INDW vs SAW: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ; ಸರಣಿ ಕೈವಶ

INDW vs SAW: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ 4 ರನ್​ಗಳ ರಣರೋಚಕ ಜಯ ಸಾಧಿಸಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯವನ್ನು ಕೈವಶ ಮಾಡಿಕೊಂಡಿದೆ.

INDW vs SAW: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ; ಸರಣಿ ಕೈವಶ
ಭಾರತ ವನಿತಾ ಪಡೆ
Follow us
ಪೃಥ್ವಿಶಂಕರ
|

Updated on:Jun 19, 2024 | 9:17 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ (India Women vs South Africa Women) ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ 4 ರನ್​ಗಳ ರಣರೋಚಕ ಜಯ ಸಾಧಿಸಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯವನ್ನು ಕೈವಶ ಮಾಡಿಕೊಂಡಿದೆ. ಕೊನೆಯವರೆಗೂ ಗೆಲುವಿಗಾಗಿ ಹೋರಾಡಿದ ಆಫ್ರಿಕಾ ತಂಡ ವಿರೋಚಿತ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕಿ ಹರ್ಮನ್​ಪ್ರೀತ್ ಕೌರ್ ಹಾಗೂ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅವರ ಶತಕದ ನೆರವಿನಿಂದ ನಿಗದಿತ 50 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು ದಾಖಲೆಯ 325 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 321 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ನಾಯಕಿ ಲಾರಾ ವೊಲ್ವಾರ್ಡ್ಟ್ ಅಜೇಯ 135 ರನ್ ಹಾಗೂ ಮರಿಜಾನ್ನೆ ಕಪ್ 114 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಕ್ಯಾಪ್- ಲಾರಾ ವೊಲ್ವಾರ್ಡ್ ಶತಕ

ಗೆಲುವಿಗೆ 326 ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡ 14 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ತಾಜ್ಮೀನ್ ಬ್ರಿಟ್ಸ್ 11 ಎಸೆತಗಳಲ್ಲಿ ಕೇವಲ ಐದು ರನ್ ಗಳಿಸಲಷ್ಟೇ ಶಕ್ತರಾದರು. ಅನ್ನೆಕೆ ಬಾಷ್ 23 ಎಸೆತಗಳಲ್ಲಿ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಲೂಸ್ 12 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಇದಾದ ಬಳಿಕ ಕ್ಯಾಪ್ ಮತ್ತು ಲಾರಾ ನಡುವೆ 170 ಎಸೆತಗಳಲ್ಲಿ 184 ರನ್‌ಗಳ ಜೊತೆಯಾಟವಿತ್ತು. ಮರಿಜ್ನೆ ಕ್ಯಾಪ್ 94 ಎಸೆತಗಳಲ್ಲಿ 114 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು ಮೂರು ಸಿಕ್ಸರ್‌ ಸೇರಿದ್ದವು. ಕೊನೆಯಲ್ಲಿ ನಡಿನ್ ಡಿ ಕ್ಲರ್ಕ್ 22 ಎಸೆತಗಳಲ್ಲಿ 28 ರನ್ ಗಳಿಸಿದರು. ಆರಂಭದಿಂದಲೂ ಗೆಲುವಿಗಾಗಿ ಹೋರಾಟ ನೀಡಿದ ನಾಯಕಿ ಲಾರಾ ವೊಲ್ವಾರ್ಡ್ 135 ಎಸೆತಗಳಲ್ಲಿ 135 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು ಮೂರು ಸಿಕ್ಸರ್‌ ಸೇರಿದ್ದವು. ಕೊನೆಯ ಓವರ್‌ನಲ್ಲಿ ಆಫ್ರಿಕಾ ಗೆಲುವಿಗೆ 11 ರನ್‌ಗಳ ಅಗತ್ಯವಿತ್ತು. ಆದರೆ ತಂಡ ಕೇವಲ 6 ರನ್ ಗಳಿಸಲಷ್ಟೇ ಶಕ್ತವಾಯಿತು.

ಪೂಜಾ ವಸ್ತ್ರಾಕರ ಪವಾಡ

ಕೊನೆಯ ಓವರ್‌ನಲ್ಲಿ ಆಫ್ರಿಕಾ ಗೆಲುವಿಗೆ ಕೇವಲ 11 ರನ್‌ ಮಾತ್ರ ಬೇಕಾಗಿತ್ತು. ಭಾರತದ ಪರ ಪೂಜಾ ವಸ್ತ್ರಾಕರ್ ಬೌಲಿಂಗ್ ಮಾಡುವ ಜವಬ್ದಾರಿ ಹೊತ್ತಿದ್ದರು. ಪೂಜಾ ಅವರ ಎರಡನೇ ಎಸೆತದಲ್ಲಿ ಡಿ ಕ್ಲರ್ಕ್ ಬೌಂಡರಿ ಬಾರಿಸಿದರು ಆದರೆ ಇದರ ನಂತರ ವಸ್ತ್ರಕರ್ ಮುಂದಿನ ಎರಡು ಎಸೆತಗಳಲ್ಲಿ ಅದ್ಭುತಗಳನ್ನು ಮಾಡಿದರು. ವಸ್ತ್ರಾಕರ್ ಮೂರನೇ ಎಸೆತದಲ್ಲಿ ಡಿ ಕ್ಲರ್ಕ್ ಅವರನ್ನು ಔಟ್ ಮಾಡಿದರೆ, ಮುಂದಿನ ಎಸೆತದಲ್ಲಿ ಶಾಂಗಾಸೆ ವಿಕೆಟ್ ಪಡೆದರು. ವಸ್ತ್ರಾಕರ್ ಕೊನೆಯ ಎರಡು ಎಸೆತಗಳಲ್ಲಿ ಕೇವಲ ಒಂದು ರನ್ ನೀಡಿದ್ದರಿಂದ ಟೀಂ ಇಂಡಿಯಾ ಪಂದ್ಯ ಹಾಗೂ ಸರಣಿಯನ್ನು ರೋಚಕವಾಗಿ ಗೆದ್ದುಕೊಂಡಿತು.

ನಿದಾನಗತಿಯ ಆರಂಭ

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆಮೆಗತಿಯ ಆರಂಭ ಪಡೆದುಕೊಂಡಿತು. ಹೀಗಾಗಿ ತಂಡ ಮೊದಲ 10 ಓವರ್‌ಗಳಲ್ಲಿ 28 ರನ್ ಗಳಿಸಲಷ್ಟೇ ಶಕ್ತವಾಯಿತು. 17 ಓವರ್‌ಗಳಲ್ಲಿ ಟೀಂ ಇಂಡಿಯಾದ 50 ರನ್‌ಗಳು ಪೂರ್ಣಗೊಂಡವು. ಆದರೆ ಇದಾದ ಬಳಿಕ ಮಂಧಾನ ಮತ್ತು ಹೇಮಲತಾ ವೇಗದ ಬ್ಯಾಟಿಂಗ್ ನಡೆಸಿ ಕೇವಲ 57 ಎಸೆತಗಳಲ್ಲಿ 50 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ಮಂಧಾನ 67 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹೇಮಲತಾ ಅವರ ವಿಕೆಟ್ ಪತನದ ನಂತರ, ಮಂಧಾನ ಜೊತೆಗೂಡಿದ ನಾಯಕಿ ಹರ್ಮನ್‌ಪ್ರೀತ್ ಸ್ಫೋಟಕ ಆಟಕ್ಕೆ ಮುಂದಾದರು. ಇವರಿಬ್ಬರೂ ಕೇವಲ 90 ಎಸೆತಗಳಲ್ಲಿ ಶತಕದ ಜೊತೆಯಾಟ ನೀಡುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು ಹಿಮ್ಮೆಟ್ಟಿಸಿದರು. ಹರ್ಮನ್‌ಪ್ರೀತ್ 58 ಎಸೆತಗಳಲ್ಲಿ ಅರ್ಧಶತಕ ಗಳಿಸಿದರೆ, ಮಂಧಾನ 103 ಎಸೆತಗಳಲ್ಲಿ ದಾಖಲೆಯ ಶತಕ ಗಳಿಸುವಲ್ಲಿ ಯಶಸ್ವಿಯಾದರು.

ದಾಖಲೆಯ ಜೊತೆಯಾಟ

ಅಂತಿಮವಾಗಿ ಸ್ಮೃತಿ 120 ಎಸೆತಗಳಲ್ಲಿ 18 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 136 ರನ್​ಗಳ ಇನ್ನಿಂಗ್ಸ್ ಆಡಿದರೆ, ಹರ್ಮನ್​ಪ್ರೀತ್ ಕೌರ್ ತಮ್ಮ ಇನ್ನಿಂಗ್ಸ್​ನಲ್ಲಿ 88 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 103 ರನ್ ಬಾರಿಸಿದರು. ಅಲ್ಲದೆ ಈ ಇಬ್ಬರೂ 136 ಎಸೆತಗಳಲ್ಲಿ 171 ರನ್‌ಗಳ ಜೊತೆಯಾಟವನ್ನು ಮಾಡುವ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧ ತಂಡ 300 ರ ಗಡಿ ದಾಟುವಂತೆ ಮಾಡಿದರು. ಕೊನೆಯಲ್ಲಿ ರಿಚಾ ಘೋಷ್ 13 ಎಸೆತಗಳಲ್ಲಿ 25 ರನ್ ಗಳಿಸಿದರು. ಈ ಆಟಗಾರ್ತಿಯರಿಂದಲೇ ಭಾರತ ಮಹಿಳಾ ತಂಡ 325 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Wed, 19 June 24

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ