AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

India Women Cricket Team South Africa T20 Series: ಭಾರತ ಮಹಿಳಾ ಕ್ರಿಕೆಟ್ ತಂಡ ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸಿದ್ಧವಾಗಿದೆ. ಐದು ಪಂದ್ಯಗಳ ಟಿ20 ಸರಣಿಗಾಗಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ 15 ಆಟಗಾರ್ತಿಯರ ತಂಡವನ್ನು ಪ್ರಕಟಿಸಲಾಗಿದೆ. ಕಾಶ್ವಿ ಗೌತಮ್ ಮತ್ತು ಅನುಷ್ಕಾ ಶರ್ಮಾ ಮೊದಲ ಬಾರಿಗೆ ಅವಕಾಶ ಪಡೆದಿದ್ದಾರೆ. ಸರಣಿಯು ಏಪ್ರಿಲ್ 17 ರಿಂದ 27 ರವರೆಗೆ ನಡೆಯಲಿದೆ.

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ; ವೇಳಾಪಟ್ಟಿ ಪ್ರಕಟ
Ind Vs Sa Women
ಪೃಥ್ವಿಶಂಕರ
|

Updated on: Mar 25, 2026 | 7:05 PM

Share

2025 ರ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಮಹಿಳಾ ತಂಡ ಟಿ20 ಸರಣಿ ಗೆದ್ದು, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಸೋತಿತ್ತು. ಇದೀಗ ಹೊಸ ಪ್ರವಾಸಕ್ಕೆ ಸಜ್ಜಾಗಿರುವ ವನಿತಾ ಪಡೆ, ಐದು ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸಕ್ಕಾಗಿ ಇದೀಗ ಬಿಸಿಸಿಐ, ತಂಡವನ್ನು ಸಹ ಪ್ರಕಟಿಸಿದೆ. ಈ ಪ್ರವಾಸಕ್ಕೆ 15 ಆಟಗಾರ್ತಿಯರ ತಂಡವನ್ನು ಘೋಷಿಸಿದ್ದು, ಎಂದಿನಂತೆ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ.

ಇಬ್ಬರು ಆಟಗಾರ್ತಿಯರಿಗೆ ಮೊದಲ ಅವಕಾಶ

ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದ್ದು, ಇದಕ್ಕಾಗಿ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ಪ್ರವಾಸಕ್ಕಾಗಿ ಮೊದಲ ಬಾರಿಗೆ ಟಿ20 ತಂಡಕ್ಕೆ ಇಬ್ಬರು ಆಟಗಾರ್ತಿಯರನ್ನು ಆಯ್ಕೆ ಮಾಡಲಾಗಿದೆ. ಈ ಇಬ್ಬರು ಆಟಗಾರ್ತಿಯರೆಂದರೆ ಕಾಶ್ವಿ ಗೌತಮ್ ಮತ್ತು ಅನುಷ್ಕಾ ಶರ್ಮಾ.

ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ಅರುಂಧತಿ ರೆಡ್ಡಿ, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಶ್ರೀ ಚರಣಿ, ಶ್ರೇಯಂಕಾ ಪಾಟೀಲ್, ಕಾಶ್ವಿ ಗೌತಮ್, ಭಾರತಿ ಫುಲ್ಮಾಲಿ, ಉಮಾ ಛೆಟ್ರಿ, ಅನುಷ್ಕಾ ಶರ್ಮಾ.

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ವೇಳಾಪಟ್ಟಿ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸವು ಏಪ್ರಿಲ್ 17 ರಂದು ಪ್ರಾರಂಭವಾಗಲಿದೆ. ಪ್ರವಾಸವು ಐದು ಪಂದ್ಯಗಳ ಟಿ20 ಸರಣಿಯನ್ನು ಒಳಗೊಂಡಿದ್ದು, ಅಂತಿಮ ಪಂದ್ಯ ಏಪ್ರಿಲ್ 27 ರಂದು ನಡೆಯಲಿದೆ. ಮೊದಲ ಎರಡು ಪಂದ್ಯಗಳು ಏಪ್ರಿಲ್ 17 ಮತ್ತು 19 ರಂದು ಡರ್ಬನ್‌ನಲ್ಲಿ ನಡೆಯಲಿವೆ. ಮುಂದಿನ ಎರಡು ಪಂದ್ಯಗಳು ಏಪ್ರಿಲ್ 22 ಮತ್ತು 25 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿವೆ. ಸರಣಿಯ ಅಂತಿಮ ಪಂದ್ಯ ಏಪ್ರಿಲ್ 27 ರಂದು ಬೆನೋನಿಯಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ