AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ಹಂತದಲ್ಲಿ ಎಡವಿದ ಟೀಮ್ ಇಂಡಿಯಾ: ಇಂಗ್ಲೆಂಡ್​ಗೆ ರೋಚಕ ಗೆಲುವು

India Women Vs England Women 3rd T20I: ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಮೂರನೇ ಟ್ವೆಂಟಿ ಟ್ವೆಂಟಿ ಪಂದ್ಯದಲ್ಲಿ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಮ್ಯಾಚ್ ಗಳಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದ ಅಂತಿಮ ಓವರ್‌ನಲ್ಲಿ ಟೀಮ್ ಇಂಡಿಯಾ ಸೋಲೊಪ್ಪಿಕೊಂಡಿದೆ.

ಅಂತಿಮ ಹಂತದಲ್ಲಿ ಎಡವಿದ ಟೀಮ್ ಇಂಡಿಯಾ: ಇಂಗ್ಲೆಂಡ್​ಗೆ ರೋಚಕ ಗೆಲುವು
Ind Vs Eng
ಝಾಹಿರ್ ಯೂಸುಫ್
|

Updated on: Jul 05, 2025 | 8:28 AM

Share

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಮಹಿಳಾ ತಂಡದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಮಹಿಳಾ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಂಗ್ಲರ ಪಡೆಗೆ ಸೋಫಿಯಾ ಡಂಕ್ಲಿ ಹಾಗೂ ವ್ಯಾಟ್ ಹಾಡ್ಜ್ ಭರ್ಜರಿ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 137 ರನ್ ಪೇರಿಸಿದ ಬಳಿಕ ಸೋಫಿಯಾ ಡಂಕ್ಲಿ (75) ಔಟಾದರು. ಇದರ ಬೆನ್ನಲ್ಲೇ ವ್ಯಾಟ್ ಹಾಡ್ಜ್ (66) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ಇಂಗ್ಲೆಂಡ್ ತಂಡವನ್ನು 20 ಓವರ್‌ಗಳಲ್ಲಿ 171 ರನ್ ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು.

172 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಕಡೆಯಿಂದ ಸ್ಫೋಟಕ ಆರಂಭ ಪಡೆಯಿತು. ಕೇವಲ 25 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ 47 ರನ್ ಬಾರಿಸಿ ಶಫಾಲಿ ಔಟಾದರು. ಆ ಬಳಿಕ ಬಂದ ಜೆಮಿಮಾ ರೊಡ್ರಿಗಸ್ 20 ರನ್ ಗಳ ಕೊಡುಗೆ ನೀಡಿದರು.

ಈ ಮೂಲಕ ಟೀಮ್ ಇಂಡಿಯಾ 13 ಓವರ್‌ಗಳಲ್ಲಿ  123 ರನ್ ಕಲೆಹಾಕಿತ್ತು. ಆದರೆ ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾಗಿ ಸ್ಮೃತಿ ಮಂಧಾನ (56) ಔಟಾದರು. ಇದಾಗ್ಯೂ ಕೊನೆಯ ಓವರ್‌ನಲ್ಲಿ ಟೀಮ್ ಇಂಡಿಯಾ ಗೆ ಕೇವಲ 12 ರನ್ ಗಳು ಮಾತ್ರ ಬೇಕಿದ್ದವು.

ಆದರೆ ಅಂತಿಮ ಓವರ್‌ನಲ್ಲಿ ಬಿರುಸಿನ ಹೊಡೆತ ಬಾರಿಸುವಲ್ಲಿ ಹರ್ಮನ್ ಪ್ರೀತ್ ಕೌರ್ ಹಾಗೂ ಅಮನ್ಜೊತ್ ಕೌರ್ ವಿಫಲರಾದರು. ಪರಿಣಾಮ ಟೀಮ್ ಇಂಡಿಯಾ 5 ರನ್ ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಇಂಗ್ಲೆಂಡ್ ಪ್ಲೇಯಿಂಗ್ 11: ಸೋಫಿಯಾ ಡಂಕ್ಲಿ , ಡೇನಿಯಲ್ ವ್ಯಾಟ್-ಹಾಡ್ಜ್ , ಆಲಿಸ್ ಕ್ಯಾಪ್ಸೆ , ಟ್ಯಾಮಿ ಬ್ಯೂಮಾಂಟ್ (ನಾಯಕಿ) , ಆಮಿ ಜೋನ್ಸ್ (ವಿಕೆಟ್ ಕೀಪರ್) , ಪೈಜ್ ಸ್ಕೋಲ್ಫೀಲ್ಡ್ , ಸೋಫಿ ಎಕ್ಲೆಸ್ಟೋನ್ , ಇಸ್ಸಿ ವಾಂಗ್ , ಷಾರ್ಲೆಟ್ ಡೀನ್ , ಲಾರೆನ್ ಫೈಲರ್ , ಲಾರೆನ್ ಬೆಲ್.

ಇದನ್ನೂ ಓದಿ: IPL 2026: CSK ತಂಡಕ್ಕೆ ಸಂಜು ಸ್ಯಾಮ್ಸನ್ ಎಂಟ್ರಿ ಬಹುತೇಕ ಖಚಿತ

ಭಾರತ ಪ್ಲೇಯಿಂಗ್ 11: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ಅಮನ್ಜೋತ್ ಕೌರ್ , ರಿಚಾ ಘೋಷ್ (ವಿಕೆಟ್ ಕೀಪರ್) , ದೀಪ್ತಿ ಶರ್ಮಾ , ರಾಧಾ ಯಾದವ್ , ಅರುಂಧತಿ ರೆಡ್ಡಿ , ಸ್ನೇಹ ರಾಣಾ , ಶ್ರೀ ಚರಣಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್