IND W vs IRE W: ಭಾರತ- ಐರ್ಲೆಂಡ್ ನಡುವೆ 2ನೇ ಏಕದಿನ ಪಂದ್ಯ; ಭಾರತ ಗೆದ್ದರೆ ಸರಣಿ ಕೈವಶ
IND W vs IRE W: ಭಾರತ ಮಹಿಳಾ ಕ್ರಿಕೆಟ್ ತಂಡವು ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವನ್ನು ಜನವರಿ 12 ರಂದು ರಾಜ್‌ಕೋಟ್‌ನಲ್ಲಿ ಆಡಲಿದೆ. ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಗೆಲ್ಲುವ ಉದ್ದೇಶದಲ್ಲಿದೆ ಭಾರತ. ಇತ್ತ ಐರ್ಲೆಂಡ್ ತಂಡವು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.
ಮೊದಲ ಏಕದಿನ ಪಂದ್ಯದಲ್ಲಿ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿರುವ ಭಾರತ ಮಹಿಳಾ ತಂಡ ಇದೀಗ ಎರಡನೇ ಪಂದ್ಯದ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧ ನಡೆಯಲಿದೆ. ಈ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ಕೈವಶ ಮಾಡಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ. ಇತ್ತ ಎರಡನೇ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಜೀವಂತವಾಗಿರಿಸುವುದರ ಜೊತೆಗೆ ಭಾರತದ ವಿರುದ್ಧ ಮೊದಲ ಪಂದ್ಯ ಗೆದ್ದ ದಾಖಲೆ ಮಾಡುವ ಗುರಿಯೊಂದಿಗೆ ಐರ್ಲೆಂಡ್ ಕಣಕ್ಕಿಳಿಯಲಿದೆ.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಜನವರಿ 12 ರಂದು ನಡೆಯಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಟಾಸ್ 10:30 ಕ್ಕೆ ನಡೆಯಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನೇರ ಪ್ರಸಾರ ಎಲ್ಲಿ?
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನೇರ ಪ್ರಸಾರ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಇರುತ್ತದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು JioCinema ಅಪ್ಲಿಕೇಶನ್ನಲ್ಲಿ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ದೀಪ್ತಿ ಶರ್ಮಾ, ಪ್ರತಿಕಾ ರಾವಲ್, ಹರ್ಲೀನ್ ಡಿಯೋಲ್, ಜೆಮಿಮಾ ರೋಡ್ರಿಗಸ್, ಉಮಾ ಛೆಟ್ರಿ, ರಿಚಾ ಘೋಷ್, ತೇಜಲ್ ಹಸಂಬಿಸ್, ರಾಘವಿ ಬಿಶ್ತ್, ಮಿನ್ನು ಮಣಿ, ಪ್ರಿಯಾ ಮಿಶ್ರಾ, ತನುಜಾ ಕನ್ವರ್, ಟೈಟಾಸ್ ಸಾಧು, ಸೈಮಾ ಠಾಕೋರ್, ಸಯಾಲಿ ಸತ್ಘರೆ.
ಐರ್ಲೆಂಡ್ ಮಹಿಳಾ ತಂಡ: ಸಾರಾ ಫೋರ್ಬ್ಸ್, ಗ್ಯಾಬಿ ಲೂಯಿಸ್ (ನಾಯಕಿ), ಜೊವಾನ್ನಾ ಲೌಗ್ರನ್, ಓರ್ಲಾ ಪ್ರೆಂಡರ್‌ಗಾಸ್ಟ್, ಲಾರಾ ಡೆಲಾನಿ, ಲೇಹ್ ಪಾಲ್, ಉನಾ ರೇಮಂಡ್-ಹೋಯ್, ಅರ್ಲೀನ್ ಕೆಲ್ಲಿ, ಅವಾ ಕ್ಯಾನಿಂಗ್, ಫ್ರೇಯಾ ಸಾರ್ಜೆಂಟ್, ಆಮಿ ಮ್ಯಾಗೈರ್, ರೆಬೆಕ್ಕಾ ಸ್ಟೋಕೆಲ್ಸ್, ಅಲಾನಾ ಡಾಲ್ಜೆಲ್, ಕೌಲ್ಟರ್ ರೀಲಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:15 pm, Sat, 11 January 25