INDW vs SAW: ಭಾರತಕ್ಕೆ ಭರ್ಜರಿ ಜಯ: ಸರಣಿ ಸಮಬಲ

India Women vs South Africa: ಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ಸರಣಿಯು ಅಂತ್ಯವಾಗಿದೆ. ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದ್ದ ಟೀಮ್ ಇಂಡಿಯಾ, ಏಕೈಕ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

INDW vs SAW: ಭಾರತಕ್ಕೆ ಭರ್ಜರಿ ಜಯ: ಸರಣಿ ಸಮಬಲ
Team India
Follow us
ಝಾಹಿರ್ ಯೂಸುಫ್
|

Updated on: Jul 10, 2024 | 8:41 AM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯು 1-1 ಅಂತರದ ಸಮಬಲದೊಂದಿಗೆ ಅಂತ್ಯಗೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು.

ನಾಯಕಿಯ ನಿರ್ಧಾರವನ್ನು ಸಮರ್ಥಿಸುವಂತೆ ಕರಾರುವಾಕ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಸೌತ್ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. ನಾಲ್ಕನೇ ಓವರ್​ನಲ್ಲಿ ಲಾರಾ (9) ವಿಕೆಟ್ ಕಬಳಿಸುವ ಮೂಲಕ ಶ್ರೇಯಾಂಕಾ ಪಾಟೀಲ್ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಪೂಜಾ ವಸ್ತ್ರಾಕರ್ ಮರಿಝನ್ನೆ ಕಪ್​ (10) ಗೆ ಪೆವಿಲಿಯನ್ ಹಾದಿ ತೋರಿಸಿದರು. ಮತ್ತೊಂದೆಡೆ ದೀಪ್ತಿ ಶರ್ಮಾ ಬ್ರಿಟ್ಸ್ (20) ವಿಕೆಟ್ ಕಬಳಿಸಿದರು. ಇನ್ನು ಅನ್ನೆಕೆ (17) ಯನ್ನು ಎಲ್​ಬಿ ಬಲೆಗೆ ಬೀಳಿಸುವಲ್ಲಿ ಪೂಜಾ ವಸ್ತ್ರಾಕರ್ ಯಶಸ್ವಿಯಾದರು.

ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 65 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಸಂಕಷ್ಟದಿಂದ ಪಾರಾಗುವ ಮುನ್ನವೇ 17.1 ಓವರ್​ಗಳಲ್ಲಿ 84 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾದರು.

ಭಾರತದ ಪರ ಪೂಜಾ ವಸ್ತ್ರಾಕರ್ 3.1 ಓವರ್​ಗಳಲ್ಲಿ 13 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ರಾಧಾ ಯಾದವ್ 3 ಓವರ್​ಗಳಲ್ಲಿ 6 ರನ್ ನೀಡಿ 3 ವಿಕೆಟ್ ಉರುಳಿಸಿ ಮಿಂಚಿದರು.

ಇನ್ನು 85 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ 40 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 54 ರನ್ ಸಿಡಿಸಿದರು.

ಮತ್ತೊಂದೆಡೆ ಶಫಾಲಿ ವರ್ಮಾ ಅಜೇಯ 27 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 10.5 ಓವರ್​ಗಳಲ್ಲಿ 88 ರನ್ ಬಾರಿಸಿ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಸರಣಿ ಸಮಬಲ:

ಈ ಗೆಲುವಿನೊಂದಿಗೆ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಮೊದಲ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 12 ರನ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಮೂರನೇ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿತ್ತು. ಅದರಂತೆ ಅಂತಿಮ ಪಂದ್ಯದಲ್ಲಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಭಾರತ ತಂಡವು ಸರಣಿಯನ್ನು 1-1 ಅಂತರದಿಂದ ಅಂತ್ಯಗೊಳಿಸಿದೆ.

ಭಾರತ ಪ್ಲೇಯಿಂಗ್ 11: ಶಫಾಲಿ ವರ್ಮಾ , ಸ್ಮೃತಿ ಮಂಧಾನ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ದೀಪ್ತಿ ಶರ್ಮಾ , ಉಮಾ ಚೆಟ್ರಿ (ವಿಕೆಟ್ ಕೀಪರ್) , ಎಸ್ ಸಜನಾ , ಪೂಜಾ ವಸ್ತ್ರಾಕರ್ , ಶ್ರೇಯಾಂಕಾ ಪಾಟೀಲ್ , ಅರುಂಧತಿ ರೆಡ್ಡಿ , ರಾಧಾ ಯಾದವ್.

ಇದನ್ನೂ ಓದಿ: ಮಳೆ ಬಂದರೂ ನೋ ಟೆನ್ಶನ್… ಆಸ್ಟ್ರೇಲಿಯಾದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಲಾರಾ ವೊಲ್ವಾರ್ಡ್ಟ್ (ನಾಯಕಿ), ತಜ್ಮಿನ್ ಬ್ರಿಟ್ಸ್, ಡೆಲ್ಮಿ ಟಕರ್, ಸುನೆ ಲೂಸ್, ಮರಿಝನ್ನೆ ಕಪ್, ನಾಡಿನ್ ಡಿ ಕ್ಲರ್ಕ್, ಎಲಿಜ್-ಮಾರಿ ಮಾರ್ಕ್ಸ್, ಸಿನಾಲೊ ಜಾಫ್ತಾ (ವಿಕೆಟ್ ಕೀಪರ್), ಅಯಾಬೊಂಗಾ ಖಾಕಾ, ನಾನ್ಕುಲುಲೆಕೊ ಮ್ಲಾಬಾ, ಅನ್ನೆಕೆ ಬಾಷ್,

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ