IND vs AUS: ದೀಪ್ತಿ ದಿಟ್ಟ ಹೋರಾಟ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ

India Women vs Australia Women: ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 90 ರನ್ ಪೇರಿಸಿದ ಬಳಿಕ ಶಫಾಲಿ ವರ್ಮಾ (40) ವಿಕೆಟ್ ಒಪ್ಪಿಸಿದರು. ಇನ್ನು 74 ರನ್​ಗಳ ಕೊಡುಗೆ ನೀಡಿದ ಸ್ಮೃತಿ ಮಂಧಾನ ರನೌಟ್​ಗೆ ಬಲಿಯಾದರು.

IND vs AUS: ದೀಪ್ತಿ ದಿಟ್ಟ ಹೋರಾಟ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ
Deepti Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 23, 2023 | 11:04 AM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಭಾರತ ಮಹಿಳಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪೂಜಾ ವಸ್ತ್ರಾಕರ್ ದಾಳಿಗೆ ತತ್ತರಿಸಿತು. ಪರಿಣಾಮ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ ​219 ರನ್​ಗಳಿಸಿ ಆಲೌಟ್ ಆಗಿತ್ತು. ಟೀಮ್ ಇಂಡಿಯಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಪೂಜಾ 53 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು.

ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 90 ರನ್ ಪೇರಿಸಿದ ಬಳಿಕ ಶಫಾಲಿ ವರ್ಮಾ (40) ವಿಕೆಟ್ ಒಪ್ಪಿಸಿದರು. ಇನ್ನು 74 ರನ್​ಗಳ ಕೊಡುಗೆ ನೀಡಿದ ಸ್ಮೃತಿ ಮಂಧಾನ ರನೌಟ್​ಗೆ ಬಲಿಯಾದರು.

ಆ ಬಳಿಕ ಬ್ಯಾಟ್ ಬೀಸಿದ ರಿಚಾ ಘೋಷ್ (52) ಹಾಗೂ ಜೆಮಿಮಾ ರೊಡ್ರಿಗಾಸ್ (73) ಅರ್ಧಶತಕಗಳನ್ನು ಬಾರಿಸಿ ಮಿಂಚಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಹರ್ಮನ್​ಪ್ರೀತ್ ಕೌರ್ (0) ಹಾಗೂ ಯಾಸ್ತಿಕಾ ಭಾಟಿಯಾ (1) ಬೇಗನೆ ಔಟಾಗಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ದೀಪ್ತಿ ಶರ್ಮಾ ಹಾಗೂ ಪೂಜಾ ವಸ್ತ್ರಾಕರ್ ಅರ್ಧಶತಕದ ಜೊತೆಯಾಟದೊಂದಿಗೆ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು. ಅದರಲ್ಲೂ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪ್ತಿ ಶರ್ಮಾ 171 ಎಸೆತಗಳನ್ನು ಎದುರಿಸಿ 9 ಫೋರ್​ಗಳೊಂದಿಗೆ 78 ರನ್ ಬಾರಿಸಿದರು.

ಮತ್ತೊಂದೆಡೆ 9ನೇ ಕ್ರಮಾಂಕದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶಿಸಿದ ಪೂಜಾ 126 ಎಸೆತಗಳನ್ನು ಎದುರಿಸಿ 47 ರನ್​ ಕಲೆಹಾಕಿದರು. ಈ ಮೂಲಕ ಪೂಜಾ-ದೀಪ್ತಿ ಜೋಡಿ ತಂಡದ ಮೊತ್ತವನ್ನು 400ರ ಗಡಿದಾಟಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ 406 ರನ್​ಗಳಿಸಿ ಆಲೌಟ್ ಆಯಿತು.

ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 187 ರನ್​ಗಳ ಬೃಹತ್ ಮುನ್ನಡೆ ಸಾಧಿಸಿದೆ. ಸದ್ಯ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು 10 ಓವರ್​ಗಳ ಮುಕ್ತಾಯದ ವೇಳೆ ಯಾವುದೇ ವಿಕೆಟ್ ನಷ್ಟವಿಲ್ಲದೆ 41 ರನ್​ ಕಲೆಹಾಕಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್) , ರಿಚಾ ಘೋಷ್ , ದೀಪ್ತಿ ಶರ್ಮಾ , ಸ್ನೇಹ ರಾಣಾ , ಪೂಜಾ ವಸ್ತ್ರಾಕರ್ , ರೇಣುಕಾ ಠಾಕೂರ್ ಸಿಂಗ್ , ರಾಜೇಶ್ವರಿ ಗಾಯಕ್ವಾಡ್.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ಅತ್ಯಧಿಕ ವೇತನ ಪಡೆಯುವ 10 ಆಟಗಾರರು: ಲಿಸ್ಟ್​ನಲ್ಲಿಲ್ಲ ವಿರಾಟ್ ಕೊಹ್ಲಿ..!

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಬೆತ್ ಮೂನಿ , ಫೋಬೆ ಲಿಚ್‌ಫೀಲ್ಡ್ , ಎಲ್ಲಿಸ್ ಪೆರ್ರಿ , ತಹ್ಲಿಯಾ ಮೆಕ್‌ಗ್ರಾತ್ , ಅಲಿಸ್ಸಾ ಹೀಲಿ (ನಾಯಕಿ) , ಅನ್ನಾಬೆಲ್ ಸದರ್ಲ್ಯಾಂಡ್ , ಆಶ್ಲೀ ಗಾರ್ಡ್ನರ್ , ಜೆಸ್ ಜೊನಾಸೆನ್ , ಅಲಾನಾ ಕಿಂಗ್ , ಕಿಮ್ ಗಾರ್ತ್ , ಲಾರೆನ್ ಚೀಟಲ್.

Published On - 11:03 am, Sat, 23 December 23

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು