AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs AUSW: ಭಾರತ-ಆಸ್ಟ್ರೇಲಿಯಾ ಟೆಸ್ಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

India Women vs Australia Women: ಕಳೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಈ ಪಂದ್ಯಕ್ಕೂ ಅದೇ ಪ್ಲೇಯಿಂಗ್ ಇಲೆವೆನ್​ ಅನ್ನೇ ಮುಂದುವರೆಸಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಕಣಕ್ಕಿಳಿಯಲಿದ್ದಾರೆ.

INDW vs AUSW: ಭಾರತ-ಆಸ್ಟ್ರೇಲಿಯಾ ಟೆಸ್ಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
Team India
TV9 Web
| Edited By: |

Updated on:Dec 21, 2023 | 10:22 AM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (India Women vs Australia Women) ಮಹಿಳಾ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸೀಸ್ ತಂಡ ನಾಯಕಿ ಅಲಿಸ್ಸಾ ಹೀಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.

ಕಳೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಈ ಪಂದ್ಯಕ್ಕೂ ಅದೇ ಪ್ಲೇಯಿಂಗ್ ಇಲೆವೆನ್​ ಅನ್ನೇ ಮುಂದುವರೆಸಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಕಣಕ್ಕಿಳಿಯಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗಾಸ್ ಬ್ಯಾಟ್ ಬೀಸಿದರೆ, 4ನೇ ಕ್ರಮಾಂಕದಲ್ಲಿ ನಾಯಕಿ ಹರ್ಮನ್​ಪ್ರೀತ್ ಕೌರ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ 5 ಮತ್ತು 6ನೇ ಬ್ಯಾಟರ್​ಗಳಾಗಿ ಯಾಸ್ತಿಕಾ ಭಾಟಿಯಾ ಹಾಗೂ ರಿಚಾ ಘೋಷ್ ಆಡಲಿದ್ದಾರೆ.

ತಂಡದಲ್ಲಿ ಆಲ್​ರೌಂಡರ್​ಗಳಾಗಿ ದೀಪ್ತಿ ಶರ್ಮಾ ಹಾಗೂ ಸ್ನೇಹ ರಾಣ ಕಾಣಿಸಿಕೊಂಡಿದ್ದು, ವೇಗಿಗಳಾಗಿ ಪೂಜಾ ವಸ್ತ್ರಾಕರ್ ಹಾಗೂ ರೇಣುಕಾ ಸಿಂಗ್ ಬೌಲಿಂಗ್ ಮಾಡಲಿದ್ದಾರೆ.

ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ:

ಮೊದಲ 10 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಭಾರತೀಯ ವನಿತೆಯರು ಯಶಸ್ವಿಯಾಗಿದ್ದಾರೆ. ಟಾಸ್ ಗೆದ್ದು ಮೊದಲ ಇನಿಂಗ್ಸ್ ಆರಂಭಿಸಿದ ಫೋಬೆ ಲಿಚ್‌ಫೀಲ್ಡ್ (0) ಮೊದಲ ಓವರ್​ನಲ್ಲಿ ಜೆಮಿಮಾ ಮಾಡಿದ ಅತ್ಯುತ್ತಮ ಫೀಲ್ಡಿಂಗ್​ನಿಂದಾಗಿ ರನೌಟ್ ಆದರು. ಇದರ ಬೆನ್ನಲ್ಲೇ ಎಲ್ಲಿಸ್ ಪೆರ್ರಿ (4) ಯನ್ನು ಪೂಜಾ ವಸ್ತ್ರಾಕರ್ ಕ್ಲೀನ್ ಬೌಲ್ಡ್​ ಮಾಡಿದರು. ಅದರಂತೆ ಮೊದಲ 10 ಓವರ್​ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡು 50 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಬೆತ್ ಮೂನಿ ಹಾಗೂ ತಹ್ಲಿಯಾ ಮೆಕ್‌ಗ್ರಾತ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಭಾರತ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್) , ರಿಚಾ ಘೋಷ್ , ದೀಪ್ತಿ ಶರ್ಮಾ , ಸ್ನೇಹ ರಾಣಾ , ಪೂಜಾ ವಸ್ತ್ರಾಕರ್ , ರೇಣುಕಾ ಠಾಕೂರ್ ಸಿಂಗ್ , ರಾಜೇಶ್ವರಿ ಗಾಯಕ್ವಾಡ್.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ಅತ್ಯಧಿಕ ವೇತನ ಪಡೆಯುವ 10 ಆಟಗಾರರು: ಲಿಸ್ಟ್​ನಲ್ಲಿಲ್ಲ ವಿರಾಟ್ ಕೊಹ್ಲಿ..!

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಬೆತ್ ಮೂನಿ , ಫೋಬೆ ಲಿಚ್‌ಫೀಲ್ಡ್ , ಎಲ್ಲಿಸ್ ಪೆರ್ರಿ , ತಹ್ಲಿಯಾ ಮೆಕ್‌ಗ್ರಾತ್ , ಅಲಿಸ್ಸಾ ಹೀಲಿ (ನಾಯಕಿ) , ಅನ್ನಾಬೆಲ್ ಸದರ್ಲ್ಯಾಂಡ್ , ಆಶ್ಲೀ ಗಾರ್ಡ್ನರ್ , ಜೆಸ್ ಜೊನಾಸೆನ್ , ಅಲಾನಾ ಕಿಂಗ್ , ಕಿಮ್ ಗಾರ್ತ್ , ಲಾರೆನ್ ಚೀಟಲ್.

Published On - 10:13 am, Thu, 21 December 23

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್