಮೃತಿ ಮಂದಾನ ತಂಡದ ನಾಯಕತ್ವವಹಿಸಿಕೊಂಡು ತಂಡವನ್ನು ಚಾಂಪಿಯನ್ ಮಾಡಿದ್ದರು. ಆದರೀಗ ಏಕದಿನ ಸರಣಿ ವೇಳೆಗೆ ಹರ್ಮನ್‌ಪ್ರೀತ್ ಕೌರ್ ಚೇತರಿಸಿಕೊಂಡಿದ್ದು, ಅವರೇ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಒಂದು ವೇಳೆ ಹರ್ಮನ್‌ಪ್ರೀತ್ ಗಾಯದಿಂದ ಚೇತರಿಸಿಕೊಳ್ಳದಿದ್ದರೆ, ಸ್ಮೃತಿ ಮತ್ತೊಮ್ಮೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಹೇಲಿ ಮ್ಯಾಥ್ಯೂಸ್ ವಿಂಡೀಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಭಾರತ vs ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಭಾನುವಾರ ಡಿಸೆಂಬರ್ 22 ರಂದು ನಡೆಯಲಿದೆ.
ಭಾರತ vs ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಬರೋಡಾದ ಕೊಂಟ್ಬಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ vs ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಟಾಸ್ 1 ಗಂಟೆಗೆ ನಡೆಯಲಿದೆ.
ಭಾರತ vs ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಸ್ಪೋರ್ಟ್ಸ್ 18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದೆ.
ಭಾರತ vs ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಮೊಬೈಲ್‌ನಲ್ಲಿ Jio ಸಿನಿಮಾ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.
ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ಸ್ಮೃತಿ ಮಂಧಾನ, ಉಮಾ ಚೆಟ್ರಿ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ಸೈಮಾ ಠಾಕೋರ್, ಟೈಟಾಸ್ ಸಾಧು, ರೇಣುಕಾ ಠಾಕೂರ್ ಸಿಂಗ್, ಪ್ರಿಯಾ ಮಿಶ್ರಾ, ತನುಜಾ ಕನ್ವರ್, ಮಿನ್ನು ಮಣಿ, ತೇಜಲ್ ಹಸ್ಬಾನಿಸ್ ಮತ್ತು ಹರ್ಲಿನ್ ಡಿಯೋಲ್.
ವೆಸ್ಟ್ ಇಂಡೀಸ್ ಮಹಿಳಾ ತಂಡ: ಹೇಲಿ ಮ್ಯಾಥ್ಯೂಸ್ (ನಾಯಕಿ), ಶೆಮೈನ್ ಕ್ಯಾಂಪ್‌ಬೆಲ್ಲೆ, ಆಲಿಯಾ ಅಲ್ಲೆನೆ, ಶಾಮಿಲಿಯಾ ಕೊನ್ನೆಲ್, ನೆರಿಸ್ಸಾ ಕ್ರಾಫ್ಟನ್, ಡಿಯಾಂಡ್ರಾ ಡಾಟಿನ್, ಅಫಿ ಫ್ಲೆಚರ್, ಶಬಿಕಾ ಗಜ್ನಬಿ, ಚಿನೆಲ್ಲೆ ಹೆನ್ರಿ, ಜೈದಾ ಜೇಮ್ಸ್, ಕಿಯಾನಾ ಜೋಸೆಫ್, ಮ್ಯಾಂಡಿ ಮಾಂಗ್ರು, ಅಶ್ಮಿನಿ ಮುನಿಸರ್, ಕರಿಷ್ಮಾ ರಾಮ್ಹರಾಕ್, ರಶಾದಾ ವಿಲಿಯಮ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ