AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭೀತ ಆಟ, ಅಚಲ ವಿಶ್ವಾಸ: ಅಂಡರ್-19 ತಂಡವನ್ನು ಹೊಗಳಿದ ಗೌತಮ್ ಗಂಭೀರ್

ಒಮಾನ್‌ನಲ್ಲಿ ನಡೆದ 2026ರ ಪುರುಷರ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 1 ವಿಕೆಟ್‌ನಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತು. ಪಾಕಿಸ್ತಾನ ನೀಡಿದ 338 ರನ್‌ಗಳ ಬೃಹತ್ ಗುರಿಯನ್ನು ಭಾರತ ಯುವ ಪಡೆ ರೋಚಕವಾಗಿ ಬೆನ್ನಟ್ಟಿ ಜಯಗಳಿಸಿತು. ಈ ಅದ್ಭುತ ಗೆಲುವಿಗೆ ಗೌತಮ್ ಗಂಭೀರ್ ಅಭಿನಂದನೆ ಸಲ್ಲಿಸಿದ್ದಾರೆ. ಯುವ ಆಟಗಾರರ ಹೋರಾಟದ ಮನೋಭಾವವನ್ನು ಅವರು ಶ್ಲಾಘಿಸಿದ್ದಾರೆ.

ನಿರ್ಭೀತ ಆಟ, ಅಚಲ ವಿಶ್ವಾಸ: ಅಂಡರ್-19 ತಂಡವನ್ನು ಹೊಗಳಿದ ಗೌತಮ್ ಗಂಭೀರ್
ಗೌತಮ್ ಗಂಭೀರ್, ಭಾರತ ಯುವ ಪಡೆ
ಪೃಥ್ವಿಶಂಕರ
|

Updated on:Nov 15, 2026 | 2:48 PM

Share

ಒಮಾನ್‌ನ ಅಲ್ ಅಮೆರತ್ ಕ್ರಿಕೆಟ್ ಮೈದಾನದಲ್ಲಿ ನಡೆದ 2026ರ ಪುರುಷರ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಹೋರಾಟ ಪ್ರದರ್ಶಿಸಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಪಾಕಿಸ್ತಾನ ನೀಡಿದ್ದ 338 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ, ಕೊನೆಯ ಓವರ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 339 ರನ್ ಗಳಿಸಿ ಒಂದು ವಿಕೆಟ್‌ನ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಬಳಿಕ ಭಾರತ ಯುವ ಪಡೆಗೆ ಟೀಂ ಇಂಡಿಯಾದ ಹಿರಿಯರ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅಭಿನಂದನೆ ಸಲ್ಲಿಸಿದ್ದಾರೆ.

ಬ್ಯಾಟಿಂಗ್ ಕ್ರಮಾಂಕದ ಹಂಗಿಲ್ಲ

ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಒಂದು ವಿಕೆಟ್‌ನಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ರೋಚಕ ಗೆಲುವಿನ ಬಳಿಕ ಗಂಭೀರ್ ತಮ್ಮ ಎಕ್ಸ್ ಖಾತೆಯಲ್ಲಿ ಯುವ ಆಟಗಾರರ ಧೈರ್ಯ, ಆತ್ಮವಿಶ್ವಾಸ ಮತ್ತು ಹೋರಾಟದ ಮನೋಭಾವವನ್ನು ಕೊಂಡಾಡಿದ್ದು, ‘ನಿರ್ಭೀತ ಕ್ರಿಕೆಟ್, ಅಚಲ ನಂಬಿಕೆ ಮತ್ತು ಛಲಕ್ಕೆ ಬ್ಯಾಟಿಂಗ್ ಕ್ರಮಾಂಕದ ಹಂಗಿಲ್ಲ. ಏಷ್ಯಾದ ಚಾಂಪಿಯನ್ನರು! ಹುಡುಗರೇ, ಅದ್ಭುತ ಪ್ರದರ್ಶನ ನೀಡಿದ್ದೀರಿ. ನಿಮಗೆ ಅಭಿನಂದನೆಗಳು’ ಎಂದು ಗಂಭೀರ್ ಬರೆದುಕೊಂಡಿದ್ದಾರೆ.

ಕೊನೆಯ ಓವರ್‌ನಲ್ಲಿ ರೋಚಕ ಗೆಲುವು

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 337 ರನ್ ಗಳಿಸಿತು. ತಂಡದ ಪರ ಉಸ್ಮಾನ್ ಖಾನ್ 111 ಎಸೆತಗಳಲ್ಲಿ 107 ರನ್ ಸಿಡಿಸಿ ಮಿಂಚಿದರು. ಅಬ್ದುಲ್ ಖಾದಿರ್ 54 ಎಸೆತಗಳಲ್ಲಿ 80 ರನ್ ಗಳಿಸಿದರೆ, ನಾಯಕ ಫರ್ಹಾನ್ ಯೂಸುಫ್ 60 ಎಸೆತಗಳಲ್ಲಿ 63 ರನ್ ಕೊಡುಗೆ ನೀಡಿದರು. ಭಾರತದ ಪರ ಕಾವ್ಯಾ ಪಟೇಲ್ 68 ರನ್ ನೀಡಿ ನಾಲ್ಕು ವಿಕೆಟ್ ಪಡೆದರೆ, ಚಿಗುರುಪತಿ ವೆಂಕಟ ಮೂರು ವಿಕೆಟ್ ಕಬಳಿಸಿದರು.

ಬೃಹತ್ ಗುರಿ ಬೆನ್ನಟ್ಟಿದ ಭಾರತಕ್ಕೆ ನಾಯಕ ಲಕ್ಷ್ಯ ರಾಜೇಶ್ ರೈಚಂದಾನಿ ಆಸರೆಯಾದರು. ಅವರು 101 ಎಸೆತಗಳಲ್ಲಿ 80 ರನ್ ಗಳಿಸಿ ತಂಡದ ಗೆಲುವಿನ ಹೋರಾಟಕ್ಕೆ ಬಲ ತುಂಬಿದರು. ಮತ್ತೊಂದೆಡೆ ಆರ್ಯವೀರ್ ಸೆಹ್ವಾಗ್ 61 ಎಸೆತಗಳಲ್ಲಿ 58 ರನ್ ಗಳಿಸಿದರು. ಮನಲ್ ಚೌಹಾಣ್ 32 ಎಸೆತಗಳಲ್ಲಿ 47 ರನ್ ಸಿಡಿಸಿ ಭಾರತವನ್ನು ಗೆಲುವಿನ ಹಾದಿಯಲ್ಲಿ ಇರಿಸಿದರು.

ರಣರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಏಷ್ಯಾಕಪ್ ಗೆದ್ದ ಭಾರತ ಯುವ ಪಡೆ

ಕೊನೆಯ ಹಂತದಲ್ಲಿ ಮೊಹಿತ್ ಉಲ್ವಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 26 ಎಸೆತಗಳಲ್ಲಿ ಅಜೇಯ 49 ರನ್ ಗಳಿಸಿದ ಅವರು, ಐದು ಬೌಂಡರಿ ಮತ್ತು ಮೂರು ಸಿಕ್ಸರ್ ಸಿಡಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ವೆಂಕಟ 8 ಎಸೆತಗಳಲ್ಲಿ ಅಜೇಯ 11 ರನ್ ಗಳಿಸಿ ತಂಡದ ಗೆಲುವಿನಲ್ಲಿ ಕೈಜೋಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Sun, 15 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ