IND vs SL: ಇಂದಿನಿಂದ ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಪಿಂಕ್ ಬಾಲ್ ಕದನಕ್ಕೆ ಸಜ್ಜಾದ ಚಿನ್ನಸ್ವಾಮಿ

India vs Sri Lanka 2nd Test: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ (Pink Ball Test) ಪ್ರಾರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್​ಫುಲ್ ಕ್ರೀಡಾಂಗಣದಲ್ಲಿ ಹಗಲು – ರಾತ್ರಿ ಕದನ ನಡೆಯಲಿದೆ.

IND vs SL: ಇಂದಿನಿಂದ ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಪಿಂಕ್ ಬಾಲ್ ಕದನಕ್ಕೆ ಸಜ್ಜಾದ ಚಿನ್ನಸ್ವಾಮಿ
IND vs SL
Follow us
TV9 Web
| Updated By: Vinay Bhat

Updated on: Mar 12, 2022 | 8:32 AM

ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 222 ರನ್​ಗಳ ಅಮೋಘ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs Sri Lanka 2nd Test) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ (Pink Ball Test) ಪ್ರಾರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್​ಫುಲ್ ಕ್ರೀಡಾಂಗಣದಲ್ಲಿ ಹಗಲು – ರಾತ್ರಿ ಕದನ ನಡೆಯಲಿದೆ. ನಾಯಕನಾದ ಬಳಿಕ ಗೆಲುವಿನ ಸರಮಾಲೆಯನ್ನೆ ಹೊತ್ತಿರುವ ರೋಹಿತ್ ಶರ್ಮಾ (Rohit Sharma) ಈ ಪಂದ್ಯವನ್ನೂ ಗೆದ್ದು ತಮ್ಮ ಖಾತೆಗೆ ಮತ್ತೊಂದು ದಾಖಲೆ ಸೇರ್ಪಡೆಗೊಳಿಸುತ್ತಾರ ಎಂಬ ಕುತೂಹಲ ಮೂಡಿಸಿದೆ. ಇತ್ತ ಶ್ರೀಲಂಕಾ ತಂಡ ಈ ಪಂದ್ಯವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳುವ ಪ್ಲಾನ್​ನಲ್ಲಿದೆ.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಕೆಲ ಬದಲಾವಣೆ ನಿರೀಕ್ಷಿಸಲಾಗಿದೆ. ಓಪನರ್ ಆಗಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವುದು ಯಾರು ಎಂಬುದು ಇನ್ನೂ ಖಚಿತ ಮಾಹಿತಿ ಇಲ್ಲ. ಯಾಕೆಂದರೆ ಮಯಾಂಕ್ ಅಗರ್ವಾಲ್ ಮೊದಲ ಟೆಸ್ಟ್​ನಲ್ಲಿ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿಲ್ಲ. ಇತ್ತ ಶುಭ್ಮನ್ ಗಿಲ್​ಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಮಯಾಂಕ್ ಕೈಬಿಟ್ಟು ಗಿಲ್ ಆರಂಭಿಕನಾಗಿ ಆಡ್ತಾರ ಎಂಬುದು ಕುತೂಹಲ ಕೆರಳಿಸಿದೆ. ಮೂರನೇ ಕ್ರಮಾಂಕದಲ್ಲಿ ಮೋಡಿ ಮಾಡಿರುವ ಹನುಮಾ ವಿಹಾರಿ ಸ್ಥಾನ ಭದ್ರವಾಗಿದೆ. ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿ ಆಡಲಿದ್ದಾರೆ.

ನಂತರದ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದು ಭರವಸೆ ಮೂಡಿಸಿದ್ದಾರೆ. ಶತಕ ವಂಚಿತ ರಿಷಭ್ ಪಂತ್ 7ನೇ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ. ಆಲ್ರೌಂಡರ್​ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವುದು ಖಚಿತ. 9ನೇ ಸ್ಥಾನದಲ್ಲಿ ಜಯಂತ್ ಯಾದವ್ ತಂಡದಿಂದ ಹೊರಗುಳಿಲಿದ್ದು ಅಕ್ಷರ್ ಪಟೇಲ್ ಅಥವಾ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಎಂದಿನಂತೆ ತಂಡದಲ್ಲಿರಲಿದ್ದಾರೆ.

ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಅದರಲ್ಲೂ 4 ವರ್ಷಗಳ ಬಳಿಕ ಟೆಸ್ಟ್‌ ಪಂದ್ಯದ ಆತಿಥ್ಯ ಲಭಿಸಿರುವುದರಿಂದ ಕ್ರಿಕೆಟ್‌ ಫ್ಯಾನ್ಸ್‌ ಫುಲ್ ಜೋಶ್‌ನಲ್ಲಿದ್ದಾರೆ. ಕೊರೊನಾ ಹಾವಳಿ ಹತೋಟಿಗೆ ಬಂದಿರುವುದರಿಂದ ಸ್ಟೇಡಿಯಂ ಪೂರ್ಣ ಪ್ರಮಾಣದಲ್ಲಿ ವೀಕ್ಷಕರಿಗೆ ತೆರೆಯಲ್ಪಡುವುದು ಈ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಹಿನ್ನೆಲೆ ಒಂದು ವಾರದಿಂದ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೈದಾನದ ಹಲವು ಕಡೆ ಗೋಪುರಗಳನ್ನು ನಿರ್ಮಿಸಲಾಗಿದೆ. ಪಂದ್ಯದ 5 ದಿನ ಭದ್ರತೆಗೆ 700 ಸಿಬ್ಬಂದಿಯನ್ನ ನಿಯೋಜಿಸಲಾಗಿದೆ,. ಅಹಿತಕರ ಘಟನೆ ನಡೆಯದಂತೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಅನುಕೂಲಕರವಾಗಿ ಇರಲಿದ್ದು, ಸ್ಪಿನ್ ಬೌಲರ್‌ಗಳಿಗೆ ಚೂರು ಸಹಕರಿಸಲಿದೆ. ಹೊನಲು ಬೆಳಕಿನ ಟೆಸ್ಟ್‌ ಪಂದ್ಯ ಎಂಬುದನ್ನು ಹೊರತು ಪಡಿಸಿ ಹೇಳುವುದಾದರೆ ಇಲ್ಲಿಯೂ ಭಾರತವೇ ನೆಚ್ಚಿನ ತಂಡವಾಗಿ ಗುರುತಿಸಲ್ಪಟ್ಟಿದೆ. ಮೊಹಾಲಿಯಲ್ಲಿ ಮೂರೇ ದಿನದಲ್ಲಿ ಇನ್ನಿಂಗ್ಸ್‌ ಸೋಲುಂಡ ಲಂಕೆಯ ಮೇಲೆ ಯಾವುದೇ ನಂಬಿಕೆ ಇಡಲಾಗದು. ಅದು ಪಂದ್ಯವನ್ನು ಎಷ್ಟು ದಿನಕ್ಕೆ ವಿಸ್ತರಿಸೀತು ಎಂಬುದನ್ನು ನೋಡಬೇಕಿದೆ.

IND vs WI: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತೀಯ ವನಿತೆಯರು: ಎರಡು ವಿಕೆಟ್ ಪತನ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ