
ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (2026 Women’s T20 World Cup) ಇತಿಹಾಸ ಸೃಷ್ಟಿಸಿದೆ. ಲೀಡ್ಸ್‌ನಲ್ಲಿ ನಡೆದ ನೆದರ್ಲ್ಯಾಂಡ್ಸ್ (India vs Netherlands) ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದು 209 ರನ್ ಕಲೆಹಾಕಿತು. ತಂಡದ ಪರ ಆರಂಭಿಕರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಎರಡನೇ ಅತ್ಯಧಿಕ ಆರಂಭಿಕ ಜೊತೆಯಾಟವನ್ನು ದಾಖಲಿಸಿದರು. ಇವರಿಬ್ಬರ ಆಟದಿಂದಾಗಿ ಭಾರತ ತಂಡ 200 ರನ್‌ಗಳ ಗಡಿ ದಾಟುವ ಮೂಲಕ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ನಿರ್ಮಿಸಿತು.
2018 ರ ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ 8 ವಿಕೆಟ್ ನಷ್ಟಕ್ಕೆ 194 ರನ್ ಕಲೆಹಾಕಿದ್ದು, ಇದುವರೆಗಿನ ಅತ್ಯಧಿಕ ಮೊತ್ತವಾಗಿತ್ತು. ಇದೀಗ ಭಾರತ ತಂಡ 209 ರನ್ ಪೇರಿಸುವ ಮೂಲಕ ತನ್ನ ಹಳೆಯ ದಾಖಲೆಯನ್ನು ಮುರಿದಿದೆ. ಇದಕ್ಕೂ ಮೊದಲು ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡದ ವಿರುದ್ಧ 172 ರನ್ ಕಲೆಹಾಕಿತ್ತು. ಇನ್ನು ಟಿ20 ವಿಶ್ವಕಪ್‌ನಲ್ಲಿ ಇನ್ನಿಂಗ್ಸ್ವೊಂದರಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಪಟ್ಟಿಯಲ್ಲಿ ಇದೀಗ ಭಾರತ ತಂಡ ಮೂರನೇ ಸ್ಥಾನಕ್ಕೇರಿದೆ.
Women’s T20 World Cup 2026: ಟಿ20 ವಿಶ್ವಕಪ್‌ನಲ್ಲಿ ದಾಖಲೆ ಬರೆದ ಸ್ಮೃತಿ- ಶಫಾಲಿ ಜೋಡಿ
ಇನ್ನು ಇದೇ ಪಂದ್ಯದಲ್ಲಿ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಪರ ಅತ್ಯಧಿಕ ಆರಂಭಿಕ ಜೊತೆಯಾಟವಾಡಿದ ಜೋಡಿಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. 2014 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮಿಥಾಲಿ ರಾಜ್ ಮತ್ತು ಪೂನಮ್ ರಾವತ್ ನಿರ್ಮಿಸಿದ್ದ 117 ರನ್‌ಗಳ ದಾಖಲೆ ಈಗಲೂ ಅಗ್ರಸ್ಥಾನದಲ್ಲಿದೆ. ಈಗ ಸ್ಮೃತಿ ಮತ್ತು ಶೆಫಾಲಿ 115 ರನ್‌ಗಳ ಜೊತೆಯಾಟವನ್ನಾಡುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.