
ಪ್ರಸ್ತುತ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ನಡುವೆ ಭಾರತ ಮಹಿಳಾ ತಂಡದ ಆಸ್ಟ್ರೇಲಿಯಾ ಪ್ರವಾಸಕ್ಕೆ (India Women’s Team for Australia Tour) ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ವನಿತಾ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಎರಡೂ ತಂಡಗಳನ್ನು ಹರ್ಮನ್‌ಪ್ರೀತ್ ಕೌರ್ (Harmanpreet Kaur) ಮುನ್ನಡೆಸಲಿದ್ದು, ಎಂದಿನಂತೆ ಸ್ಮೃತಿ ಮಂಧಾನ ತಂಡದ ಉಪನಾಯಕತ್ವವಹಿಸಿಕೊಂಡಿದ್ದಾರೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್ 1 ರಂದು ನಡೆಯಲಿರುವ ಏಕದಿನ ಸರಣಿಯ ಕೊನೆಯ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಎರಡೂ ಸರಣಿಗಳಿಗೆ ಭಾಗಶಃ ಒಂದೇ ತಂಡವನ್ನು ಆಯ್ಕೆ ಮಾಡಲಾಗಿದೆ. ಖುಷಿಯ ಸಂಗತಿಯೆಂದರೆ ಟಿ20 ಸರಣಿಗೆ ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ ಫೆಬ್ರವರಿ 15 ರಂದು ಸಿಡ್ನಿಯಲ್ಲಿ ನಡೆಯಲಿದೆ. ಎರಡನೇ ಟಿ20ಪಂದ್ಯ ಫೆಬ್ರವರಿ 19 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಫೆಬ್ರವರಿ 21 ರಂದು ಅಡಿಲೇಡ್ ಓವಲ್‌ನಲ್ಲಿ ನಡೆಯಲಿದೆ. ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಫೆಬ್ರವರಿ 24 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯಲಿದ್ದು, ಎರಡನೇ ಏಕದಿನ ಪಂದ್ಯ ಫೆಬ್ರವರಿ 27 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಮಾರ್ಚ್ 1 ರಂದು ಹೋಬಾರ್ಟ್‌ನಲ್ಲಿ ನಡೆಯಲಿದೆ.
ಟಿ20 ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಅಮಾನ್‌ಜೋತ್ ಕೌರ್,ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ಶ್ರೇಯಾಂಕಾ ಪಾಟೀಲ್.
Presenting #TeamIndia’s squad for ODI & T20I series against Australia Women 🙌
Details ▶️ https://t.co/UCScQnfJdi#AUSvIND pic.twitter.com/afB4dqfNco
— BCCI Women (@BCCIWomen) January 17, 2026
ಏಕದಿನ ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ, ದೀಪ್ತಿ ಶರ್ಮಾ,ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್),ಕಾಶ್ವೀ ಗೌತಮ್, ಅಮನ್ಜೋತ್ ಕೌರ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:00 pm, Sat, 17 January 26