ವೆಸ್ಟ್ ಇಂಡೀಸ್ ವಿರುದ್ಧ ಟಿ20 ಹಾಗೂ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದ್ದ ಭಾರತ ವನಿತಾ ಪಡೆ ಇದೀಗ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಭಾರತ ಮತ್ತು ಐರ್ಲೆಂಡ್ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಜನವರಿ 10ರಿಂದ ಈ ಸರಣಿ ಆರಂಭವಾಗಲಿದ್ದು, ನಿಯಮಿತ ನಾಯಕಿ ಹರ್ಮನ್‌ಪ್ರೀತ್ ಕೌರ್ ಅನುಪಸ್ಥಿತಿಯಲ್ಲಿ ಸ್ಮೃತಿ ಮಂಧಾನಗೆ ತಂಡ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲೂ ಮಂಧಾನ ನಾಯಕತ್ವವಹಿಸಿಕೊಂಡು ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಹೀಗಾಗಿ ಐರ್ಲೆಂಡ್ ವಿರುದ್ಧವೂ ತಂಡದ ನಾಯಕತ್ವವನ್ನು ಮಂಧಾನಗೆ ನೀಡಲಾಗಿದೆ.
ಭಾರತ ಮತ್ತು ಐರ್ಲೆಂಡ್ ತಂಡಗಳು ಇದುವರೆಗೆ 12 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಐರ್ಲೆಂಡ್ ತಂಡ ಇದುವರೆಗೆ ಆಡಿರುವ 12 ಏಕದಿನ ಪಂದ್ಯಗಳಲ್ಲಿಯೂ ಭಾರತದ ವಿರುದ್ಧ ಸೋತಿದೆ. 2023ರ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನೂ ಸಹ ಭಾರತ ಐದು ರನ್‌ಗಳಿಂದ ಗೆದ್ದಿತ್ತು.
ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಜನವರಿ 10 ರಂದು ನಡೆಯಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಟಾಸ್ 10:30 ಕ್ಕೆ ನಡೆಯಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದ ನೇರ ಪ್ರಸಾರ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಇರುತ್ತದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು JioCinema ಅಪ್ಲಿಕೇಶನ್ನಲ್ಲಿ ವೀಕ್ಷಿಸಬಹುದು.
ಭಾರತ ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ದೀಪ್ತಿ ಶರ್ಮಾ, ಪ್ರತಿಕಾ ರಾವಲ್, ಹರ್ಲೀನ್ ಡಿಯೋಲ್, ಜೆಮಿಮಾ ರೋಡ್ರಿಗಸ್, ಉಮಾ ಛೆಟ್ರಿ, ರಿಚಾ ಘೋಷ್, ತೇಜಲ್ ಹಸಂಬಿಸ್, ರಾಘವಿ ಬಿಶ್ತ್, ಮಿನ್ನು ಮಣಿ, ಪ್ರಿಯಾ ಮಿಶ್ರಾ, ತನುಜಾ ಕನ್ವರ್, ಟೈಟಾಸ್ ಸಾಧು, ಸೈಮಾ ಠಾಕೋರ್, ಸಯಾಲಿ ಸತ್ಘರೆ.
ಐರ್ಲೆಂಡ್ ಮಹಿಳಾ ತಂಡ: ಸಾರಾ ಫೋರ್ಬ್ಸ್, ಗ್ಯಾಬಿ ಲೂಯಿಸ್ (ನಾಯಕಿ), ಜೊವಾನ್ನಾ ಲೌಗ್ರನ್, ಓರ್ಲಾ ಪ್ರೆಂಡರ್‌ಗಾಸ್ಟ್, ಲಾರಾ ಡೆಲಾನಿ, ಲೇಹ್ ಪಾಲ್, ಉನಾ ರೇಮಂಡ್-ಹೋಯ್, ಅರ್ಲೀನ್ ಕೆಲ್ಲಿ, ಅವಾ ಕ್ಯಾನಿಂಗ್, ಫ್ರೇಯಾ ಸಾರ್ಜೆಂಟ್, ಆಮಿ ಮ್ಯಾಗೈರ್, ರೆಬೆಕ್ಕಾ ಸ್ಟೋಕೆಲ್ಸ್, ಅಲಾನಾ ಡಾಲ್ಜೆಲ್, ಕೌಲ್ಟರ್ ರೀಲಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ