AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಟಿ20 ವಿಶ್ವಕಪ್​ನಲ್ಲಿಂದು ಭಾರತ-ನೆದರ್​ಲೆಂಡ್ಸ್ ಮುಖಾಮುಖಿ: ರೋಹಿತ್ ಪಡೆಯಲ್ಲಿ ಏನು ಬದಲಾವಣೆ?

India vs Netherlands, T20 World Cup: ಇಂದು ಸಿಡ್ನಿಯ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ತನ್ನ ದ್ವಿತೀಯ ಪಂದ್ಯವನ್ನು ಆಡಲಿದೆ. ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ರೋಹಿತ್ ಪಡೆ ಈ ಮ್ಯಾಚ್ ಅನ್ನೂ ಜಯಿಸುವ ಯೋಜನೆಯಲ್ಲಿದೆ.

IND vs NED: ಟಿ20 ವಿಶ್ವಕಪ್​ನಲ್ಲಿಂದು ಭಾರತ-ನೆದರ್​ಲೆಂಡ್ಸ್ ಮುಖಾಮುಖಿ: ರೋಹಿತ್ ಪಡೆಯಲ್ಲಿ ಏನು ಬದಲಾವಣೆ?
IND vs NED
TV9 Web
| Updated By: Vinay Bhat|

Updated on:Oct 27, 2022 | 10:09 AM

Share

ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಶುಭಾರಂಭ ಮಾಡಿದ ಭಾರತ ಕ್ರಿಕೆಟ್ ತಂಡ ಇದೀಗ ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಇಂದು ಸಿಡ್ನಿಯ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ (India vs Netherlands) ವಿರುದ್ಧ ತನ್ನ ದ್ವಿತೀಯ ಪಂದ್ಯವನ್ನು ಆಡಲಿದೆ. ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ರೋಹಿತ್ (Rohit Sharma) ಪಡೆ ಈ ಮ್ಯಾಚ್ ಅನ್ನೂ ಜಯಿಸುವ ಯೋಜನೆಯಲ್ಲಿದೆ. ಅತ್ತ ನೆದರ್​ಲೆಂಡ್ಸ್ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವಿನ ಅಂಚಿನಲ್ಲಿ ಎಡವಿತ್ತು. ಸೋತ ಪರಿಣಾಮ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಉಭಯ ತಂಡಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ.

ಈಗಾಗಲೇ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಟೀಮ್ ಇಂಡಿಯಾ ಹಾಗೂ ನೆದರ್​ಲೆಂಡ್ಸ್ ತಂಡದ ಆಟಗಾರರು ಭರ್ಜರಿ ಅಭ್ಯಾಸ ಮಾಡುತ್ತಿದ್ದಾರೆ. ಮೆಲ್ಬೋರ್ನ್​ಗೆ ಹೋಲಿಸಿದರೆ ಸಿಡ್ನಿ ಪಿಚ್ ವಿಶೇಷವಾಗಿದೆ. ಇದುಕೂಡ ದೊಡ್ಡ ಮೈದಾನ ಆಗಿರುವುದರಿಂದ 160+ ರನ್ ಕಲೆಹಾಕುವುದು ಸುಲಭವಲ್ಲ. ಹೀಗಾಗಿ ಇದುಕೂಡ ಲೋ ಸ್ಕೋರ್​ನ ಹೈವೋಲ್ಟೇಜ್ ಪಂದ್ಯ ಆಗುವ ನಿರೀಕ್ಷೆಯಿದೆ.

ನೆದರ್​ಲೆಂಡ್ಸ್ ಭಾರತಕ್ಕೆ ಹೋಲಿಸಿದರೆ ದುರ್ಬಲ ಎಂದು ಹೇಳಬಹುದು. ಆದರೆ, ಬಾಂಗ್ಲಾದೇಶದ ವಿರುದ್ಧ ಅವರು ಯಾವ ರೀತಿ ಆಡಿದರು ಎನ್ನುವುದನ್ನು ಗಮನಿಸ ಬೇಕಿದೆ. ಯಾವುದೇ ತಂಡವನ್ನು ಹಗುರವಾಗಿ ಪರಿಣಿಸಲು ಸಾಧ್ಯವಿಲ್ಲದ ಕಾರಣ, ಭಾರತವು ಇನ್ನೂ ಜಾಗರೂಕತೆಯಿಂದ ಕೂಡಿರಬೇಕು. ಸೆಮಿಫೈನಲ್‌ಗೆ ಪೈಪೋಟಿ ಬಿಗಿಯಾಗಿರುವುದರಿಂದ, ನೆದರ್​ಲೆಂಡ್ಸ್ ವಿರುದ್ಧ ಹೆಚ್ಚಿನ ಅಂತರದಲ್ಲಿ ಗೆಲ್ಲುವ ಮೂಲಕ ರನ್‌ರೇಟ್‌ ಉತ್ತಮಪಡಿಸಿಕೊಳ್ಳ ಬೇಕಿದೆ.

ಇದನ್ನೂ ಓದಿ
Image
T20 World Cup 2022: ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ
Image
India vs Netherlands: ನೆದರ್​ಲ್ಯಾಂಡ್ಸ್​ ವಿರುದ್ಧದ ಪಂದ್ಯ ಟೀಮ್ ಇಂಡಿಯಾಗೆ ಏಕೆ ಬಹಳ ಮುಖ್ಯ? ಇಲ್ಲಿದೆ 4 ಕಾರಣಗಳು
Image
Team India: ಪ್ಲ್ಯಾನ್ ಬದಲಾವಣೆ: ಟೀಮ್ ಇಂಡಿಯಾದ ಯಾರಿಗೂ ​ವಿಶ್ರಾಂತಿ ಇಲ್ಲ
Image
VIDEO: ಇವರಿಗೆ ಕಾಶ್ಮೀರ ಬೇಕಂತೆ…ಉಲ್ಟಾ ಧ್ವಜ ಹಿಡಿದ ಪಾಕ್ ಫ್ಯಾನ್​​ನ ಟ್ರೋಲ್ ಮಾಡಿದ ಭಾರತೀಯ

ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಣೆ ಕಾಣಬೇಕಿದೆ. ಓಪನರ್​ಗಳಾದ ಕೆಎಲ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಸೂರ್ಯಕುಮಾರ್ ಯಾದವ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ. ಕೊಹ್ಲಿ ಹಾರ್ದಿಕ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಕೊಡುಗೆ ತಂಡಕ್ಕೆ ಇನ್ನೂ ಬೇಕಾಗಿದೆ. ಬೌಲಿಂಗ್ ವಿಭಾಗದಲ್ಲಿ ಕೂಡ ಭಾರತ ಬಿಗಿಯಾಗಬೇಕಿದೆ. ಯುಜ್ವೇಂದ್ರ ಚಹಲ್, ಹರ್ಷಲ್ ಪಟೇಲ್, ರಿಷಭ್ ಪಂತ್, ದೀಪಕ್ ಹೂಡ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ.

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ. 12 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯದ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ TV9Kannada.com ನಲ್ಲಿ ಈ ಪಂದ್ಯದ ಲೈವ್ ನವೀಕರಣಗಳನ್ನು ಸಹ ಓದಬಹುದು.

ಸಂಭಾವ್ಯ ತಂಡ:

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್/ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ನೆದರ್​ಲೆಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಓಡೌಡ್, ವಿಕ್ರಮಜಿತ್ ಸಿಂಗ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಟಿಮ್ ಪ್ರಿಂಗಲ್, ಪಾಲ್ ವ್ಯಾನ್ ಮೀಕೆರೆನ್, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್, ಶರೀಜ್ ಅಹ್ಮದ್.

Published On - 7:51 am, Thu, 27 October 22

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್