IND vs SA 1st ODI: ಇಂದು ಭಾರತ- ದಕ್ಷಿಣ ಆಫ್ರಿಕಾ ಮೊದಲ ಏಕದಿನ: ಪಂದ್ಯ ಎಲ್ಲಿ?, ಎಷ್ಟು ಗಂಟೆಗೆ ಆರಂಭ?
India vs South Africa: ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಓಡಿಐ ಸರಣಿಗೆ ಟೀಮ್ ಇಂಡಿಯಾದಲ್ಲಿ ಬಹುತೇಕ ಬದಲಾವಣೆ ಆಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂಕಗಳ ಅಂತರದಿಂದ ವಶಪಡಿಸಿಕೊಂಡ ಭಾರತ (India vs South Africa) ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಓಡಿಐ ಸರಣಿಗೆ ಟೀಮ್ ಇಂಡಿಯಾದಲ್ಲಿ ಬಹುತೇಕ ಬದಲಾವಣೆ ಆಗಿದೆ. ಟಿ20 ತಂಡದಲ್ಲಿದ್ದ ಕೆಲ ಆಟಗಾರರು ಮಾತ್ರ ಈ ಸರಣಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ಕೆಎಲ್ ರಾಹುಲ್ರಂತಹ ಸ್ಟಾರ್ ಆಟಗಾರರು ಟಿ20 ವಿಶ್ವಕಪ್ಗಾಗಿ ಆಸ್ಟ್ರೇಲಿಯಾ ತೆರಳಲಿರುವ ಕಾರಣ ತಂಡವನ್ನು ಶಿಖರ್ ಧವನ್ (Shikhar Dhawan) ಮುನ್ನಡೆಸುತ್ತಿದ್ದಾರೆ. ಇತ್ತ ಹರಿಣಗಳ ಪಡೆಯಲ್ಲಿ ಹೆಚ್ಚಿನ ಬದಲಾವಣೆಯಿಲ್ಲ. ತೆಂಬಾ ಬವುಮಾ ನಾಯಕನಾಗಿದ್ದಾರೆ. ಡೇವಿಡ್ ಮಿಲ್ಲರ್, ಕ್ವಿಂಟನ್ ಡಿಕಾಕ್, ಆ್ಯಡನ್ ಮರ್ಕ್ರಮ್ರಂತಹ ಅಪಾಯಕಾರಿ ಬ್ಯಾಟರ್ಗಳಿದ್ದಾರೆ. ಹಾಗಾದರೆ ಇಂದಿನ ಪಂದ್ಯ ಎಲ್ಲಿ?, ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬುದನ್ನು ನೋಡೋಣ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಅಕ್ಟೋಬರ್ 6 ರಂದು ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ 1 ಗಂಟೆಗೆ ನಡೆಯಲಿದೆ.
ಮೊದಲ ಏಕದಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?
ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9kannada.com ನಲ್ಲಿಯೂ ಓದಬಹುದು.
ಭಾರತ ಪರ ಓಪನರ್ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಶ್ರೇಯಸ್ ಅಯ್ಯರ್ ಮೂರನೇ ಸ್ಥಾನದಲ್ಲಿದ್ದರೆ ಇಶಾನ್ ಕಿಶನ್ ನಂತರದ ಸ್ಥಾನದಲ್ಲಿ ಆಡಬಹುದು. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ಹೊರಲಿದ್ದಾರೆ. ರಾಹುಲ್ ತ್ರಿಪಾಠಿ ಕೂಡ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಬಹುದು. ಶಾರ್ದೂಲ್ ಠಾಕೂರ್ ಹಾಗೂ ದೀಪಕ್ ಚಹರ್ ಕೂಡ ಇರಲಿದ್ದಾರೆ. ಸ್ಪಿನ್ನರ್ಗಳಾಗಿ ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಅವರಿದ್ದು ಮೊಹಮ್ಮದ್ ಸಿರಾಜ್ ಕೂಡ ಆಡಲಿದ್ದಾರೆ. ಇವರ ಜೊತೆಗೆ ರಜತ್ ಪಟಿದಾರ್, ರುತುರಾಜ್ ಗಾಯಕ್ವಾಡ್, ಶಹ್ಬಾಜ್ ಅಹ್ಮದ್, ಆವೇಶ್ ಖಾನ್ ಹಾಗೂ ಮುಖೇಶ್ ಕುಮಾರ್ ಕೂಡ ತಂಡದಲ್ಲಿದ್ದಾರೆ.
ಭಾರತ ತಂಡ: ಶಿಖರ್ ಧವನ್(ನಾಯಕ), ಶ್ರೇಯಸ್ ಅಯ್ಯರ್(ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಜತ್ ಪಾಟಿದಾರ್,ರಾಹುಲ್ ತ್ರಿಪಾಠಿ, ಇಶಾನ್ ಕಿಶನ್(ವಿಕೆಟ್‌ಕೀಪರ್), ಸಂಜು ಸ್ಯಾಮ್ಸನ್(ವಿಕೆಟ್‌ಕೀಪರ್), ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್ ಹಾಗೂ ದೀಪಕ್ ಚಹಾರ್.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ತೆಂಬಾ ಬವುಮಾ (ನಾಯಕ), ಆ್ಯಡೆನ್ ಮರ್ಕ್ರಮ್, ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ.
Published On - 8:00 am, Thu, 6 October 22