IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

India Women vs England Women T20 Series: ಜೂನ್ 12ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಇದು ವಿಶ್ವಕಪ್‌ಗೆ ನಿರ್ಣಾಯಕ ಸಿದ್ಧತೆಯಾಗಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ತಂಡವು ಮೇ 28ರಂದು ಚೆಲ್ಮ್ಸ್‌ಫೋರ್ಡ್‌ನಲ್ಲಿ ಮೊದಲ ಪಂದ್ಯ ಆಡಲಿದೆ. ಸೋನಿ ಸ್ಪೋರ್ಟ್ಸ್ ಮತ್ತು ಸೋನಿ ಲಿವ್‌ನಲ್ಲಿ ನೇರಪ್ರಸಾರ ವೀಕ್ಷಿಸಿ. ಟ್ರೋಫಿ ಗೆಲ್ಲಲು ಭಾರತಕ್ಕೆ ಈ ಸರಣಿ ಅತ್ಯಂತ ಮುಖ್ಯ.

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?
Ind W Vs Eng W

Updated on: May 28, 2026 | 3:57 PM

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ ಭಾರತ ತಂಡ, ಇಂಗ್ಲೆಂಡ್‌ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ತನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಚುಟುಕು ವಿಶ್ವಸಮರಕ್ಕೆ ಕಾಲಿಡಬೇಕಿದೆ.

ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ 4 ಪಂದ್ಯಗಳ ಟಿ20 ಸರಣಿ ಮತ್ತು ಒಂದು ಟೆಸ್ಟ್ ಪಂದ್ಯವನ್ನು ಆಡಲಿದೆ. ಟೀಂ ಇಂಡಿಯಾದ ಪ್ರವಾಸವು ಮೇ 28 ರ ಗುರುವಾರದಿಂದ ಪ್ರಾರಂಭವಾಗಲಿದೆ. ಈ ಟಿ2 ಸರಣಿಯಲ್ಲಿ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿರುತ್ತಾರೆ. ಅಲ್ಲದೆ, ಷಾರ್ಲೆಟ್ ಡೀನ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದು, ಈ ಸರಣಿಯ ಮೊದಲ ಟಿ20 ಪಂದ್ಯದ ಪೂರ್ಣ ವಿವರ ಇಂತಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯವು ಮೇ 28 ರ ಗುರುವಾರ ನಡೆಯಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯುತ್ತದೆ?

ಚೆಲ್ಮ್ಸ್‌ಫೋರ್ಡ್‌ನ ಕೌಂಟಿ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ನಡೆಯುತ್ತಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಪ್ರಾರಂಭವಾಗಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯವನ್ನು ನೇರಪ್ರಸಾರ ವೀಕ್ಷಿಸಬಹುದು.

Womens T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

ಹೆಡ್ ಟು ಹೆಡ್ ದಾಖಲೆ

ಇಲ್ಲಿಯವರೆಗೆ, ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ 35 ಟಿ20 ಪಂದ್ಯಗಳು ನಡೆದಿವೆ. ಈ 35 ಪಂದ್ಯಗಳಲ್ಲಿ ಇಂಗ್ಲೆಂಡ್ ಮಹಿಳಾ ತಂಡವು 24 ಪಂದ್ಯಗಳನ್ನು ಗೆದ್ದಿದ್ದರೆ, ಟೀಂ ಇಂಡಿಯಾ ಕೇವಲ 11 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದಾಗ್ಯೂ ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಟಿ20 ಸರಣಿಯನ್ನು ಗೆದ್ದುಕೊಂಡಿರುವುದು ತಂಡದ ಮನೋಬಲವನ್ನು ಹೆಚ್ಚಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Thu, 28 May 26

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us