AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಮತ್ತೆ ಸಿಡಿದ ಶಫಾಲಿ; ಭಾರತದ ಕೈಸೇರಿದ ಟಿ20 ಸರಣಿ

India Women Dominate Sri Lanka in 3rd T20I: ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಭಾರತ 3-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ರೇಣುಕಾ ಸಿಂಗ್, ದೀಪ್ತಿ ಶರ್ಮಾ ಉತ್ತಮ ಬೌಲಿಂಗ್ ಪ್ರದರ್ಶಿಸಿದರೆ, ಶೆಫಾಲಿ ವರ್ಮಾ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ತಂಡದ ಜಯಕ್ಕೆ ಕಾರಣರಾದರು.

IND-W vs SL-W: ಮತ್ತೆ ಸಿಡಿದ ಶಫಾಲಿ; ಭಾರತದ ಕೈಸೇರಿದ ಟಿ20 ಸರಣಿ
Shafali Varma
ಪೃಥ್ವಿಶಂಕರ
|

Updated on:Dec 26, 2025 | 9:59 PM

Share

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ಮಹಿಳಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ಮಹಿಳಾ ತಂಡವು (India vs Sri Lanka) ಏಕಪಕ್ಷೀಯ ಗೆಲುವು ಸಾಧಿಸಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿದೆ. ಮೂರನೇ ಟಿ20 ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಗೆಲುವಿನಲ್ಲಿ ರೇಣುಕಾ ಸಿಂಗ್, ದೀಪ್ತಿ ಶರ್ಮಾ ಮತ್ತು ಶೆಫಾಲಿ ವರ್ಮಾ (Shafali Verma) ಪ್ರಮುಖ ಪಾತ್ರವಹಿಸಿದರು. ಈ ಮೂವರ ಅದ್ಭುತ ಪ್ರದರ್ಶನದಿಂದಾಗಿ ಹರ್ಮನ್ ಪಡೆ ಸರಣಿಯಲ್ಲಿ 3-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಕೇವಲ 112 ರನ್ ಕಲೆಹಾಕಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 14 ನೇ ಓವರ್‌ನಲ್ಲಿ ಜಯದ ನಗೆ ಬೀರಿತು. ತಂಡದ ಪರ ಶೆಫಾಲಿ ವರ್ಮಾ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು.

ಮತ್ತೆ ಎಡವಿದ ಲಂಕಾ ಬ್ಯಾಟಿಂಗ್ ವಿಭಾಗ

ಎಂದಿನಂತೆ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ಪರ ಆರಂಭಿಕ ಆಟಗಾರ್ತಿ ಹಸಿನಿ ಪೆರೆರಾ (25) ವೇಗದ ಆರಂಭವನ್ನು ನೀಡಿದರು. ರೇಣುಕಾ ಅವರ ಮೊದಲ ಓವರ್‌ನಲ್ಲಿ ಎರಡು ಬೌಂಡರಿಗಳ ಸಹಾಯದಿಂದ 12 ರನ್ ಕಲೆಹಾಕಿದರು. ಆದರೆ ನಾಯಕಿ ಚಾಮರಿ ಅಟಪಟ್ಟು (3) ಅವರನ್ನು ದೀಪ್ತಿ ಔಟ್ ಮಾಡುವ ಮೂಲಕ ಲಂಕಾ ತಂಡಕ್ಕೆ ಮೊದಲ ಹೊಡೆತ ನೀಡಿದರು. ಆ ನಂತರ ರೇಣುಕಾ ತಮ್ಮ ಎರಡನೇ ಸ್ಪೆಲ್‌ನ ಆರನೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದರು. ಮೊದಲು ಫಾರ್ಮ್‌ನಲ್ಲಿರುವ ಹಸಿನಿ ಪೆರೆರಾ ಅವರನ್ನು ಔಟ್ ಮಾಡಿದ ಅವರು ಆ ನಂತರ ಹರ್ಷಿತಾ ಸಮರವಿಕ್ರಮ (2) ಅವರನ್ನು ಪೆವಿಲಿಯನ್​ಗಟ್ಟಿದರು.

150ನೇ ಟಿ20 ವಿಕೆಟ್ ಪಡೆದ ದೀಪ್ತಿ

ಹೀಗಾಗಿ ಲಂಕಾ ಕೇವಲ 32 ರನ್​ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ನಂತರ ರೇಣುಕಾ 10 ನೇ ಓವರ್‌ನಲ್ಲಿ ನೀಲಾಕ್ಷಿಕಾ ಸಿಲ್ವಾ ಅವರನ್ನು ಎಲ್‌ಬಿಡಬ್ಲ್ಯೂ ಔಟ್ ಮಾಡುವ ಮೂಲಕ ಲಂಕಾ ತಂಡಕ್ಕೆ ಆಘಾತ ನೀಡಿದರು. ಆದಾಗ್ಯೂ ಕವಿಶಾ ದಿಲ್ಹಾರಿ (20) ಮತ್ತು ಇಮೇಶಾ ದುಲಾನಿ 40 ರನ್‌ಗಳ ಜೊತೆಯಾಟವಾಡುವ ಮೂಲಕ ತಂಡದ ಇನ್ನಿಂಗ್ಸ್ ಕಟ್ಟುವ ಪ್ರಯತ್ನ ಮಾಡಿದರು. ಆದರೆ ಈ ವೇಳೆ ದಾಳಿಗಿಳಿದ ದೀಪ್ತಿ, ದಿಲ್ಹಾರಿಯನ್ನು ಔಟ್ ಮಾಡಿ ತಮ್ಮ 150 ನೇ ಟಿ20 ವಿಕೆಟ್ ಪೂರ್ಣಗೊಳಿಸಿದರು. ನಂತರ ರೇಣುಕಾ ಮತ್ತು ದೀಪ್ತಿ ನಿಯಮಿತ ಅಂತರದಲ್ಲಿ ವಿಕೆಟ್ ಪಡೆದು ಶ್ರೀಲಂಕಾ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದರು.

IND-W vs SL-W: ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್‌; ಟೀಂ ಇಂಡಿಯಾಗೆ ಸತತ 2ನೇ ಗೆಲುವು

ಸತತ 2ನೇ ಅರ್ಧಶತಕ ಬಾರಿಸಿದ ಶಫಾಲಿ

ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿತು. ಈ ಸರಣಿಯಲ್ಲಿ ಇದುವರೆಗೆ ಲಯಕಂಡುಕೊಳ್ಳದ ಸ್ಮೃತಿ ಮಂಧಾನ ಈ ಪಂದ್ಯದಲ್ಲೂ ಕೇವಲ 1 ರನ್​ಗೆ ಔಟಾದರು. ಇದರ ನಂತರ ಜೆಮಿಮಾ ರೊಡ್ರಿಗಸ್ ಕೂಡ ಕೇವಲ ಒಂಬತ್ತು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮಧ್ಯೆ, ಶೆಫಾಲಿ ವರ್ಮಾ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ, ಅಂತಿಮವಾಗಿ ಅಜೇಯ 79 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಶಫಾಲಿಗೆ ಸಾಥ್ ನೀಡಿದ ನಾಯಕಿ ಹರ್ಮನ್ಪ್ರೀತ್ ಕೌರ್ ಕೂಡ 21 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರಿಬ್ಬರ ಆಟದಿಂದಾಗಿ ಭಾರತ 13.2 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Fri, 26 December 25

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ