Big news: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ತಂಡಗಳನ್ನು ಎದುರಿಸಲಿದೆ ಟೀಂ ಇಂಡಿಯಾ..!
T20 World Cup 2022: ಐಸಿಸಿ ಟಿ20 ವಿಶ್ವಕಪ್‌ನ ಮೊದಲ ಸುತ್ತಿನ ಪಂದ್ಯ ಅಕ್ಟೋಬರ್ 22 ರಿಂದ ಪ್ರಾರಂಭವಾಗಲಿದ್ದು, ಭಾರತ ತಂಡ ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಐಸಿಸಿ ಟಿ20 ವಿಶ್ವಕಪ್‌ನ (ICC T20 World Cup) ಮೊದಲ ಸುತ್ತಿನ ಪಂದ್ಯ ಅಕ್ಟೋಬರ್ 22 ರಿಂದ ಪ್ರಾರಂಭವಾಗಲಿದ್ದು, ಭಾರತ ತಂಡ ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ (Team India) ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಎದುರಿಸಲಿದೆ. ಅಕ್ಟೋಬರ್ 10 ರಿಂದ ಪ್ರಾರಂಭವಾಗಲಿರುವ T20 ವಿಶ್ವಕಪ್ 2022 ರ ಅಭ್ಯಾಸ ಪಂದ್ಯಗಳ ವೇಳಾಪಟ್ಟಿಯನ್ನು ICC ಪ್ರಕಟಿಸಿದ್ದು, ಟೀಂ ಇಂಡಿಯಾ ಪಂದ್ಯಾವಳಿಯ ಆರಂಭದ ಮೊದಲು ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ತಂಡ ಅಕ್ಟೋಬರ್ 17 ರಂದು ಆಸ್ಟ್ರೇಲಿಯಾವನ್ನು ಎದುರಿಸಿದರೆ, ಅಕ್ಟೋಬರ್ 19 ರಂದು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಈ ಎರಡೂ ಪಂದ್ಯಗಳು ಗಬ್ಬಾದಲ್ಲಿ ನಡೆಯಲಿವೆ.
T20 ವಿಶ್ವಕಪ್ 2022 ಅಭ್ಯಾಸ ಪಂದ್ಯಗಳ ವೇಳಾಪಟ್ಟಿ
10 ಅಕ್ಟೋಬರ್: ವೆಸ್ಟ್ ಇಂಡೀಸ್ vs ಯುಎಇ, ಸ್ಕಾಟ್ಲೆಂಡ್ vs ನೆದರ್ಲ್ಯಾಂಡ್ಸ್, ಶ್ರೀಲಂಕಾ vs ಜಿಂಬಾಬ್ವೆ.
11 ಅಕ್ಟೋಬರ್: ನಮೀಬಿಯಾ vs ಐರ್ಲೆಂಡ್
12 ಅಕ್ಟೋಬರ್: ವೆಸ್ಟ್ ಇಂಡೀಸ್ vs ನೆದರ್ಲ್ಯಾಂಡ್ಸ್
13 ಅಕ್ಟೋಬರ್: ಜಿಂಬಾಬ್ವೆ vs ನಮೀಬಿಯಾ, ಶ್ರೀಲಂಕಾ vs ಐರ್ಲೆಂಡ್, ಸ್ಕಾಟ್ಲೆಂಡ್ vs ಯುಎಇ
17 ಅಕ್ಟೋಬರ್: ಆಸ್ಟ್ರೇಲಿಯಾ vs ಭಾರತ, ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ vs ಪಾಕಿಸ್ತಾನ, ಅಫ್ಘಾನಿಸ್ತಾನ vs ಬಾಂಗ್ಲಾದೇಶ
19 ಅಕ್ಟೋಬರ್: ಅಫ್ಘಾನಿಸ್ತಾನ vs ಪಾಕಿಸ್ತಾನ, ಬಾಂಗ್ಲಾದೇಶ vs ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ vs ಭಾರತ
? Mark your calendars!
The schedule of the warm-up fixtures for the ICC Men’s #T20WorldCup 2022 is now out ?https://t.co/r4e0o8U71i
— T20 World Cup (@T20WorldCup) September 8, 2022
ಆಸ್ಟ್ರೇಲಿಯಾ- ಆಫ್ರಿಕಾ ವಿರುದ್ಧ ಸರಣಿ
ಟೀಂ ಇಂಡಿಯಾ ಪ್ರಸ್ತುತ ಏಷ್ಯಾಕಪ್‌ನಲ್ಲಿ ಆಡುತ್ತಿದ್ದು, ಸೂಪರ್-4 ರ ಘಟ್ಟದಲ್ಲಿ ಎರಡು ಪಂದ್ಯಗಳನ್ನು ಸೋತು ಅಂತಿಮ ರೇಸ್‌ನಿಂದ ಹೊರಬಿದ್ದಿದೆ. ಆದಾಗ್ಯೂ, ಭಾರತ ಅಫ್ಘಾನಿಸ್ತಾನ ವಿರುದ್ಧ ಔಪಚಾರಿಕ ಪಂದ್ಯವನ್ನು ಆಡುವುದು ಬಾಕಿ ಉಳಿದಿದೆ. ಆದರೆ, ಇದರ ನಂತರ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾವನ್ನು ತವರಿನಲ್ಲಿ ಎದುರಿಸಬೇಕಾಗಿದೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಇನ್ನೂ 6 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಿದೆ. ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯು ಸೆಪ್ಟೆಂಬರ್ 20 ರಿಂದ ಪ್ರಾರಂಭವಾಗಲಿದೆ. ಈ ಸರಣಿ ಮುಗಿದ ಬಳಿಕ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನೂ ಆಡಲಿದೆ. ಈ ಸರಣಿ ಸೆಪ್ಟೆಂಬರ್ 28 ರಿಂದ ಪ್ರಾರಂಭವಾಗಲಿವೆ.
Published On - 3:02 pm, Thu, 8 September 22