IND vs PAK: ಏಷ್ಯಾಕಪ್​ನಲ್ಲಿಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ: ಕೊಹ್ಲಿ ಮೇಲೆ ಎಲ್ಲರ ಕಣ್ಣು

Asia Cup 2022: ಏಷ್ಯಾಕಪ್ 2022ರ ಸೂಪರ್ 4 ಹಂತದಲ್ಲಿ ಇಂದು ಎರಡನೇ ಪಂದ್ಯ ಆಯೋಜಿಸಲಾಗಿದ್ದು ಕ್ರಿಕೆಟ್ ಲೋಕದ ಬದ್ದವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡ ಮುಖಾಮುಖಿ ಆಗಲಿದೆ.

IND vs PAK: ಏಷ್ಯಾಕಪ್​ನಲ್ಲಿಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ: ಕೊಹ್ಲಿ ಮೇಲೆ ಎಲ್ಲರ ಕಣ್ಣು
IND vs PAK Asia Cup 2022
Follow us
TV9 Web
| Updated By: Vinay Bhat

Updated on: Sep 04, 2022 | 7:33 AM

ಏಷ್ಯಾಕಪ್ 2022ರಲ್ಲಿ (Asia Cup 2022) ಸೂಪರ್ 4 ಹಂತದ ಪಂದ್ಯಗಳು ಆರಂಭವಾಗಿದ್ದು ಶನಿವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಶ್ರೀಲಂಕಾ ತಂಡ 4 ವಿಕೆಟ್​ ಗಳ ಭರ್ಜರಿ ಜಯ ಸಾಧಿಸಿದೆ. ಇಂದು ಎರಡನೇ ಪಂದ್ಯ ಆಯೋಜಿಸಲಾಗಿದ್ದು ಕ್ರಿಕೆಟ್ ಲೋಕದ ಬದ್ದವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡ ಮುಖಾಮುಖಿ ಆಗಲಿದೆ. ಈ ಬಾರಿಯ ಏಷ್ಯಾಕಪ್​ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಅಮೋಘ ಗೆಲುವು ಕಂಡಿರುವ ಟೀಮ್ ಇಂಡಿಯಾ (Team India) ಜಯದ ನಾಗಾಲೋಟವನ್ನು ಮುಂದುವರೆಸುವ ತವಕದಲ್ಲಿದೆ. ಇತ್ತ ಲೀಗ್ ಹಂತದಲ್ಲಿ ಭಾರತ ವಿರುದ್ಧ ಸೋತ ಪಾಕಿಸ್ತಾನ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ. ಹೀಗಾಗಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಲೀಗ್ ಹಂತದ ಪಂದ್ಯಗಳಲ್ಲಿ ಭಾರತಪಾಕ್ ಮುಖಾಮುಖಿ ಆಗಿತ್ತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ- ರವೀಂದ್ರ ಜಡೇಜಾ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಕಳೆದ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ಪಾಂಡ್ಯ ಇಂದು ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ. ರವೀಂದ್ರ ಜಡೇಜಾ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇವರ ಬದಲು ಅಕ್ಷರ್ ಪಟೇಲ್​ಗೆ ಸ್ಥಾನ ನೀಡಲಾಗಿದೆ. ಆದರೆ, ಇವರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

ನಾಯಕ ರೋಹಿತ್ ಶರ್ಮಾ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಕೂಡ ಫಾರ್ಮ್​ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಆದರೆ, ಕೆಎಲ್ ರಾಹುಲ್ ಬ್ಯಾಟ್ ಸದ್ದು ಮಾಡುತ್ತಿಲ್ಲ. ಏಷ್ಯಾಕಪ್ ಆರಂಭಕ್ಕೂ ಮುನ್ನ ನಡೆದ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲೂ ರಾಹುಲ್ ವೈಫಲ್ಯ ಅನುಭವಿಸಿದ್ದರು. ಇದೀಗ ಆಡಿದ ಎರಡೂ ಪಂದ್ಯಗಳಲ್ಲಿ ಕನ್ನಡಿಗನ ಪ್ರದರ್ಶನ ತೀರಾ ಕಳಪೆಯಾಗಿದೆ. ಹೀಗಾಗಿ ಕೆಎಲ್​ಗೆ ಅವಕಾಶ ಸಿಕ್ಕರೆ ಇಂದಿನ ಪಂದ್ಯ ಅಗ್ನಿಪರೀಕ್ಷೆ ಎನ್ನಬಹುದು.

ಇದನ್ನೂ ಓದಿ
Image
India Playing XI: 2 ಬದಲಾವಣೆ ಖಚಿತ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Image
IND vs PAK: ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ಬಿಗ್ ಶಾಕ್..!
Image
India vs Pakistan: ಭಾರತ-ಪಾಕ್ ನಡುವಣ ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ
Image
IND vs PAK: ರವೀಂದ್ರ ಜಡೇಜಾ ಔಟ್: ಪ್ಲೇಯಿಂಗ್ 11 ನಲ್ಲಿ ಮೂವರಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​..?

ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗಲೇಬೇಕಿದೆ. ವೇಗಿಗಳ ಪೈಕಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಬಿಟ್ಟರೆ ಮತ್ಯಾರು ಮಾರಕ ದಾಳಿ ಸಂಘಟಿಸುತ್ತಿಲ್ಲ. ಅರ್ಶ್​​ದೀಪ್ ಸಿಂಗ್ ಹಾಗೂ ಆವೇಶ್ ಖಾನ್ ದುಬಾರಿಯಾಗುತ್ತಿದ್ದಾರೆ. ವಿಕೆಟ್ ಕೂಡ ಪಡೆದುಕೊಳ್ಳುತ್ತಿಲ್ಲ. ಯುಜ್ವೇಂದ್ರ ಚಹಲ್ ರನ್ ಹರಿ ಬಿಡದಿದ್ದರೂ ವಿಕೆಟ್ ಪಡೆಯಲು ವಿಫಲರಾಗುತ್ತಿದ್ದಾರೆ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಇತ್ತ ಪಾಕಿಸ್ತಾನ ಕಳೆದ ಪಂದ್ಯದಲ್ಲಿ ಹಾಂಗ್ ಕಾಂಗ್ ವಿರುದ್ಧ ಗೆದ್ದು ಭರ್ಜರಿ ಫಾರ್ಮ್​ಗೆ ಮರಳಿದೆ. ಬಾಬರ್ ಅಜಮ್ ಬ್ಯಾಟ್​ನಿಂದ ರನ್ ಬರುತ್ತಿಲ್ಲವಾದರೂ ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಕುಶ್ದಿಲ್ ಶಾ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಬೌಲಿಂಗ್​ನಲ್ಲೂ ಪಾಕ್ ಮಾರಕವಾಗಿದೆ. ಹಾಂಗ್ ಕಾಂಗ್ ತಂಡವನ್ನು ಕೇವಲ 38 ರನ್​ಗೆ ಆಲೌಟ್ ಮಾಡಿತ್ತು. ನಸೀಂ ಶಾ, ಶದಬ್ ಖಾನ್ ಹಾಗೂ ಮೊಹಮ್ಮದ್ ನವಾಜ್ ಪ್ರಮುಖ ವಿಕೆಟ್ ಟೇಕರ್ ಬೌಲರ್​ಗಳಾಗಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ. ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಹಾಟ್‌ ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದ ಪಿಚ್‌ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ. ಪಂದ್ಯ ಸಾಗುತ್ತಿದ್ದಂತೆ ಬ್ಯಾಟಿಂಗ್ ಸ್ವಲ್ಪ ಸುಲಭವಾಗುತ್ತದೆ. ಈ ಪಿಚ್​ನಲ್ಲಿ ನಿಧಾನಗತಿಯ ಬೌಲರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ ಇತಿಹಾಸವಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಪಾಕಿಸ್ತಾನ ತಂಡ: ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ನಸೀಮ್ ಶಾ, ಹಸನ್ ಅಲಿ, ಶಾನವಾಜ್ ದಹಾನಿ ಮತ್ತು ಉಸ್ಮಾನ್ ಖಾದಿರ್.

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?