INDW vs NZW: ಟಾಸ್ ಗೆದ್ದ ನ್ಯೂಝಿಲೆಂಡ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

|

Updated on: Oct 29, 2024 | 1:55 PM

India Women vs New Zealand Women: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 56 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 21 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 34 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ.

INDW vs NZW: ಟಾಸ್ ಗೆದ್ದ ನ್ಯೂಝಿಲೆಂಡ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
INDW vs NZW
Follow us on

ಭಾರತ ಮತ್ತು ನ್ಯೂಝಿಲೆಂಡ್ ಮಹಿಳಾ ತಂಡಗಳ ನಡುವಣ ಮೂರನೇ ಏಕದಿನ ಪಂದ್ಯ ಶುರುವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕಿ ಸೋಫಿ ಡಿವೈನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ.

ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 59 ರನ್​ಗಳ ಭರ್ಜರಿ ಜಯ ಸಾಧಿಸಿದರೆ, ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ 76 ರನ್​ಗಳ ಗೆಲುವು ದಾಖಲಿಸಿತ್ತು.

ಇದೀಗ ಅಂತಿಮ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ. ಹೀಗಾಗಿ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಉಭಯ ತಂಡಗಳ ಮುಖಾಮುಖಿ:

ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 56 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 21 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 34 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ.

ಇನ್ನು ಭಾರತದಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಉಭಯ ತಂಡಗಳು 20 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ 11 ಬಾರಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 9 ಪಂದ್ಯಗಳನ್ನು ಗೆದ್ದುಕೊಂಡಿದೆ.

ಭಾರತ (ಪ್ಲೇಯಿಂಗ್ XI): ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೊಡ್ರಿಗಸ್, ತೇಜಲ್ ಹಸಾಬ್ನಿಸ್, ದೀಪ್ತಿ ಶರ್ಮಾ, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್, ಸೈಮಾ ಠಾಕೋರ್, ಪ್ರಿಯಾ ಮಿಶ್ರಾ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ಬರೆದ ಸೆದಿಖುಲ್ಲಾ ಅಟಲ್

ನ್ಯೂಝಿಲೆಂಡ್ (ಪ್ಲೇಯಿಂಗ್ XI): ಸುಝಿ ಬೇಟ್ಸ್, ಜಾರ್ಜಿಯಾ ಪ್ಲಿಮ್ಮರ್, ಲಾರೆನ್ ಡೌನ್, ಸೋಫಿ ಡಿವೈನ್ (ನಾಯಕಿ), ಬ್ರೂಕ್ ಹ್ಯಾಲಿಡೇ, ಮ್ಯಾಡಿ ಗ್ರೀನ್, ಇಸಾಬೆಲ್ಲಾ ಗೇಜ್ (ವಿಕೆಟ್ ಕೀಪರ್), ಹನ್ನಾ ರೋವ್, ಲೀ ತಹುಹು, ಈಡನ್ ಕಾರ್ಸನ್, ಫ್ರಾನ್ ಜೊನಾಸ್.