IND vs AUS: ‘ಅಸಂಬದ್ಧ ಆರೋಪ’; ಬುಮ್ರಾ ಬೌಲಿಂಗ್ ಪ್ರಶ್ನಿಸಿದವರ ಮೈಚಳಿ ಬಿಡಿಸಿದ ಗ್ರೇಗ್ ಚಾಪೆಲ್

Greg Chappell defends Jasprit Bumrah: ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲಿನ ನಂತರ, ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಶೈಲಿಯನ್ನು ಪ್ರಶ್ನಿಸಿದ ಆಸ್ಟ್ರೇಲಿಯಾದ ಮಾಧ್ಯಮಗಳು ಮತ್ತು ನೆಟ್ಟಿಗರನ್ನು ಮಾಜಿ ಆಸ್ಟ್ರೇಲಿಯಾ ಆಟಗಾರ ಮತ್ತು ಭಾರತದ ಮಾಜಿ ಕೋಚ್ ಗ್ರೇಗ್ ಚಾಪೆಲ್ ಖಂಡಿಸಿದ್ದಾರೆ. ಬುಮ್ರಾ ಅವರ ಬೌಲಿಂಗ್ ಶೈಲಿಯಲ್ಲಿ ಯಾವುದೇ ಲೋಪವಿಲ್ಲ ಎಂದಿರುವ ಚಾಪೆಲ್, ಆಸ್ಟ್ರೇಲಿಯಾದ ಬ್ಯಾಟಿಂಗ್ ವೈಫಲ್ಯವನ್ನು ಟೀಕಿಸಿದ್ದಾರೆ.

IND vs AUS: ‘ಅಸಂಬದ್ಧ ಆರೋಪ’; ಬುಮ್ರಾ ಬೌಲಿಂಗ್ ಪ್ರಶ್ನಿಸಿದವರ ಮೈಚಳಿ ಬಿಡಿಸಿದ ಗ್ರೇಗ್ ಚಾಪೆಲ್
ಗ್ರೇಗ್ ಚಾಪೆಲ್, ಜಸ್ಪ್ರೀತ್ ಬುಮ್ರಾ
Follow us
ಪೃಥ್ವಿಶಂಕರ
|

Updated on:Nov 27, 2024 | 5:59 PM

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಆಟಗಾರರೂ ಸೇರಿದಂತೆ, ಅಲ್ಲಿನ ಮಾಜಿ ಆಟಗಾರರು, ಮಾಧ್ಯಮಗಳು ಟೀಂ ಇಂಡಿಯಾವನ್ನು ಇನ್ನಿಲ್ಲದಂತೆ ಲೇವಡಿ ಮಾಡಿದ್ದವು. ಆಸೀಸ್ ತಂಡದ ಕೆಲವು ಆಟಗಾರರು ಭಾರತ ತಂಡವನ್ನು ಲಘುವಾಗಿ ಪರಿಗಣಿಸಿ, ಈ ಸರಣಿಯಲ್ಲಿ ನಾವು ಕ್ಲೀನ್ ಸ್ವೀಪ್ ಸಾಧನೆ ಮಾಡುತ್ತೇವೆ ಎಂದಿದ್ದರು. ಇನ್ನೂ ಇದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದ ಆಸೀಸ್ ತಂಡದ ಮಾಜಿ ಆಟಗಾರರು, ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಟೀಂ ಇಂಡಿಯಾ, ಬಲಿಷ್ಠ ಅಸ್ಟ್ರೇಲಿಯಾದ ಮುಂದೆ ಹೇಳ ಹೆಸರಿಲ್ಲದಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಆದರೆ ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿದ್ದ ಟೀಂ ಇಂಡಿಯಾ, ಆತಿಥೇಯರನ್ನು 295 ರನ್​ಗಳಿಂದ ಸೋಲಿಸಿತ್ತು. ಇದೀಗ ಈ ಸೋಲನ್ನು ಆರಗಿಸಿಕೊಳ್ಳದ ಆಸ್ಟ್ರೇಲಿಯಾದ ಕೆಲವು ಮಾಧ್ಯಮಗಳು ಹಾಗೂ ಅಲ್ಲಿನ ನೆಟ್ಟಿಗರು, ಟೀಂ ಇಂಡಿಯಾ ನಾಯಕ ಬುಮ್ರಾ ಅವರ ಬೌಲಿಂಗ್ ಬಗ್ಗೆಯೇ ಪ್ರಶ್ನೆಗಳನ್ನು ಎತ್ತಿದ್ದರು. ಇದೀಗ ತನ್ನ ತಂಡದ ಬೆಂಬಲಿಗರ ಮೈಚಳಿ ಬಿಡಿಸಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಟೀಂ ಇಂಡಿಯಾದ ಮಾಜಿ ಕೋಚ್ ಗ್ರೇಗ್ ಚಾಪೆಲ್, ಬುಮ್ರಾ ಮೇಲೆ ಈ ರೀತಿಯ ಅಸಂಬದ್ಧ ಆರೋಪಗಳನ್ನು ಮಾಡುವುದನ್ನು ನಿಲ್ಲಿಸಿ ಎಂದಿದ್ದಾರೆ.

ಭಾರತ ತಂಡವನ್ನು ಹೊಗಳಿದ ಚಾಪೆಲ್

ವಾಸ್ತವವಾಗಿ ಪರ್ತ್‌ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ 295 ರನ್‌ಗಳ ಸೋಲಿನ ನಂತರ ಆಸ್ಟ್ರೇಲಿಯಾ ತಂಡದ ಕಳಪೆ ಪ್ರದರ್ಶನದ ಬಗ್ಗೆ ಒಂದೆಡೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಕೆಲವರು ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಶೈಲಿಯೇ ಸಂಶಯಾಸ್ಪದವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಹೊರಿಸಲಾರಂಭಿಸಿದ್ದರು. ಇದೀಗ ಈ ಎಲ್ಲಾ ಆರೋಪಗಳನ್ನು ಅಲ್ಲಗಳೆದಿರುವ ಗ್ರೇಗ್ ಚಾಪೆಲ್, ಇದೇ ಮೊದಲ ಬಾರಿಗೆ ಭಾರತ ತಂಡವನ್ನು ಹೊಗಳಿ, ಆಸೀಸ್ ಆಟಗಾರರ ಪ್ರದರ್ಶನವನ್ನು ಪ್ರಶ್ನಿಸಿದ್ದಾರೆ.

ಅಸಂಬದ್ಧ ಪ್ರಶ್ನೆಗಳನ್ನು ನಿಲ್ಲಿಸಿ

ಸಿಡ್ನಿ ಮಾರ್ನಿಂಗ್ ಹೆರಾಲ್ಡ್‌ ಪತ್ರಿಕೆಗೆ ಬರೆದಿರುವ ತನ್ನ ಅಂಕಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಚಾಪೆಲ್, ‘ ಪರ್ತ್​ ಟೆಸ್ಟ್​ನಲ್ಲಿ 295 ರನ್​ಗಳಿಂದ ಸೋತಿರುವುದು ಆಸ್ಟ್ರೇಲಿಯಾದ ಬ್ಯಾಟಿಂಗ್‌ ವಿಭಾಗದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಆಸ್ಟ್ರೇಲಿಯದ ಬ್ಯಾಟಿಂಗ್ ಪ್ರದರ್ಶನವು ಹೆಚ್ಚು ಚಿಂತಾಜನಕವಾಗಿತ್ತು. ಆಸೀಸ್ ಬ್ಯಾಟರ್​ಗಳ ಮುಂದೆ, ಜಸ್ಪ್ರೀತ್ ಬುಮ್ರಾ ನೇತೃತ್ವದ ಭಾರತದ ಬೌಲರ್‌ಗಳು ಹೆಚ್ಚು ಅಪಾಯಕಾರಿಯಾಗಿ ಕಾಣುತ್ತಿದ್ದರು. ಅಂದಹಾಗೆ, ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬುಮ್ರಾ ಅವರ ಬೌಲಿಂಗ್ ಶೈಲಿಯ ಬಗ್ಗೆ ಪ್ರಶ್ನೆಗಳನ್ನು ಎತ್ತ್ತಿದ್ದಾರೆ. ಇಂತಹ ಅಸಂಬದ್ಧ ಪ್ರಶ್ನೆಗಳನ್ನು ಎತ್ತುವುದನ್ನು ಮೊದಲು ನಿಲ್ಲಿಸಬೇಕು. ಬುಮ್ರಾ ಅವರ ಬೌಲಿಂಗ್ ಶೈಲಿ ತುಂಬಾ ವಿಶಿಷ್ಟವಾಗಿದ್ದು, ಅವರ ಬೌಲಿಂಗ್​ನಲ್ಲಿ ಯಾವುದೇ ಲೋಪಗಳಿಲ್ಲ. ಹೀಗಾಗಿ ಅವರ ಬೌಲಿಂಗ್ ಶೈಲಿಯನ್ನು ಪ್ರಶ್ನಿಸುವುದನ್ನು ನಿಲ್ಲಿಸಿ ಎಂದಿದ್ದಾರೆ.

ಆಸೀಸ್ ಬ್ಯಾಟಿಂಗ್ ಕಳಪೆಯಾಗಿತ್ತು

ಇದರ ಜೊತೆಗೆ ತಮ್ಮದೇ ತಂಡದ ಆಟಗಾರರ ಪ್ರದರ್ಶನವನ್ನು ಪ್ರಶ್ನಸಿರುವ ಚಾಪೆಲ್, ‘ಮಾರ್ನಸ್ ಲಬುಶೇನ್ ಅವರು ಜುಲೈ 2023 ರಿಂದ ಒಂದೇ ಒಂದು ಶತಕ ಬಾರಿಸಿಲ್ಲ. ಇದು ಅವರನ್ನು ಒತ್ತಡಕ್ಕೆ ಸಿಲುಕಿಸಿದೆ. ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್​ನಲ್ಲಿ 52 ಎಸೆತಗಳನ್ನು ಎದುರಿಸಿದ ಲಬುಶೇನ್ ಕೇವಲ 2 ರನ್ ಹಾಗೂ ಎರಡನೇ ಇನ್ನಿಂಗ್ಸ್​ನಲ್ಲಿ 5 ಎಸೆತಗಳನ್ನು ಎದುರಿಸಿ 3 ರನ್ ಗಳಿಸಿ ಔಟಾದರು. ಇಡೀ ಪಂದ್ಯದಲ್ಲಿ ಅವರು ರನ್ ಗಳಿಸುವುದಕ್ಕಿಂತ ಹೆಚ್ಚಾಗಿ ಪಿಚ್​ನಲ್ಲಿ ಹೆಚ್ಚು ಸಮಯ ಉಳಿಯುವುದಕ್ಕೆ ಆಡುತ್ತಿದ್ದಾರೆ ಎಂದು ನನಗನಿಸಿತು ಎಂದು ಚಾಪೆಲ್ ಹೇಳಿದ್ದಾರೆ.

ಸಚಿನ್- ಕೊಹ್ಲಿ ಹಾದಿಯಲ್ಲಿ ಜೈಸ್ವಾಲ್

ಹಾಗೆಯೇ ಟೀಂ ಇಂಡಿಯಾದ ಆರಂಭಿಕ ಜೊಡಿಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ಅವರು,‘ ಪರ್ತ್​ ಟೆಸ್ಟ್‌ನ ಎರಡನೇ ಇನ್ನಿಂಗ್ಸ್​ನಲ್ಲಿ ಆರಂಭಿಕರಿಬ್ಬರು ದ್ವಿಶತಕದ ಜೊತೆಯಾಟ ನೀಡಿದರು. ಇದರಲ್ಲಿ ಅನುಭವಿ ರಾಹುಲ್ ಎಂತಹ ಗುಣಮಟ್ಟದ ಬ್ಯಾಟ್ಸ್‌ಮನ್ ಎಂಬುದು ನಮಗೆಲ್ಲ ತಿಳಿದಿದೆ. ಆದರೆ ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಆಡುತ್ತಿರುವ ಜೈಸ್ವಾಲ್, ಟೀಂ ಇಂಡಿಯಾದ ಉದಯೋನ್ಮುಖ ಸೂಪರ್‌ಸ್ಟಾರ್. ಅವರು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜರ ಹಾದಿಯನ್ನೇ ಅನುಸರಿಸುತ್ತಿರುವ ನಿರ್ಭೀತ ಕ್ರಿಕೆಟಿಗ ಎಂದು ಬಣ್ಣಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Wed, 27 November 24

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ