WCL 2025: ಪಾಕಿಸ್ತಾನದ ವಿರುದ್ಧ ಆಡಲು ನಿರಾಕರಿಸಿ ಟೂರ್ನಿಯಿಂದ ಹೆಸರನ್ನು ಹಿಂಪಡೆದ ಭಾರತ
India vs Pakistan WCL 2025: ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಲೀಗ್ನಿಂದ ಇಂಡಿಯಾ ಚಾಂಪಿಯನ್ಸ್ ತಂಡ ತನ್ನ ಹೆಸರನ್ನು ಅಧಿಕೃತವಾಗಿ ಹಿಂತೆಗೆದುಕೊಂಡಿದೆ. ಪಾಕಿಸ್ತಾನ ತಂಡದ ವಿರುದ್ಧ ಸೆಮಿಫೈನಲ್ ಪಂದ್ಯವನ್ನು ಆಡಲು ನಿರಾಕರಿಸಿದ ಭಾರತ ಟೂರ್ನಿಯಿಂದ ಹೊರಬಿದ್ದಿದೆ ಮತ್ತು ಪಾಕಿಸ್ತಾನ ಫೈನಲ್‌ಗೆ ನೇರ ಪ್ರವೇಶ ಪಡೆದಿದೆ. ಮೊದಲ ಸೀಸನ್ ಗೆದ್ದಿದ್ದ ಭಾರತ ಈ ಬಾರಿ ಟೂರ್ನಮೆಂಟ್‌ನಿಂದ ಹೊರಗುಳಿದಿದೆ.

ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL 2025) ಲೀಗ್ನ ಎರಡನೇ ಆವೃತ್ತಿ ಭಾರತ ಹಾಗೂ ಪಾಕಿಸ್ತಾನ ನಡುವಿನ ವಿವಾದಗಳಿಂದಲೇ ಸಾಕಷ್ಟು ಸುದ್ದಿಯಾಗಿದೆ. ಈ ಮೊದಲು ಪಾಕಿಸ್ತಾನ ವಿರುದ್ಧ ಲೀಗ್ ಹಂತದ ಪಂದ್ಯವನ್ನು ಬಹಿಷ್ಕರಿಸಿದ್ದ ಇಂಡಿಯಾ ಚಾಂಪಿಯನ್ಸ್ ತಂಡ (India Champions vs Pakistan Champions), ಇದೀಗ ಸೆಮಿಫೈನಲ್ನಲ್ಲೂ ಪಾಕಿಸ್ತಾನದ ವಿರುದ್ಧ ಆಡಲು ನಿರಾಕರಿಸಿ, ಟೂರ್ನಿಯಿಂದ ತನ್ನ ಹೆಸರನ್ನು ಅಧಿಕೃತವಾಗಿ ಹಿಂತೆಗೆದುಕೊಂಡಿದೆ. ಇದರರ್ಥ ಇಂಡಿಯಾ ಚಾಂಪಿಯನ್ಸ್ ತಂಡ ಇದೀಗ ಟೂರ್ನಿಯಿಂದ ಹೊರಬಿದ್ದಿದೆ. ಇದರ ಲಾಭ ಪಡೆದುಕೊಂಡಿರುವ ಪಾಕಿಸ್ತಾನ ಚಾಂಪಿಯನ್ಸ್ ತಂಡ ಸೆಮಿಫೈನಲ್ ಪಂದ್ಯವನ್ನು ಆಡದೆ ನೇರವಾಗಿ ಫೈನಲ್ ಪ್ರವೇಶಿಸಿದೆ.
WCL ನಿಂದ ಹೊರಬಿದ್ದ ಭಾರತ
ಈ ವರ್ಷದ ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಇದು ಕ್ರೀಡೆಯ ಮೇಲೂ ಪರಿಣಾಮ ಬೀರಿದೆ. ಭಯೋತ್ಪಾದನೆಗೆ ಬೆಂಗಾವಲಾಗಿ ನಿಂತಿರುವ ಪಾಕಿಸ್ತಾನದ ವಿರುದ್ಧ ಪಂದ್ಯವನ್ನಾಡಲು ಇಂಡಿಯಾ ಚಾಂಪಿಯನ್ಸ್ ತಂಡದ ಆಟಗಾರರು ನಿರಾಕರಿಸಿದರು. ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರಂತಹ ಮಾಜಿ ಭಾರತೀಯ ಕ್ರಿಕೆಟಿಗರು ಈ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಹೀಗಾಗಿ ಲೀಗ್ ಹಂತದ ಪಂದ್ಯ ರದ್ದಾಗಿತ್ತು. ಆದರೀಗ ಸೆಮಿಫೈನಲ್ ಪಂದ್ಯವನ್ನು ಸಹ ಇಂಡಿಯಾ ಚಾಂಪಿಯನ್ಸ್ ಆಟಗಾರರು ಬಹಿಷ್ಕರಿಸಿದ್ದಾರೆ. ಹೀಗಾಗಿ ಸ್ಪೋರ್ಟ್ಸ್ ತಕ್ ವರದಿಯ ಪ್ರಕಾರ, ಭಾರತ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನಿಂದ ಹಿಂದೆ ಸರಿದಿದ್ದು, ಪಾಕಿಸ್ತಾನ ಈಗ ನೇರವಾಗಿ ಪಂದ್ಯಾವಳಿಯ ಫೈನಲ್‌ಗೆ ತಲುಪಿದೆ.
🚨 INDIA OUT OF WCL SEMI FINAL 🚨
– India Champions Officially pull out of World Championship of Legends. This means, Pakistan Champions qualify into the Final 😲
~ What’s your take on this 🤔 pic.twitter.com/WzDL9JFOCE
— Richard Kettleborough (@RichKettle07) July 30, 2025
ಇಂಡಿಯಾ ಚಾಂಪಿಯನ್ಸ್ ತಂಡದ ಧೃಡ ನಿರ್ಧಾರದಿಂದಾಗಿ ಪಾಕಿಸ್ತಾನ ಚಾಂಪಿಯನ್ಸ್ ತಂಡ ನೇರವಾಗಿ ಫೈನಲ್ಗೇರಿದ್ದು, ಇದೀಗ ಎರಡನೇ ಸೆಮಿಫೈನಲ್ ಗೆದ್ದ ತಂಡವನ್ನು ಫೈನಲ್ನಲ್ಲಿ ಎದುರಿಸಲಿದೆ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ಸ್ ಹಾಗೂ ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಕಳೆದ ಬಾರಿ ಪ್ರಶಸ್ತಿ ಗೆದ್ದಿದ್ದ ಭಾರತ
ಮೇಲೆ ಹೇಳಿದಂತೆ ಇದು ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ ಎರಡನೇ ಸೀಸನ್ ಆಗಿದ್ದು, ಮೊದಲ ಸೀಸನ್ ಅನ್ನು ಇಂಡಿಯಾ ಚಾಂಪಿಯನ್ಸ್ ಗೆದ್ದುಕೊಂಡಿತ್ತು. ಮೊದಲ ಆವೃತ್ತಿಯ ಫೈನಲ್ನಲ್ಲಿ ಇಂಡಿಯಾ ಚಾಂಪಿಯನ್ಸ್, ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಫೈನಲ್ ಗೆದ್ದಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:28 pm, Wed, 30 July 25
