IND vs ENG 4th Test: ಇಂದಿನಿಂದ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಬುಮ್ರಾ ಜಾಗಕ್ಕೆ ಯಾರಿರಬಹುದು?

|

Updated on: Feb 23, 2024 | 7:03 AM

India vs England 4th Test Preview: ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಇಂದಿನಿಂದ ಶುರುವಾಗಲಿದೆ. ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂ ಈ ಮಹತ್ವದ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಅತ್ತ ಇಂಗ್ಲೆಂಡ್​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

IND vs ENG 4th Test: ಇಂದಿನಿಂದ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಬುಮ್ರಾ ಜಾಗಕ್ಕೆ ಯಾರಿರಬಹುದು?
IND vs ENG 4th Test
Follow us on

ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 434 ರನ್‌ಗಳಿಂದ ಗೆದ್ದ ಭಾರತ (India vs England) ಇದೀಗ ಮತ್ತೊಂದು ಮಹತ್ವದ ಪಂದ್ಯಕ್ಕೆ ಸಜ್ಜಾಗಿದೆ. ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ಇಂದು ಇಂಡೋ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್‌ ಆರಂಭವಾಗಲಿದೆ. ಸದ್ಯ ಐದು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಟೆಸ್ಟ್ ಪಂದ್ಯವನ್ನು ಗೆದ್ದರೆ, ಭಾರತವು ಸರಣಿಯನ್ನು ವಶಪಡಿಸಿಕೊಳ್ಳಲಿದೆ. ರೋಹಿತ್ ಸೇನೆ ಈ ಪಂದ್ಯವನ್ನೂ ಗೆಲ್ಲಲೇಬೇಕೆಂಬ ಹಠದಲ್ಲಿದೆ. ಇದಕ್ಕಾಗಿ ಕಠಿಣ ಅಭ್ಯಾಸ ಕೂಡ ನಡೆಸುತ್ತಿದೆ. ಇದು ಇಂಗ್ಲೆಂಡ್​ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಇಂಗ್ಲೆಂಡ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

ಮೊದಲ ಪಂದ್ಯವನ್ನು ಗೆದ್ದು ಇಂಗ್ಲೆಂಡ್ ತಂಡವು ಭರ್ಜರಿ ಆರಂಭ ಪಡೆದಿತ್ತು. ಆದರೆ ನಂತರ ಟೀಮ್ ಇಂಡಿಯಾ ಬಲಿಷ್ಠವಾಗಿ ಪುನರಾಗಮನ ಮಾಡಿತು. ಸತತ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಸೋತಿದೆ. ಟೀಮ್ ಇಂಡಿಯಾ 0-1 ರಿಂದ 2-1 ಮುನ್ನಡೆ ಸಾಧಿಸಿತು. ಇನ್ನು 4ನೇ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಳ್ಳಲಿದೆ. ಆದರೆ ಇಂಗ್ಲೆಂಡ್ ಸರಣಿಯಲ್ಲಿ ತನ್ನ ಸವಾಲನ್ನು ಉಳಿಸಿಕೊಳ್ಳಬೇಕಾದರೆ, ಯಾವುದೇ ಸಂದರ್ಭದಲ್ಲಿ ಕನಿಷ್ಠ ಡ್ರಾ ಅಥವಾ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಈ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ದೊಡ್ಡ ಸವಾಲು ಎದುರಾಗಲಿದೆ.

ರಾಂಚಿ ಮೈದಾನವೆಂದರೆ ಹಿಟ್​ಮ್ಯಾನ್ ರೋಹಿತ್​ಗೆ ಬಲು ಅಚ್ಚುಮೆಚ್ಚು

ಆಡುವ XI ನಲ್ಲಿ 2 ಬದಲಾವಣೆಗಳು

ಇಂಗ್ಲೆಂಡ್ ನಾಲ್ಕನೇ ಟೆಸ್ಟ್‌ಗೆ ಆಡುವ ಹನ್ನೊಂದರ ಬಳಗವನ್ನು ಗುರುವಾರವೇ ಘೋಷಿಸಿದೆ. ಆಂಗ್ಲರ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮಾರ್ಕ್ ವುಡ್ ಮತ್ತು ರೆಹಾನ್ ಅಹ್ಮದ್ ಇಬ್ಬರಿಗೂ ಕೊಕ್ ನೀಡಲಾಗಿದೆ. ಒಲಿ ರಾಬಿನ್ಸನ್ ಮತ್ತು ಶೋಯೆಬ್ ಬಶೀರ್ ಅವರಿಗೆ ಸ್ಥಾನ ನೀಡಲಾಗಿದೆ. ಈ ಎರಡು ಬದಲಾವಣೆಯ ಹೊರತಾಗಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಲೈನಪ್​ನಲ್ಲಿ ಯಾವುದೇ ಚೇಂಜ್ ಮಾಡಲಾಗಿಲ್ಲ.

ಭಾರತದಲ್ಲಿ ಬದಲಾವಣೆ

4ನೇ ಟೆಸ್ಟ್​ನಿಂದ ಜಸ್​​ಪ್ರಿತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವುದು ಖಚಿತವಾಗಿದೆ. ಹೀಗಾಗಿ ಇವರ ಜಾಗಕ್ಕೆ ಯಾವ ಆಟಗಾರ ಬರಲಿದ್ದಾರೆ ಎಂಬುದು ಕುತೂಹಲ. ಮೂಲಗಳ ಪ್ರಕಾರ, ಮೊಹಮ್ಮದ್ ಸಿರಾಜ್ ಅವರನ್ನು ನಾಲ್ಕನೇ ಟೆಸ್ಟ್‌ನಲ್ಲಿ ಬೆಂಬಲಿಸಲು ಅನ್‌ಕ್ಯಾಪ್ಡ್ ವೇಗದ ಬೌಲರ್ ಆಕಾಶ್ ದೀಪ್ ಪ್ಲೇಯಿಂಗ್ -11 ರಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ. 27 ವರ್ಷದ ಬಲಗೈ ವೇಗದ ಬೌಲರ್ ಬುಧವಾರ ಬಂಗಾಳ ತಂಡದ ಸಹ ಆಟಗಾರ ಮುಖೇಶ್ ಕುಮಾರ್ ಅವರೊಂದಿಗೆ ನೆಟ್ಸ್‌ನಲ್ಲಿ ಕಠಿಣ ಬೌಲಿಂಗ್ ಅಭ್ಯಾಸವನ್ನು ಕೈಗೊಂಡರು. ಹಾಗೆಯೆ ಕೆಎಲ್ ರಾಹುಲ್ ಇಲ್ಲದ ಕಾರಣ ರಜತ್ ಪಾಟಿದಾರ್​ಗೆ ಮತ್ತೊಂದು ಅವಕಾಶ ಸಿಗುವ ಸಂಭವವಿದೆ.

ರಾಂಚಿ ಪಿಚ್ ಯಾರಿಗೆ ಸಹಕಾರಿ; ಮುಂದಿನ 5 ದಿನಗಳ ಹವಾಮಾನ ವರದಿ ಏನು?

ರಾಂಚಿಯಲ್ಲಿ ಟೀಮ್ ಇಂಡಿಯಾ

ರಾಂಚಿಯ ಈ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಇದುವರೆಗೆ ಒಟ್ಟು 2 ಪಂದ್ಯಗಳನ್ನು ಆಡಿದೆ. ಅದರಲ್ಲಿ 1 ಪಂದ್ಯವನ್ನು ಗೆದ್ದಿದೆ. ಒಂದು ಪಂದ್ಯ ಡ್ರಾಗೊಂಡಿದೆ. ಈ ಕ್ರೀಡಾಂಗಣದಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಿತ್ತು. ಆ ಪಂದ್ಯ ಡ್ರಾ ಆಗಿತ್ತು. ನಂತರ 2 ವರ್ಷಗಳ ನಂತರ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಮಣಿಸಿತ್ತು.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಒಲೀ ರಾಬಿನ್ಸನ್, ಜೇಮ್ಸ್ ಅ್ಯಂಡರ್ಸನ್, ಶೋಯೆಬ್ ಬಶೀರ್.

4ನೇ ಟೆಸ್ಟ್‌ಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ