
ಪ್ರಸ್ತುತ ಇಂಗ್ಲೆಂಡ್ನಲ್ಲಿ ಭಾರತದ ವಿವಿಧ ಕ್ರಿಕೆಟ್ ತಂಡಗಳು ಸರಣಿಯಲ್ಲಿ ನಿರತವಾಗಿವೆ. ಒಂದೆಡೆ ಭಾರತದ ಪುರುಷರ ತಂಡ ಟೆಸ್ಟ್ ಸರಣಿ ಆಡುತ್ತಿದ್ದರೆ, ಮತ್ತೊಂದೆಡೆ ಮಿಶ್ರ ಅಂಗವಿಕಲರ ತಂಡ ಕೂಡ ಸರಣಿಯಲ್ಲಿ ಭಾಗಿಯಾಗಿದೆ. ಇವೆರಡರ ಜೊತೆಗೆ ಇಂದಿನಿಂದ 19 ವರ್ಷದೊಳಗಿನವರ ಯೂತ್ ಏಕದಿನ ಸರಣಿ ಕೂಡ ಉಭಯ ದೇಶಗಳ ತಂಡಗಳ ನಡುವೆ ಆರಂಭವಾಗಿದೆ. ನಾಳೆಯಿಂದ ಭಾರತದ ಮಹಿಳೆಯರ ತಂಡವೂ (India Women’s Cricket) ಸಹ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ವಾಸ್ತವವಾಗಿ ಭಾರತ ಮಹಿಳಾ ತಂಡವು ಜೂನ್ 28 ರಿಂದ ಪ್ರಾರಂಭವಾಗಲಿರುವ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಾಗಿದೆ.
ಈ ಟಿ20 ಸರಣಿಯ ಮೊದಲ ಪಂದ್ಯವನ್ನು ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ಆಡಲಾಗುವುದು. ಮೊದಲ ಬಾರಿಗೆ, ಮಹಿಳಾ ಟಿ20 ಪಂದ್ಯವನ್ನು ನಾಟಿಂಗ್‌ಹ್ಯಾಮ್‌ನಲ್ಲಿ ಆಯೋಜಿಸಲಾಗುತ್ತಿದೆ. ಈ ಟಿ20 ಸರಣಿಯು ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿರುತ್ತದೆ. ಏಕೆಂದರೆ 2026 ರ ಮಹಿಳಾ ವಿಶ್ವಕಪ್ ಜೂನ್ 12 ರಿಂದ ಲಂಡನ್‌ನಲ್ಲಿ ಪ್ರಾರಂಭವಾಗುತ್ತಿದೆ. ಅದಕ್ಕೂ ಮೊದಲು ಭಾರತೀಯ ಮಹಿಳಾ ತಂಡವು ಇಂಗ್ಲೆಂಡ್‌ನ ಪರಿಸ್ಥಿತಿಯ ಬಗ್ಗೆ ಚೆನ್ನಾಗಿ ತಿಳಿದುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
ಟ್ರೆಂಟ್ ಬ್ರಿಡ್ಜ್‌ನಲ್ಲಿ ಗೆಲುವಿನೊಂದಿಗೆ ಈ ಸರಣಿಯನ್ನು ಆರಂಭಿಸುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ. ಭಾರತ ಪುರುಷರ ತಂಡವು ಈ ಸ್ಥಳದಲ್ಲಿ ಹಲವು ಪಂದ್ಯಗಳನ್ನು ಆಡಿದೆ. 2007 ರ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳಿಂದ ಜಯಗಳಿಸಿತು. ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ, ತಂಡವು ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 3-1 ಅಂತರದಿಂದ ಸೋಲಿಸಿತು. ಅಷ್ಟೇ ಅಲ್ಲ, 2018 ರ ಪ್ರವಾಸದಲ್ಲಿ, ಟೀಂ ಇಂಡಿಯಾ ಈ ಸ್ಥಳದಲ್ಲಿ ಇಂಗ್ಲೆಂಡ್ ವಿರುದ್ಧ 203 ರನ್‌ಗಳಿಂದ ಜಯಗಳಿಸಿತು. ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 97 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 103 ರನ್‌ಗಳ ಕೊಡುಗೆ ನೀಡಿದ್ದರು. ಹಾರ್ದಿಕ್ ಪಾಂಡ್ಯ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಈ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ಮೇಲೆ ಒತ್ತಡ ಹೇರಬೇಕಾಗುತ್ತದೆ. ಇದಕ್ಕೆ ಪೂರಕವಾಗಿ ತಂಡ ಕೂಡ ತುಂಬಾ ಬಲಿಷ್ಠವಾಗಿ ಕಾಣುತ್ತಿದೆ. ಹರ್ಮನ್ ಪ್ರೀತ್ ಕೌರ್ ಜೊತೆಗೆ, ಸ್ಮೃತಿ ಮಂಧಾನ, ಶೆಫಾಲಿ ವರ್ಮಾ ಮತ್ತು ಜೆಮಿಮಾ ರೊಡ್ರಿಗಸ್ ಕೂಡ ಬ್ಯಾಟಿಂಗ್ ವಿಭಾಗದಲ್ಲಿ ತಮ್ಮ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಬೇಕಾಗುತ್ತದೆ. ಇಂಗ್ಲೆಂಡ್ ಬೌಲಿಂಗ್ ವಿಭಾಗ ಬಲಿಷ್ಠವಾಗಿರುವ ಕಾರಣ ಈ ಎಲ್ಲಾ ಆಟಗಾರ್ತಿಯರು ಉತ್ತಮವಾಗಿ ಬ್ಯಾಟಿಂಗ್ ಮಾಡುವುದು ಬಹಳ ಮುಖ್ಯ.
Smruthi Mandhana: ಸ್ಮೃತಿ ಮಂಧಾನ ಅಭಿಮಾನಿಗಳಿಗೆ ಸಿಕ್ಕಿತು ಬಂಪರ್ ಸುದ್ದಿ: ಏನದು ನೋಡಿ
ಇಂಗ್ಲೆಂಡ್ ಮಹಿಳಾ ತಂಡ ಕೂಡ ಈ ಸರಣಿಗೆ ಸಂಪೂರ್ಣವಾಗಿ ಸಿದ್ಧವಾಗಿದೆ. ತಂಡವು ಬಲಿಷ್ಠ ಬೌಲರ್‌ಗಳು ಮತ್ತು ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳನ್ನು ಹೊಂದಿದೆ. ಈ ಐದು ಪಂದ್ಯಗಳ ಟಿ20 ಸರಣಿಯ ನಂತರ, ಜುಲೈ 16 ರಿಂದ ಎರಡು ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯೂ ನಡೆಯಲಿದೆ.
ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಸ್ನೇಹ್ ರಾಣಾ, ಶ್ರೀ ಚರಣಿ, ಶುಚಿ ಉಪಾಧ್ಯಾಯ, ಅಮನ್‌ಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ಸಯಾಲಿ ಸತ್ಘರೆ.
ಇಂಗ್ಲೆಂಡ್: ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಎಂ ಆರ್ಲಾಟ್, ಟ್ಯಾಮಿ ಬ್ಯೂಮಾಂಟ್ (ವಿಕೆಟ್ ಕೀಪರ್), ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಚಾರ್ಲಿ ಡೀನ್, ಸೋಫಿಯಾ ಡಂಕ್ಲಿ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫಿಲ್ಲರ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಪೈಗೆ ಸ್ಕೋಲ್‌ಫೀಲ್ಡ್, ಲಿನ್ಸೆ ಸ್ಮಿತ್, ಡ್ಯಾನಿ ವ್ಯಾಟ್-ಹಾಡ್ಜ್, ಐಸಿ ವಾಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ