AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಎಡ್ಜ್‌ಬಾಸ್ಟನ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ

Team India's Dominant Win at Edgbaston: ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಶುಭ್‌ಮನ್ ಗಿಲ್ ಅವರ ಅಮೋಘ ಬ್ಯಾಟಿಂಗ್ ಮತ್ತು ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಮಾರಕ ಬೌಲಿಂಗ್‌ನಿಂದಾಗಿ ಭಾರತ ಭಾರಿ ಅಂತರದಿಂದ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯು 1-1ರ ಸಮಬಲದಲ್ಲಿ ಉಳಿದಿದೆ.

IND vs ENG: ಎಡ್ಜ್‌ಬಾಸ್ಟನ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ
Ind Vs Eng
ಪೃಥ್ವಿಶಂಕರ
|

Updated on:Jul 06, 2025 | 10:09 PM

Share

ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ಟೀಂ ಇಂಡಿಯಾ (Team India) ಕೊನೆಗೂ ಗೆಲುವು ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ಲೀಡ್ಸ್‌ ಟೆಸ್ಟ್​ನಲ್ಲಿ ಗೆಲುವಿನ ಸನಿಹದಲ್ಲಿ ಎಡವಿದ್ದ ಟೀಂ ಇಂಡಿಯಾ ಇದೀಗ ಎಡ್ಜ್‌ಬಾಸ್ಟನ್ ಟೆಸ್ಟ್​ನಲ್ಲಿ ಭಾರಿ ಗೆಲುವು ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ರಲ್ಲಿ ಸಮಬಲ ಸಾಧಿಸಿದೆ. ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ನೀಡಿದ 608 ರನ್​ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್‌ 271 ರನ್​ಗಳಿಗೆ ಆಲೌಟ್ ಆಗುವ ಮೂಲಕ 337 ರನ್​ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಭಾರತದ ಈ ಗೆಲುವಿನಲ್ಲಿ ನಾಯಕ ಶುಭ್​ಮನ್ ಗಿಲ್ (Shubman Gill) ಬ್ಯಾಟಿಂಗ್​ನಲ್ಲಿ ಅಮೋಘ ಪ್ರದರ್ಶನ ನೀಡಿದರೆ, ಇತ್ತ ಬೌಲಿಂಗ್​ನಲ್ಲಿ ಆಕಾಶ್ ದೀಪ್ (Akash Deep) ಹಾಗೂ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಮಾರಕ ದಾಳಿ ನಡೆಸಿ ಆಂಗ್ಲರನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಈ ಗೆಲುವಿನೊಂದಿಗೆ ಭಾರತ 4ನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ತನ್ನ ಗೆಲುವಿನ ಖಾತೆಯನ್ನು ಸಹ ತೆರೆದಿದೆ.

ಪಂದ್ಯದ ಸಾರಾಂಶ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 587 ರನ್‌ ಕಲೆಹಾಕಿತು. ಆ ಬಳಿಕ ಇಂಗ್ಲೆಂಡ್ ತಂಡವನ್ನು 407 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 180 ರನ್‌ಗಳ ದೊಡ್ಡ ಮುನ್ನಡೆ ಪಡೆದುಕೊಂಡಿತು. ಆ ನಂತರ ಎರಡನೇ ಇನ್ನಿಂಗ್ಸ್​ನಲ್ಲಿ ನಾಯಕ ಶುಭ್​ಮನ್ ಗಿಲ್ ಅವರ ಶತಕ, ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಅವರ ಅರ್ಧಶತಕದ ನೆರವಿನಿಂದ ಆರು ವಿಕೆಟ್‌ಗಳಿಗೆ 427 ರನ್‌ ಬಾರಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಇಂಗ್ಲೆಂಡ್ ತಂಡಕ್ಕೆ 608 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡ ತನ್ನ ಎರಡನೇ ಇನ್ನಿಂಗ್ಸ್​ನಲ್ 271 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಪಂದ್ಯವನ್ನು ಕಳೆದುಕೊಂಡಿತು.

IND vs ENG: 10 ವಿಕೆಟ್ ಉರುಳಿಸಿ ದಿಗ್ಗಜ ಬೌಲರ್​ಗಳ ಪಟ್ಟಿಗೆ ಸೇರ್ಪಡೆಗೊಂಡ ಆಕಾಶ್ ದೀಪ್

ಇತಿಹಾಸ ನಿರ್ಮಿಸಿದ ಆಕಾಶ್ ದೀಪ್

ಈ ಗೆಲುವಿನೊಂದಿಗೆ 5 ಟೆಸ್ಟ್ ಪಂದ್ಯಗಳ ಸರಣಿಯು 1-1 ರಿಂದ ಸಮನಾಗಿದೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಗೆದ್ದಿತ್ತು. ಇದೀಗ ಎಡ್ಜ್‌ಬಾಸ್ಟನ್‌ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಕಾಶ್ ದೀಪ್ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್‌ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ನಡೆದ ಪಂದ್ಯವೊಂದರಲ್ಲಿ 10 ವಿಕೆಟ್‌ಗಳನ್ನು ಪಡೆದ ಎರಡನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಾಸಂಗಿಕವಾಗಿ, ಅವರಿಗಿಂತ ಮೊದಲು, ಚೇತನ್ ಶರ್ಮಾ 1986 ರಲ್ಲಿ ಇದೇ ಮೈದಾನದಲ್ಲಿ ಈ ಸಾಧನೆ ಮಾಡಿದ್ದರು.

Published On - 9:29 pm, Sun, 6 July 25

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ