ಇಂದು ಏಷ್ಯಾಕಪ್ 2023 ಫೈನಲ್: ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾದ ಭಾರತ-ಶ್ರೀಲಂಕಾ

India vs Sri Lanka, Asia Cup 2023 Final: ಏಷ್ಯಾಕಪ್ 2023 ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇಂದು (ಸೆಪ್ಟೆಂಬರ್ 17) ಭಾರತ ಹಾಗೂ ಶ್ರೀಲಂಕಾ ನಡುನೆ ಏಷ್ಯಾಕಪ್ ಫೈನಲ್ ಪಂದ್ಯ ನಡೆಯಲಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಮ್ಯಾಚ್ ಏರ್ಪಡಿಸಲಾಗಿದೆ.

ಇಂದು ಏಷ್ಯಾಕಪ್ 2023 ಫೈನಲ್: ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾದ ಭಾರತ-ಶ್ರೀಲಂಕಾ
IND vs SL Asia Cup Final 2023
Follow us
Vinay Bhat
|

Updated on:Sep 17, 2023 | 7:23 AM

ಏಷ್ಯಾಕಪ್ 2023 ಟೂರ್ನಿಗೆ ಇಂದು ತೆರೆಬೀಳಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ದಸುನ್ ಶನಕ ನೇತೃತ್ವದ ಶ್ರೀಲಂಕಾ (India vs Sri Lanka) ತಂಡ ಇಂದು ಏಷ್ಯಾಕಪ್ ಫೈನಲ್​ನಲ್ಲಿ ಮುಖಾಮುಖಿ ಆಗುತ್ತಿದೆ. ಎರಡು ಬಲಿಷ್ಠ ತಂಡದಗಳ ನಡುವಣ ಕಾದಾಟಕ್ಕೆ ಅಭಿಮಾನಿಗಳು ಕಾದುಕುಳಿತಿದ್ದಾರೆ. ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿಯುವ ಪ್ಲಾನ್​ನಲ್ಲಿದ್ದರೆ, ಇತ್ತ ಸಿಂಹಳೀಯರು ಆರನೇ ಬಾರಿ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ.

ಶ್ರೀಲಂಕಾ ತಂಡಕ್ಕೆ ಹೋಲಿಸಿದರೆ ಭಾರತವೇ ಬಲಿಷ್ಠವಿರುವಂತೆ ಗೋಚರಿಸುತ್ತಿದೆ. ಕಳೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತಿರಬಹುದು. ಆದರೆ, ಕೊಹ್ಲಿ, ಬುಮ್ರಾ, ಹಾರ್ದಿಕ್ ಸೇರಿದಂತೆ ಕೆಲ ಸ್ಟಾರ್ ಆಟಗಾರರ ಅನುಪಸ್ಥಿಯಲ್ಲಿ ಭಾರತ ಕಣಕ್ಕಿಳಿದಿತ್ತು. ಆದರೀಗ ಫೈನಲ್​ಗೆ ಭಾರತೀಯ ಆಟಗಾರರು ಭರ್ಜರಿ ಆಗಿ ರೆಡಿಯಾಗಿದ್ದಾರೆ. ಹೀಗಿದ್ದರು ಕೆಲ ತಪ್ಪುಗಳನ್ನು ಭಾರತ ಸರಿಪಡಿಸಿಬೇಕಿದೆ. ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸಿಕೊಡುವುದು ಮುಖ್ಯ.

ಪಾಕ್ ಪಡೆಗೆ ಆಘಾತದ ಮೇಲೆ ಆಘಾತ: ಪ್ರಮುಖ ಬೌಲರ್ ವಿಶ್ವಕಪ್​ನಿಂದ ಔಟ್

ಇದನ್ನೂ ಓದಿ
Image
Asia Cup Final: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..!
Image
Asian Games 2023: ಏಷ್ಯನ್ ಗೇಮ್ಸ್ ಟೀಮ್ ಇಂಡಿಯಾದ ವೇಳಾಪಟ್ಟಿ ಪ್ರಕಟ
Image
ಭಾರತ vs ಶ್ರೀಲಂಕಾ ಮುಖಾಮುಖಿ: ಯಾರು ಬಲಿಷ್ಠ..?
Image
ಏಕದಿನ ವಿಶ್ವಕಪ್​ಗೂ ಮುನ್ನ 11 ಆಟಗಾರರು ಗಾಯಾಳು

ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕ ಬಲಿಷ್ಠವಾಗಿದೆ. ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ ಇದ್ದಾರೆ. ಆದರೆ, ರವೀಂದ್ರ ಜಡೇಜಾ ಕಡೆಯಿಂದ ಈ ಬಾರಿಯ ಏಷ್ಯಾಕಪ್​ನಲ್ಲಿ ಉತ್ತಮ ಬ್ಯಾಟಿಂಗ್ ಬಂದಿಲ್ಲ. ಶಾರ್ದೂಲ್ ಥಾಕೂರ್ ಕೂಡ ಅವಕಾಶ ನೀಡಿದಷ್ಟು ಕಳೆದುಕೊಳ್ಳುತ್ತಿದ್ದಾರೆ. ಇಂಜುರಿಯಿಂದ ಅಕ್ಷರ್ ಪಟೇಲ್ ಹೊರಗುಳಿದಿದ್ದು, ವಾಷಿಂಗ್ಟನ್ ಸುಂದರ್ ಆಯ್ಕೆ ಆಗಿದ್ದಾರೆ. ಆದರೆ, ಇವರಿಗೆ ಅವಕಾಶ ಅನುಮಾನ. ಕುಲ್ದೀಪ್ ಯಾದವ್ ಸ್ಪಿನ್ ಮೋಡಿ ಭರ್ಜರಿ ವರ್ಕ್ ಆಗುತ್ತಿದೆ.

ಇತ್ತ ಶ್ರೀಲಂಕಾ ತಂಡದಲ್ಲಿ ಸ್ಟಾರ್ ಆಟಗಾರರ ಅನುಪಸ್ಥಿತಿ ಎದ್ದು ಕಾಣುತ್ತಿದೆಯಾದರೂ ಫೈನಲ್ ವರೆಗೆ ತಲುಪಿದ್ದಾರೆ. ಪಾಕಿಸ್ತಾನ ವಿರುದ್ಧ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿ ಲಂಕಾ ಫೈನಲ್​ಗೆ ಲಗ್ಗೆಯಿಟ್ಟಿತು. ಕುಸಲ್ ಮೆಂಡಿಸ್, ಚರಿತ್ ಅಸಲಂಕ ಹಾಗೂ ಸಮರವಿಕ್ರಮ ಪ್ರತಿ ಪಂದ್ಯದಲ್ಲಿ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಆದರೆ, ಆರಂಭಿಕರಾದ ಕುಸಲ್ ಪೆರೇರಾ ಮತ್ತು ಪಾತುಮ್ ನಿಸ್ಸಾನಕ ಕಡೆಯಿಂದ ಉತ್ತಮ ಆಟ ಬಂದಿಲ್ಲ. ನಾಯಕ ಶನಕ ಕೂಡ ಬ್ಯಾಟಿಂಗ್​ನಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಇದರ ನಡುವೆ ತಂಡದ ಪ್ರಮುಖ ಸ್ಪಿನ್ನರ್ ಮಹೀಶ್ ತೀಕ್ಷಣ ಗಾಯದ ತಂಡದಿಂದ ಹೊರಬಿದ್ದಿರುವುದು ಹಿನ್ನಡೆಯಾಗಿದೆ.

ಪಂದ್ಯಕ್ಕೆ ಮಳೆ ಅಡ್ಡಿ?:

ಹವಾಮಾನ ಮುನ್ಸೂಚನೆಯ ಪ್ರಕಾರ ಇಂಡೋ-ಲಂಕಾ ಫೈನಲ್ ಪಂದ್ಯಕ್ಕೆ ಭಾನುವಾರವೂ ಮಳೆ ಅಡ್ಡಿ ಪಡಿಸುವ ನಿರೀಕ್ಷೆಯಿದೆ. ಪಂದ್ಯವು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಈ ಸಂದರ್ಭ ಮಳೆ ಬರುವ ಲಕ್ಷಣವಿಲ್ಲ. ಆದರೆ, ಸಂಜೆಯ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಸಂಜೆ ವೇಳೆಗೆ ಶೇ. 50ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದಾಗ್ಯೂ, ಆಟದ ಕೊನೆಯ ಭಾಗದಲ್ಲಿ ಮಳೆಯ ಪ್ರಮಾಣ ಶೇ. 68 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಪಂದ್ಯದ ಮಧ್ಯೆ ಆಗಾಗ ಮಳೆ ಸುರಿಯಲಿದ್ದು, ಓವರ್‌ಗಳ ಕಡಿತಕ್ಕೆ ಕಾರಣವಾಗಬಹುದು.

ಭಾರತ-ಶ್ರೀಲಂಕಾ ಫೈನಲ್ ಪಂದ್ಯಕ್ಕೆ ಮೀಸಲು ದಿನ

ಭಾರತ ಮತ್ತು ಶ್ರೀಲಂಕಾ ಏಷ್ಯಾಕಪ್ 2023 ಫೈನಲ್ ಹಣಾಹಣಿ ಭಾನುವಾರದಂದು ಮಳೆಯಿಂದ ರದ್ದಾದರೆ, ಮೀಸಲು ದಿನಕ್ಕೆ ಅವಕಾಶವಿದೆ. ಮಳೆ ಬಂದು ಪಂದ್ಯ ಅರ್ಧ ನಡೆದರೆ ಅಥವಾ ಪಂದ್ಯ ಆರಂಭವೇ ಆಗಿದಿದ್ದಲ್ಲಿ, ನಾಳೆ (ಸೋಮವಾರ) ಮುಂದುವರೆಸುವ ಅವಕಾಶವಿದೆ. ಪಂದ್ಯ ಅರ್ಧಕ್ಕೆ ಮೊಟಕುಗೊಳಿಸಿದರೆ ಮುಂದಿನ ದಿನ ಅರ್ಧದಿಂದಲೇ ಮುಂದುವರೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾನಕ, ದಿಮುತ್ ಕರುಣಾರತ್ನ, ಕುಸಲ್ ಜನಿತ್ ಪೆರೇರಾ, ಕುಸಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮತೀಶ ಪತಿರಣ, ಬಿ ಕಸುನ್ ರಜಿತ, ಬಿ. ಫೆರ್ನಾಂಡೋ, ಪ್ರಮೋದ್ ಮದುಶನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 am, Sun, 17 September 23

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ