AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 Womens T20 World Cup 2023: ನ್ಯೂಜಿಲೆಂಡ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಭಾರತ

India Women U19 vs New Zealand Women U19: ಕರಾರುವಾಕ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಆಟಗಾರ್ತಿಯರು 20 ಓವರ್​ಗಳಲ್ಲಿ 9 ವಿಕೆಟ್ ಪಡೆದುಕೊಂಡು ನ್ಯೂಜಿಲೆಂಡ್ ತಂಡವನ್ನು ಕೇವಲ 107 ರನ್​ಗಳಿಗೆ ನಿಯಂತ್ರಿಸಿದರು.

U19 Womens T20 World Cup 2023: ನ್ಯೂಜಿಲೆಂಡ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಭಾರತ
Team India
TV9 Web
| Updated By: ಝಾಹಿರ್ ಯೂಸುಫ್|

Updated on:Jan 27, 2023 | 4:33 PM

Share

ICC Under 19 Womens T20 World Cup 2023: ಸೌತ್ ಆಫ್ರಿಕಾದ ಸೆನ್ವೆಸ್ ಪಾರ್ಕ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಫೈನಲ್​ ಪ್ರವೇಶಿಸಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಜಯಭೇರಿ ಬಾರಿಸಿ ಅಂತಿಮ ಘಟ್ಟ ತಲುಪಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಅಂಡರ್ 19 ತಂಡದ ನಾಯಕಿ ಶಫಾಲಿ ವರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

2ನೇ ಓವರ್​ನಲ್ಲಿ ಟೀಮ್ ಇಂಡಿಯಾಗೆ ಮನ್ನತ್ ಕಶ್ಯತ್ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಟಿಟಾಸ್ ಸಧು ಎಸೆತದಲ್ಲಿ ಎಮ್ಮಾ ಮೆಕ್​ಲಿಯೊಡ್ ಎಲ್​ಬಿಡಬ್ಲ್ಯೂ ಆದರು. ಈ ಹಂತದಲ್ಲಿ ಜೊತೆಯಾದ ಗೇಝ್ ಹಾಗೂ ಪ್ಲಿಂಮ್ಮರ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಈ ವೇಳೆ ದಾಳಿಗಿಳಿದ ಅರ್ಚನಾ ದೇವಿ ಪ್ಲಿಂಮ್ಮರ್​ನ (35) ಔಟ್ ಮಾಡಿದರೆ, ಪರ್ಶವಿ ಚೋಪ್ರಾ ಗೇಝ್ (26) ವಿಕೆಟ್ ಪಡೆದರು. ಬ್ಯಾಕ್ ಟು ಬ್ಯಾಕ್ ಎರಡು ಪಡೆದ ಟೀಮ್ ಇಂಡಿಯಾ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ ನ್ಯೂಜಿಲೆಂಡ್ ತಂಡದ ಮಧ್ಯಮ ಕ್ರಮಾಂಕವು ರನ್​ಗಳಿಸಲು ಪರದಾಡಿತು.

ಇದನ್ನೂ ಓದಿ
Image
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
Image
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Image
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ಇದನ್ನೂ ಓದಿ: ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ

ಇತ್ತ ಕರಾರುವಾಕ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಆಟಗಾರ್ತಿಯರು 20 ಓವರ್​ಗಳಲ್ಲಿ 9 ವಿಕೆಟ್ ಪಡೆದುಕೊಂಡು ನ್ಯೂಜಿಲೆಂಡ್ ತಂಡವನ್ನು ಕೇವಲ 107 ರನ್​ಗಳಿಗೆ ನಿಯಂತ್ರಿಸಿದರು. ಟೀಮ್ ಇಂಡಿಯಾ ಪರ ಪರ್ಶವಿ ಚೋಪ್ರಾ 4 ಓವರ್​ಗಳಲ್ಲಿ ಕೇವಲ 20 ರನ್​ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು.

109 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಶಫಾಲಿ ವರ್ಮಾ (10) ಬಿರುಸಿನ ಬ್ಯಾಟಿಂಗ್​ಗೆ ಮುಂದಾಗಿ ಬೇಗನೆ ಔಟಾದರು. ಆದರೆ ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಶ್ವೇತಾ ಸೆಹ್ರಾವತ್ 45 ಎಸೆತಗಳಲ್ಲಿ 10 ಫೋರ್​ನೊಂದಿಗೆ ಅಜೇಯ 61 ರನ್​ ಬಾರಿಸಿದರು. ಇನ್ನು ಸೌಮ್ಯ ತಿವಾರಿ 22 ರನ್​ಗಳ ಉಪಯುಕ್ತ ಕಾಣಿಕೆ ನೀಡಿ ಔಟಾದರು. ಅದರಂತೆ ಟೀಮ್ ಇಂಡಿಯಾ 14.2 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 112 ರನ್​ಗಳಿಸುವ ಮೂಲಕ 8 ವಿಕೆಟ್​ಗಳ ಜಯ ಸಾಧಿಸಿತು.

ಈ ಗೆಲುವಿನೊಂದಿಗೆ ಭಾರತೀಯ ಅಂಡರ್ 19 ಮಹಿಳಾ ತಂಡವು ಫೈನಲ್​ ಪ್ರವೇಶಿಸಿದೆ. 2ನೇ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಗೆಲ್ಲುವ ತಂಡ ಜನವರಿ 29 ರಂದು ಭಾರತದ ವಿರುದ್ಧ ಫೈನಲ್ ಆಡಲಿದೆ.

Published On - 4:32 pm, Fri, 27 January 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ