ಆಸ್ಟ್ರೇಲಿಯ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಮೂರು ಮಾದರಿಗಳ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದ್ದ ಭಾರತ ಮಹಿಳಾ ಪಡೆ (Australia Women vs India Women), ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸೋಲನ್ನು ಅನುಭವಿಸಿತ್ತು. ಆದರೆ ಆ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು 9 ವಿಕೆಟ್ಗಳಿಂದ ಗೆದ್ದು ಬೀಗಿರುವ ಹರ್ಮನ್‌ಪ್ರೀತ್ (Harmanpreet Kaur) ಪಡೆ, ಇದೀಗ ಎರಡನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ. ಇಂದು ನಡೆಯುತ್ತಿರುವ ಎರಡನೇ ಟಿ20 ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸ್ಸಾ ಹೀಲಿ (Alyssa Healy) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಕಳೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾವನ್ನು ಟೀಂ ಇಂಡಿಯಾ ಕೇವಲ 141 ರನ್‌ಗಳಿಗೆ ಆಲೌಟ್ ಮಾಡಿತ್ತು. ಈ ಪಂದ್ಯದಲ್ಲಿ ಯುವ ಬೌಲರ್ ಟಿಟಾಸ್ ಸಾಧು ಅದ್ಭುತ ಪ್ರದರ್ಶನ ನೀಡಿ ಪ್ರಮುಖ 4 ವಿಕೆಟ್ ಪಡೆದಿದ್ದರು. ಮತ್ತೊಂದೆಡೆ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ತಲಾ ಅರ್ಧಶತಕ ಸಿಡಿಸಿದಲ್ಲದೆ, ಮೊದಲ ವಿಕೆಟ್‌ಗೆ 100ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನಡೆಸಿದರು. ಅಂತಿಮವಾಗಿ ತಂಡ 9 ವಿಕೆಟ್ಗಳ ಸುಲಭ ಜಯ ಸಾಧಿಸಿತ್ತು.
INDW vs AUSW: ಸ್ಮೃತಿ- ಶಫಾಲಿ ಅರ್ಧಶತಕ; ಆಸೀಸ್ ವಿರುದ್ಧ ಭಾರತಕ್ಕೆ 9 ವಿಕೆಟ್ಗಳ ಭರ್ಜರಿ ಜಯ..!
ಭಾರತ ಮಹಿಳಾ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮಂಜೋತ್ ಕೌರ್, ಪೂಜಾ ವಸ್ತ್ರಾಕರ್, ಶ್ರೇಯಾಂಕಾ ಪಾಟೀಲ್, ರೇಣುಕಾ ಠಾಕೂರ್ ಸಿಂಗ್, ಟಿಟಾಸ್ ಸಾಧು.
ಆಸ್ಟ್ರೇಲಿಯ ಮಹಿಳಾ ತಂಡ: ಅಲಿಸ್ಸಾ ಹೀಲಿ (ನಾಯಕಿ), ಬೆತ್ ಮೂನಿ, ತಾಲಿಯಾ ಮೆಕ್‌ಗ್ರಾತ್, ಎಲ್ಲಿಸ್ ಪೆರ್ರಿ, ಆಶ್ಲೇ ಗಾರ್ಡ್ನರ್, ಫೋಬೆ ಲಿಚ್‌ಫೀಲ್ಡ್, ಗ್ರೇಸ್ ಹ್ಯಾರಿಸ್, ಅನ್ನಾಬೆಲ್ ಸದರ್‌ಲ್ಯಾಂಡ್, ಜಾರ್ಜಿಯಾ ವೇರ್‌ಹ್ಯಾಮ್, ಕಿಮ್ ಗಾರ್ತ್, ಮೇಗನ್ ಶುಟ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:44 pm, Sun, 7 January 24