AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

India Women's Cricket Squad for Australia Tour Announced: ಪ್ರಸ್ತುತ ಮಹಿಳಾ ಪ್ರೀಮಿಯರ್ ಲೀಗ್ ನಡೆಯುತ್ತಿರುವ ನಡುವೆ, ಭಾರತ ಮಹಿಳಾ ತಂಡದ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಫೆಬ್ರವರಿ 15 ರಿಂದ ಮಾರ್ಚ್ 1 ರವರೆಗೆ ನಡೆಯಲಿರುವ ಈ ಪ್ರವಾಸದಲ್ಲಿ 3 ಏಕದಿನ ಮತ್ತು 3 ಟಿ20 ಸರಣಿಗಳನ್ನು ಭಾರತ ವನಿತಾ ಪಡೆ ಆಡಲಿದೆ. ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿರುತ್ತಾರೆ. ಕನ್ನಡತಿ ಶ್ರೇಯಾಂಕ ಪಾಟೀಲ್ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.

IND vs AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ
Ind Vs Aus
ಪೃಥ್ವಿಶಂಕರ
|

Updated on:Jan 17, 2026 | 10:15 PM

Share

ಪ್ರಸ್ತುತ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ನಡುವೆ ಭಾರತ ಮಹಿಳಾ ತಂಡದ ಆಸ್ಟ್ರೇಲಿಯಾ ಪ್ರವಾಸಕ್ಕೆ (India Women’s Team for Australia Tour) ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ವನಿತಾ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಎರಡೂ ತಂಡಗಳನ್ನು ಹರ್ಮನ್‌ಪ್ರೀತ್ ಕೌರ್ (Harmanpreet Kaur) ಮುನ್ನಡೆಸಲಿದ್ದು, ಎಂದಿನಂತೆ ಸ್ಮೃತಿ ಮಂಧಾನ ತಂಡದ ಉಪನಾಯಕತ್ವವಹಿಸಿಕೊಂಡಿದ್ದಾರೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್​ 1 ರಂದು ನಡೆಯಲಿರುವ ಏಕದಿನ ಸರಣಿಯ ಕೊನೆಯ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಎರಡೂ ಸರಣಿಗಳಿಗೆ ಭಾಗಶಃ ಒಂದೇ ತಂಡವನ್ನು ಆಯ್ಕೆ ಮಾಡಲಾಗಿದೆ. ಖುಷಿಯ ಸಂಗತಿಯೆಂದರೆ ಟಿ20 ಸರಣಿಗೆ ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರನ್ನು ಆಯ್ಕೆ ಮಾಡಲಾಗಿದೆ.

ಸರಣಿಯ ವೇಳಾಪಟ್ಟಿ

ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ ಫೆಬ್ರವರಿ 15 ರಂದು ಸಿಡ್ನಿಯಲ್ಲಿ ನಡೆಯಲಿದೆ. ಎರಡನೇ ಟಿ20ಪಂದ್ಯ ಫೆಬ್ರವರಿ 19 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಫೆಬ್ರವರಿ 21 ರಂದು ಅಡಿಲೇಡ್ ಓವಲ್‌ನಲ್ಲಿ ನಡೆಯಲಿದೆ. ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 24 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಫೆಬ್ರವರಿ 27 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಮಾರ್ಚ್ 1 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ.

ಟಿ20 ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಅಮಾನ್‌ಜೋತ್ ಕೌರ್,ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ಶ್ರೇಯಾಂಕಾ ಪಾಟೀಲ್.

ಏಕದಿನ ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ,ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್),ಕಾಶ್ವೀ ಗೌತಮ್, ಅಮನ್ಜೋತ್ ಕೌರ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sat, 17 January 26