INDW vs AUSW: ಟೀಮ್ ಇಂಡಿಯಾಗೆ ಸೋಲುಣಿಸಿ ಸರಣಿ ಗೆದ್ದ ಆಸ್ಟ್ರೇಲಿಯಾ
India Women vs Australia Women: 148 ರನ್ಗಳ ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಅಲಿಸ್ಸಾ ಹೀಲಿ ಹಾಗೂ ಬೆತ್ ಮೂನಿ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದ ಟೀಮ್ ಇಂಡಿಯಾ ಬೌಲರ್ಗಳ ವಿರುದ್ಧ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಪ್ರಥಮ ವಿಕೆಟ್ಗೆ 85 ರನ್ ಜೊತೆಯಾಟವಾಡಿದರು.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಭಾರತ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಈ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕಿ ಅಲಿಸ್ಸಾ ಹೀಲಿ ಬೌಲಿಂಗ್ ಆಯ್ದುಕೊಂಡಿದ್ದರು.
ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ (26) ಹಾಗೂ ಸ್ಮೃತಿ ಮಂಧಾನ (29) ನಿಧಾನಗತಿಯ ಆರಂಭ ಒದಗಿಸಿ ಔಟಾಗಿದ್ದರು. ಆ ಬಳಿಕ ಬಂದ ಜೆಮಿಮಾ ರೊಡ್ರಿಗಾಸ್ ಕೇವಲ 2 ರನ್ಗಳಿಸಿ ವಿಕೆಟ್ ಒಪ್ಪಿಸಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ 3 ರನ್ ಬಾರಿಸಿ ಕ್ಲೀನ್ ಬೌಲ್ಡ್ ಆದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ 34 ರನ್ಗಳ ಕೊಡುಗೆ ನೀಡುವ ಮೂಲಕ ತಂಡಕ್ಕೆ ಆಸರೆಯಾದರು. ಹಾಗೆಯೇ ಅಂತಿಮ ಹಂತದಲ್ಲಿ ಅಮ್ಜೊತ್ ಕೌರ್ ಅಜೇಯ 17 ರನ್ ಬಾರಿಸಿದರು. ಈ ಮೂಲಕ ಭಾರತ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.
148 ರನ್ಗಳ ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಅಲಿಸ್ಸಾ ಹೀಲಿ ಹಾಗೂ ಬೆತ್ ಮೂನಿ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದ ಟೀಮ್ ಇಂಡಿಯಾ ಬೌಲರ್ಗಳ ವಿರುದ್ಧ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಪ್ರಥಮ ವಿಕೆಟ್ಗೆ 85 ರನ್ ಜೊತೆಯಾಟವಾಡಿದರು.
ಈ ಹಂತದಲ್ಲಿ 38 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 55 ರನ್ ಬಾರಿಸಿದ್ದ ಹೀಲಿ ಔಟಾದರು. ಆ ಬಳಿಕ ಬಂದ ತಹ್ಲಿಯಾ ಮೆಕ್ಗ್ರಾಥ್ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಬೆತ್ ಮೂನಿ 45 ಎಸೆತಗಳಲ್ಲಿ 5 ಫೋರ್ಗಳೊಂದಿಗೆ ಅಜೇಯ 52 ರನ್ ಬಾರಿಸಿ 18.4 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 3 ವಿಕೆಟ್ ನಷ್ಟಕ್ಕೆ 149 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಇದನ್ನೂ ಓದಿ: David Warner: ಹೊಸ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್
ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಈ ಟಿ20 ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 3-0 ಅಂತರದಿಂದ ಗೆಲುವು ದಾಖಲಿಸಿತ್ತು.
ಭಾರತ ಪ್ಲೇಯಿಂಗ್ 11: ಶಫಾಲಿ ವರ್ಮಾ , ಸ್ಮೃತಿ ಮಂಧಾನ , ಜೆಮಿಮಾ ರೊಡ್ರಿಗಾಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ರಿಚಾ ಘೋಷ್ (ವಿಕೆಟ್ ಕೀಪರ್) , ದೀಪ್ತಿ ಶರ್ಮಾ , ಪೂಜಾ ವಸ್ತ್ರಾಕರ್ , ಅಮಂಜೋತ್ ಕೌರ್ , ಶ್ರೇಯಾಂಕಾ ಪಾಟೀಲ್ , ಟೈಟಾಸ್ ಸಾಧು , ರೇಣುಕಾ ಠಾಕೂರ್ ಸಿಂಗ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಅಲಿಸ್ಸಾ ಹೀಲಿ (ನಾಯಕಿ) , ಬೆತ್ ಮೂನಿ , ತಹ್ಲಿಯಾ ಮೆಕ್‌ಗ್ರಾತ್ , ಎಲ್ಲಿಸ್ ಪೆರ್ರಿ , ಆಶ್ಲೀ ಗಾರ್ಡ್ನರ್ , ಫೋಬೆ ಲಿಚ್ಫೀಲ್ಡ್ , ಗ್ರೇಸ್ ಹ್ಯಾರಿಸ್ , ಅನ್ನಾಬೆಲ್ ಸದರ್ಲ್ಯಾಂಡ್ , ಜಾರ್ಜಿಯಾ ವೇರ್ಹ್ಯಾಮ್ , ಕಿಮ್ ಗಾರ್ತ್ , ಮೇಗನ್ ಶುಟ್