AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ ಅಜೇಯ 223 ರನ್..! 44ನೇ ಓವರ್​ನಲ್ಲೇ 406 ರನ್​ಗಳ ಗುರಿ ಬೆನ್ನಟ್ಟಿದ ಭಾರತ

ಗುವಾಹಟಿಯಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ಎರಡನೇ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ 405 ರನ್ ದಾಖಲೆಯ ಗುರಿಯನ್ನು ಬೆನ್ನಟ್ಟಿ 8 ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಶುಭ್​ಮನ್ ಗಿಲ್ ಅಜೇಯ ದ್ವಿಶತಕ ಹಾಗೂ ರೋಹಿತ್ ಶರ್ಮಾ ಶತಕ ಸಿಡಿಸಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಅತಿ ದೊಡ್ಡ ರನ್ ಚೇಸ್ ಆಗಿದೆ.

ಗಿಲ್ ಅಜೇಯ 223 ರನ್..! 44ನೇ ಓವರ್​ನಲ್ಲೇ 406 ರನ್​ಗಳ ಗುರಿ ಬೆನ್ನಟ್ಟಿದ ಭಾರತ
ಭಾರತ Vs ವೆಸ್ಟ್ ಇಂಡೀಸ್Image Credit source: PTI
ಪೃಥ್ವಿಶಂಕರ
|

Updated on:Sep 30, 2026 | 10:29 PM

Share

ಗುವಾಹಟಿಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಉಭಯ ತಂಡಗಳಿಂದ ರನ್ ಮಳೆಯೇ ಹರಿದ ಈ ಪಂದ್ಯದಲ್ಲಿ 1 ದ್ವಿಶತಕ, 4 ಶತಕಗಳು ದಾಖಲಾದವು. ಎರಡು ತಂಡಗಳಿಂದ 800 ಕ್ಕೂ ಅಧಿಕ ರನ್​ಗಳು ಹರಿದುಬಂದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್ ಇಂಡೀಸ್ 405 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ 43.3 ಓವರ್​ಗಳಲ್ಲಿ ಈ ಗುರಿ ಬೆನ್ನಟ್ಟುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ 400+ ರನ್ ಗುರಿ ಬೆನ್ನಟ್ಟಿ ಗೆದ್ದ ಇತಿಹಾಸ ಬರೆಯಿತು. ಟೀಂ ಇಂಡಿಯಾ ಪರ ನಾಯಕ ಶುಭ್​ಮನ್ ಗಿಲ್ ಅಜೇಯ ದ್ವಿಶತಕ ಬಾರಿಸಿದರೆ, ರೋಹಿತ್ ಶರ್ಮಾ ಶತಕದ ಇನ್ನಿಂಗ್ಸ್ ಆಡಿದರು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು 400 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಗುರಿಯನ್ನು ಸಾಧಿಸಿದ್ದು ಇದು ಎರಡನೇ ಬಾರಿ ಎಂಬುದು ಗಮನಿಸಬೇಕಾದ ಸಂಗತಿ.

ವಿಂಡೀಸ್ ಪರ 3 ಶತಕಗಳು

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಪರ ಆರಂಭಿಕ ಜಾನ್ ಕ್ಯಾಂಪ್ಬೆಲ್ ಕೇವಲ 65 ಎಸೆತಗಳಲ್ಲಿ ಶತಕ ಪೂರೈಸಿದರು. ಅಂತಿಮವಾಗಿ ಅವರು 68 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಐದು ಸಿಕ್ಸರ್ ಸೇರಿದಂತೆ 101 ರನ್ ಗಳಿಸಿ ಔಟಾದರು. ಇತ್ತ ವಿರಾಟ್ ಕೊಹ್ಲಿ ನೀಡಿದ ಜೀವದಾನವನ್ನು ಸದುಪಯೋಗಪಡಿಸಿಕೊಂಡ ನಾಯಕ ಶೈ ಹೋಪ್ 94 ಎಸೆತಗಳಲ್ಲಿ 104 ರನ್ ಬಾರಿಸಿದರು.

405 ರನ್ ಕಲೆಹಾಕಿದ ವಿಂಡೀಸ್

ನಂತರ ಆಮಿರ್ ಜಂಗೂ ಕೂಡ ಕೇವಲ 69 ಎಸೆತಗಳಲ್ಲಿ 114 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದರು. ಏಕದಿನ ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್‌ನ ಮೂವರು ಬ್ಯಾಟ್ಸ್‌ಮನ್‌ಗಳು ಒಂದೇ ಪಂದ್ಯದಲ್ಲಿ ಶತಕ ಗಳಿಸಿದ್ದು ಇದೇ ಮೊದಲು. ಇದರ ಪರಿಣಾಮವಾಗಿ, ವಿಂಡೀಸ್ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 405 ರನ್ ಗಳಿಸಿತು. ಭಾರತದ ಪರ ಗುರ್ನೂರ್ ಬ್ರಾರ್, ಕುಲ್ದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

ಮೊದಲ ವಿಕೆಟ್​ಗೆ 255 ರನ್ ಜೊತೆಯಾಟ

406 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತದ ಪರ ಆರಂಭಿಕ ಜೋಡಿ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ ಆರಂಭಿಸಿತು. ಮಾಜಿ ನಾಯಕ ರೋಹಿತ್ ಶರ್ಮಾ 75 ಎಸೆತಗಳಲ್ಲಿ 10 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಿತ 101 ರನ್ ಬಾರಿಸಿದರೆ, ನಾಯಕ ಗಿಲ್ 117 ಎಸೆತಗಳಲ್ಲಿ ಏಕದಿನ ಇತಿಹಾಸದಲ್ಲಿ ಅತ್ಯಂತ ವೇಗದ ದ್ವಿಶತಕ ಬಾರಿಸುವ ಮೂಲಕ ತಂಡದ ಗೆಲುವು ಖಚಿತಪಡಿಸಿದರು. ಅಂತಿಮವಾಗಿ ಗಿಲ್ 133 ಎಸೆತಗಳಲ್ಲಿ 26 ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಹಿತ 223 ರನ್ ಗಳಿಸಿ ಅಜೇಯರಾಗಿ ಉಳಿದರು. ಅಲ್ಲದೆ ರೋಹಿತ್ ಮತ್ತು ಗಿಲ್ ಮೊದಲ ವಿಕೆಟ್​ಗೆ 255 ರನ್​ಗಳ ದಾಖಲೆಯ ಜೊತೆಯಾಟವನ್ನು ನೀಡಿದರು.

200 ಸಿಕ್ಸರ್, 12000 ರನ್..! ದಾಖಲೆಯ 35ನೇ ಶತಕ ಚಚ್ಚಿದ ರೋಹಿತ್ ಶರ್ಮಾ

43.3 ಓವರ್‌ಗಳಲ್ಲಿ ಗೆದ್ದ ಭಾರತ

ರೋಹಿತ್ ಔಟಾದ ಬಳಿಕ ಬಂದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲೂ ಆಕ್ರಮಣಕಾರಿ ಬ್ಯಾಟಿಂಗ್‌ ಮಾಡುವ ಮೂಲಕ 19 ಎಸೆತಗಳಲ್ಲಿ 29 ರನ್ ಬಾರಿಸಿ ಔಟಾದರು. ನಾಲ್ಕನೇ ಕ್ರಮಾಂಕದಲ್ಲಿ ಬಂದ ರುತುರಾಜ್ ಗಾಯಕ್ವಾಡ್ 31 ರನ್ ಬಾರಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ 43.3 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 406 ರನ್ ಗಳಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Wed, 30 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ