IND vs WI: ಟಿ20 ಸರಣಿ ಜೊತೆಗೆ ಏಕದಿನ ಸರಣಿಯನ್ನೂ ಗೆದ್ದ ಟೀಂ ಇಂಡಿಯಾ

India Women vs West Indies Women 2nd ODI: ವೆಸ್ಟ್ ಇಂಡೀಸ್ ಮಹಿಳಾ ತಂಡದ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದ್ದ ಭಾರತ ವನಿತಾ ಪಡೆ ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಉಭಯ ತಂಡಗಳ ನಡುವೆ ಇಂದು ನಡೆದ 2ನೇ ಏಕದಿನ ಪಂದ್ಯವನ್ನು ಭಾರತ 115 ರನ್​ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದೆ.

IND vs WI: ಟಿ20 ಸರಣಿ ಜೊತೆಗೆ ಏಕದಿನ ಸರಣಿಯನ್ನೂ ಗೆದ್ದ ಟೀಂ ಇಂಡಿಯಾ
ಭಾರತ ವನಿತಾ ಪಡೆ
Follow us
ಪೃಥ್ವಿಶಂಕರ
|

Updated on:Dec 24, 2024 | 9:38 PM

ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ವನಿತಾ ಪಡೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದಿದ್ದ ಮೊದಲ ಏಕದಿನ ಪಂದ್ಯವನ್ನು 211 ರನ್​ಗಳಿಂದ ಗೆದ್ದುಕೊಂಡಿದ್ದ ಟೀಂ ಇಂಡಿಯಾ ಇದೀಗ ಎರಡನೇ ಏಕದಿನ ಪಂದ್ಯದಲ್ಲೂ 115 ರನ್​ಗಳ ಬೃಹತ್ ಜಯ ಸಾಧಿಸಿದೆ. ಇದರೊಂದಿಗೆ ಟಿ20 ಹಾಗೂ ಏಕದಿನ ಸರಣಿಗಾಗಿ ಭಾರತ ಪ್ರವಾಸ ಕೈಗೊಂಡಿದ್ದ ವೆಸ್ಟ್ ಇಂಡೀಸ್ ತಂಡ ಖಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗಬೇಕಾಗಿದೆ. ಏಕದಿನ ಸರಣಿಗೂ ಮುನ್ನ ನಡೆದಿದ್ದ ಟಿ20 ಸರಣಿಯನ್ನೂ ಟೀಂ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿತ್ತು.

ಭಾರತಕ್ಕೆ ಶತಕದ ಆರಂಭ

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಐದು ವಿಕೆಟ್‌ಗೆ 358 ರನ್ ಗಳಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಮೊದಲ ವಿಕೆಟ್​ಗೆ 110 ರನ್​ಗಳ ಜೊತೆಯಾಟ ನೀಡಿದರು. ಈ ವೇಳೆ ಎಂದಿನಂತೆ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಸ್ಮೃತಿ ಮಂಧಾನ ಸರಣಿಯಲ್ಲಿ ಸತತ ಎರಡನೇ ಅರ್ಧಶತಕ ಸಿಡಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 47 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಸಹಿತ 53 ರನ್ ಕಲೆಹಾಕಿದರು.

ಸ್ಮೃತಿ ಮಂಧಾನಗೆ ಆರಂಭದಿಂದಲೂ ಉತ್ತಮ ಸಾಥ್ ನೀಡಿದ ಯುವ ಬ್ಯಾಟರ್ ಪ್ರತೀಕಾ ರಾವಲ್ ಕೂಡ ತಮ್ಮ ಚೊಚ್ಚಲ ಏಕದಿನ ಅರ್ಧಶತಕವನ್ನು ಪೂರ್ಣಗೊಳಿಸಿದರು. ವಾಸ್ತವವಾಗಿ ವಿಂಡೀಸ್ ವಿರುದ್ಧದ ಏಕದಿನ ಸರಣಿಯೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಪ್ರತೀಕಾ ತನ್ನ ಎರಡನೇ ಪಂದ್ಯದಲ್ಲಿ 86 ಎಸೆತಗಳಲ್ಲಿ 10 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 76 ರನ್ ಕಲೆಹಾಕಿದರು.

ಹರ್ಲೀನ್ ಚೊಚ್ಚಲ ಶತಕ

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಹರ್ಲಿನ್ ಡಿಯೋಲ್ ಬರೋಬ್ಬರಿ 6 ವರ್ಷಗಳ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಪೂರ್ಣಗೊಳಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 103 ಎಸೆತಗಳನ್ನು ಎದುರಿಸಿದ ಹರ್ಲಿನ್ 16 ಬೌಂಡರಿಗಳ ಸಹಾಯದಿಂದ 115 ರನ್​ಗಳ ಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಹರ್ಲಿನ್ ಡಿಯೋಲ್​ಗೆ ಉತ್ತಮ ಸಾಥ್ ನೀಡಿದ ಜೆಮಿಮಾ ರಾಡ್ರಿಗಸ್​ ಕೂಡ ಕೇವಲ 36 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 52 ರನ್​ಗಳ ಇನ್ನಿಂಗ್ಸ್ ಆಡಿದರು. ಇದಲ್ಲದೆ ಹರ್ಲಿನ್ ಡಿಯೋಲ್ ಜೊತೆಗೆ ಶತಕದ ಜೊತೆಯಾಟ ಕೂಡ ಆಡಿದರು. ಈ ನಾಲ್ವರ ಆಟದಿಂದಾಗಿ ಟೀಂ ಇಂಡಿಯಾ 358 ರನ್ ಕಲೆಹಾಕಲು ಸಾಧ್ಯವಾಯಿತು.

243 ರನ್​ಗಳಿಗೆ ವಿಂಡೀಸ್ ಆಲೌಟ್

ಟೀಂ ಇಂಡಿಯಾ ನೀಡಿದ 359 ರನ್​ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 46.2 ಓವರ್​ಗಳಲ್ಲಿ 243 ರನ್ ಗಳಿಗೆ ಆಲೌಟ್ ಆಯಿತು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕಿ ಹೇಲಿ ಮ್ಯಾಥ್ಯೂಸ್ 106 ರನ್​ಗಳ ಶತಕದ ಇನ್ನಿಂಗ್ಸ್ ಆಡಿದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಶೆಮೈನ್ ಕ್ಯಾಂಪ್ಬೆಲ್ಲೆ ಅವರಿಂದ 38 ರನ್​ಗಳ ಕೊಡುಗೆ ಬಂದಿದ್ದನ್ನು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಇತ್ತ ಬೌಲಿಂಗ್​ನಲ್ಲಿ ಮಿಂಚಿದ ಪ್ರಿಯಾ ಮಿಶ್ರಾ ಮೂರು ವಿಕೆಟ್ ಪಡೆದರೆ, ಪ್ರತೀಕಾ ಪಾಟೀಲ್, ದೀಪ್ತಿ ಶರ್ಮಾ ಮತ್ತು ಟಿಟಾಸ್ ಸಾಧು ತಲಾ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 pm, Tue, 24 December 24

ಆತುರದಲ್ಲಿ ಚಿಕನ್ ತಿಂದ ಧನರಾಜ್ ಆಚಾರ್; ಹೇಗಿದೆ ನೋಡಿ ಒದ್ದಾಟ
ಆತುರದಲ್ಲಿ ಚಿಕನ್ ತಿಂದ ಧನರಾಜ್ ಆಚಾರ್; ಹೇಗಿದೆ ನೋಡಿ ಒದ್ದಾಟ
ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ