ಭಾರತ ಮತ್ತು ಪಾಕಿಸ್ತಾನ (India vs Pakistan) ಶನಿವಾರ (ಅಕ್ಟೋಬರ್ 14) ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ರ ತಮ್ಮ ಮೂರನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನವು ಒಂದು ದಶಕಕ್ಕೂ ಹೆಚ್ಚು ಕಾಲ ಭಾರತದ ನೆಲದಲ್ಲಿ ಪರಸ್ಪರ ಏಕದಿನ ಪಂದ್ಯವನ್ನು ಆಡಿಲ್ಲ, ಆದ್ದರಿಂದ ಶನಿವಾರದ ಪಂದ್ಯದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಈ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?. ಇಲ್ಲಿದೆ ನೋಡಿ ಅಹ್ಮದಾಬಾದ್ ಹವಾಮಾನ ವರದಿ.
ಅಹ್ಮದಾಬಾದ್ನಲ್ಲಿ ನಡೆಯಲಿರುವ ಪಂದ್ಯದ ಮೂಲಕ ಈ ವರ್ಷದಲ್ಲಿ ಭಾರತ-ಪಾಕ್ ತಂಡಗಳು ಏಕದಿನದಲ್ಲಿ ಮೂರನೇ ಬಾರಿ ಮುಖಾಮುಖಿಯಾಗುತ್ತಿದೆ. ಶ್ರೀಲಂಕಾದಲ್ಲಿ ನಡೆದ ಏಷ್ಯಾಕಪ್ 2023 ರ ಸಂದರ್ಭದಲ್ಲಿ ಎರಡು ಬಾರಿ ಸೆಣೆಸಾಟ ನಡೆಸಿದ್ದವು. ಆದರೆ ಈ ಎರಡೂ ಪಂದ್ಯಗಳಿಗೆ ಮಳೆ ಅಡ್ಡಿಯಾಯಿತು. ಆದಾಗ್ಯೂ, ಶನಿವಾರ (ಅಕ್ಟೋಬರ್ 14) ಅಹ್ಮದಾಬಾದ್ನಲ್ಲಿ ಮಳೆಯಾಗುವ ಸಾಧ್ಯತೆಗಳು ಬಹುತೇಕ ಕಡಿಮೆ.
ಭಾರತ- ಪಾಕ್ ಪಂದ್ಯ ನಡೆಯುತ್ತಿರುವ ಮೋದಿ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ?
ಅಕ್ಯುವೆದರ್ ವರದಿಯ ಪ್ರಕಾರ, ಅಹ್ಮದಾಬಾದ್ನಲ್ಲಿ ಹಗಲಿನಲ್ಲಿ ಶೇ. 14 ರಷ್ಟು ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿ ಶೂನ್ಯ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 1:30 ಕ್ಕೆ ನಡೆಯಲಿದೆ. ಇದಕ್ಕೂ ಒಂದು ಗಂಟೆ ಮೊದಲು ಅಂದರೆ 12.30ಕ್ಕೆ ಮನೋರಂಜನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಪ್ರೇಕ್ಷಕರಿಗಾಗಿ ಕ್ರೀಡಾಂಗಣದ ಗೇಟ್‌ಗಳು ತೆರೆಯಲಿದೆ.
ಅಹ್ಮದಾಬಾದ್ನಲ್ಲಿ ಬೆಳಿಗ್ಗೆ 10 ರ ಸುಮಾರಿಗೆ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಇರುತ್ತದೆ. 45ರಷ್ಟು ಆರ್ದ್ರತೆ ಇರಲಿದ್ದು, ಗಂಟೆಗೆ 5 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಈ ವೇಳೆ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಆರ್ದ್ರತೆ ಶೇ. 58ರಷ್ಟಿರುವುದು ಅಭಿಮಾನಿಗಳಿಗೆ ಸಂತಸದ ಸುದ್ದಿ. ಹವಾಮಾನವು ನಂತರದಲ್ಲಿ ತಂಪಾಗಿರುತ್ತದೆ. ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಪರಿಸ್ಥಿತಿಗಳನ್ನು ಹೆಚ್ಚಿಸಲು ಇಬ್ಬನಿ ಅಂಶವು ಸಹ ಸಹಾಯ ಮಾಡುತ್ತದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ