INDW vs ENGW Test: 18 ವರ್ಷಗಳ ಬಳಿಕ ಭಾರತ-ಇಂಗ್ಲೆಂಡ್ ಮಹಿಳಾ ಟೆಸ್ಟ್: ಟಾಸ್ ಗೆದ್ದ ಹರ್ಮನ್​ಪ್ರೀತ್ ಪಡೆ

India Women vs England Women, Only Test: ಭಾರತದ ನೆಲದಲ್ಲಿ 18 ವರ್ಷಗಳ ನಂತರ ಇಂಗ್ಲೆಂಡ್ ಮತ್ತು ಭಾರತ 4 ದಿನಗಳ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರಿತ್ ಕೌರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

INDW vs ENGW Test: 18 ವರ್ಷಗಳ ಬಳಿಕ ಭಾರತ-ಇಂಗ್ಲೆಂಡ್ ಮಹಿಳಾ ಟೆಸ್ಟ್: ಟಾಸ್ ಗೆದ್ದ ಹರ್ಮನ್​ಪ್ರೀತ್ ಪಡೆ
INDW vs ENGW Test
Follow us
|

Updated on:Dec 14, 2023 | 9:35 AM

ಬಹಳ ರೋಚಕತೆ ಸೃಷ್ಟಿಸಿರುವ ಭಾರತ ಮಹಿಳಾ ತಂಡ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ (India Women vs England Women) ನಡುವಣ ಏಕೈಕ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ನವಿ ಮುಂಬೈನ ಡಾ. ಡಿವೈ ಪಾಟಿಲ್ ಸ್ಪೋರ್ಟ್ ಅಕಾಡೆಮಿಯಲ್ಲಿ ಆರಂಭವಾಗಿರುವ ನಾಲ್ಕು ದಿನಗಳ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರಿತ್ ಕೌರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ವಿಶೇಷ ಎಂದರೆ ಭಾರತದ ನೆಲದಲ್ಲಿ 18 ವರ್ಷಗಳ ನಂತರ ಇಂಗ್ಲೆಂಡ್ ಮತ್ತು ಭಾರತ 4 ದಿನಗಳ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.

ಭಾರತ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಿದೆ. ಕರ್ನಾಟಕದ ಸತೀಶ್ ಶುಭಾ, ಜೆಮಿಮಾ ರಾಡ್ರಿಗಸ್ ಮತ್ತು ರೇಣುಕಾ ಠಾಕೂರ್ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಜೆಮಿಮಾ, ಹರ್ಮನ್‌ಪ್ರೀತ್ ಕೌರ್, ದೀಪ್ತಿ ಶರ್ಮಾ ಬ್ಯಾಟಿಂಗ್ ಬಲ ತುಂಬಿದರೆ ಯಾಸ್ತಿಕಾ ಭಾಟಿಯಾ ವಿಕೆಟ್ ಕೀಪರ್ ಆಗಿದ್ದಾರೆ. ಜೊತೆಗೆ ಸ್ನೇಹ ರಾಣಾ, ಶುಭಾ ಸತೀಶ್, ಪೂಜಾ ವಸ್ತ್ರಾಕರ್, ರೇಣುಕಾ ಠಾಕೂರ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

IND A vs SA A: ಸೌತ್ ಆಫ್ರಿಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ ಪ್ರದೋಶ್

ಇದನ್ನೂ ಓದಿ
Image
ಈ ಬಾರಿ ಇರಲ್ಲ ಟಾಟಾ IPL: ಶೀರ್ಷಿಕೆ ಪ್ರಾಯೋಜಕರ ಹಕ್ಕು ಹರಾಜಿಗೆ ಸಿದ್ಧತೆ
Image
ಭಾರತಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ: ಮಾಸ್ಟರ್ ಪ್ಲಾನ್ ರೂಪಿಸಿದ ಸೂರ್ಯ
Image
IND A vs SA A: ಸೌತ್ ಆಫ್ರಿಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ ಪ್ರದೋಶ್
Image
ಸರಣಿಗಳಲ್ಲಿ ಹೀರೋ-ಐಸಿಸಿ ಟೂರ್ನಿಯಲ್ಲಿ ಝೀರೋ: ಇದು ಟೀಮ್ ಇಂಡಿಯಾ

ಇತ್ತ ಇಂಗ್ಲೆಂಡ್ ತಂಡವನ್ನು ಹೀದರ್ ನೈಟ್ ಮುನ್ನಡೆಸುತ್ತಿದ್ದಾರೆ. ಇಂಗ್ಲೆಂಡ್‌ಗೆ ಇದು ಐತಿಹಾಸಿಕ ಟೆಸ್ಟ್. ಏಕೆಂದರೆ ಇದು ಅವರ 100 ನೇ ಟೆಸ್ಟ್ ಪಂದ್ಯವಾಗಿದೆ. ತಂಡದಲ್ಲಿ ಟಮ್ಮಿ ಬ್ಯೂಮಾಂಟ್, ಸೋಫಿಯಾ ಡಂಕ್ಲಿ, ನ್ಯಾಟ್ ಸ್ಕೈವರ್-ಬ್ರಂಟ್, ಡೇನಿಯಲ್ ವ್ಯಾಟ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಸೋಫಿ ಎಕ್ಲೆಸ್ಟೋನ್, ಷಾರ್ಲೆಟ್ ಡೀನ್, ಕೇಟ್ ಕ್ರಾಸ್, ಲಾರೆನ್ ಫೈಲರ್ ಮತ್ತು ಲಾರೆನ್ ಬೆಲ್ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ಸರಣಿ 2023 ಜಿಯೋ ಸಿನಿಮಾ ಮತ್ತು ಫ್ಯಾನ್‌ಕೋಡ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ. ಭಾರತದಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಪಂದ್ಯಗಳನ್ನು ಪ್ರಸಾರ ಮಾಡಲಾಗುತ್ತದೆ.

ಭಾರತ ಪ್ಲೇಯಿಂಗ್ XI: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ ರಾಣಾ, ಶುಭಾ ಸತೀಶ್, ಪೂಜಾ ವಸ್ತ್ರಾಕರ್, ರೇಣುಕಾ ಠಾಕೂರ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್.

ಇಂಗ್ಲೆಂಡ್ ಪ್ಲೇಯಿಂಗ್ XI: ಟಮ್ಮಿ ಬ್ಯೂಮಾಂಟ್, ಸೋಫಿಯಾ ಡಂಕ್ಲಿ, ಹೀದರ್ ನೈಟ್ (ನಾಯಕಿ), ನ್ಯಾಟ್ ಸ್ಕೈವರ್-ಬ್ರಂಟ್, ಡೇನಿಯಲ್ ವ್ಯಾಟ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಸೋಫಿ ಎಕ್ಲೆಸ್ಟೋನ್, ಷಾರ್ಲೆಟ್ ಡೀನ್, ಕೇಟ್ ಕ್ರಾಸ್, ಲಾರೆನ್ ಫೈಲರ್, ಲಾರೆನ್ ಬೆಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 am, Thu, 14 December 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ