IND W vs SL W: ಟಾಸ್ ಗೆದ್ದ ಶ್ರೀಲಂಕಾ: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ
ICC Womens World Cup 2025: ಮಹಿಳಾ ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಆತಿಥೇಯರಾದ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಮೊದಲ ಪಂದ್ಯವು ಗುವಾಹಟಿಯ ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್ ಸ್ಟಾರ್ನಲ್ಲಿ ವೀಕ್ಷಿಸಬಹುದು.

ಮಹಿಳಾ ಏಕದಿನ ವಿಶ್ವಕಪ್ಗೆ ಚಾಲನೆ ದೊರೆತಿದೆ. ಗುವಾಹಟಿಯ ಬರ್ಸಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಥಾಪತ್ತು ಬೌಲಿಂಗ್ ಆಯ್ದುಕೊಂಡಿದ್ದಾರೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಈವರೆಗೆ 35 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 31 ಬಾರಿ ಗೆಲುವು ದಾಖಲಿಸಿದರೆ, ಲಂಕಾ ಪಡೆ ಕೇವಲ 3 ಬಾರಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.
ಇದೀಗ ಉಭಯ ತಂಡಗಳು 36ನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ಈ ಬಾರಿ ಕೂಡ ಟೀಮ್ ಇಂಡಿಯಾ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ಶ್ರೀಲಂಕಾ ತಂಡದಲ್ಲಿ ಚಾಮರಿ ಅಥಾಪತ್ತು , ಅನುಷ್ಕಾ ಸಂಜೀವನಿ , ಹಾಸಿನಿ ಪೆರೇರಾ , ವಿಶ್ಮಿ ಗುಣರತ್ನೆ , ಹರ್ಷಿತಾ ಸಮರವಿಕ್ರಮ ಅವರಂತಹ ಬಲಿಷ್ಠ ಬ್ಯಾಟರ್ಗಳ ದಂಡೇ ಇದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಂತೆ ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಭಾರತ ಪ್ಲೇಯಿಂಗ್ 11: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಸ್ನೇಹ್ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ.
ಇದನ್ನೂ ಓದಿ: ಮಹಿಳಾ ಏಕದಿನ ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ
ಶ್ರೀಲಂಕಾ ಪ್ಲೇಯಿಂಗ್ 11: ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್), ಅಚಿನಿ ಕುಲಸೂರಿಯಾ, ಸುಗಂದಿಕಾ ಕುಮಾರಿ, ಉದೇಶಿಕಾ ಪ್ರಬೋಧನಿ, ಇನೋಕಾ ರಣವೀರ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಮಹಿಳಾ ಏಕದಿನ ವಿಶ್ವಕಪ್ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ಗಳಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ ತಂಡಗಳು:
- ಭಾರತ
- ಪಾಕಿಸ್ತಾನ್
- ಶ್ರೀಲಂಕಾ
- ಬಾಂಗ್ಲಾದೇಶ್
- ಆಸ್ಟ್ರೇಲಿಯಾ
- ನ್ಯೂಝಿಲೆಂಡ್
- ಇಂಗ್ಲೆಂಡ್
- ಸೌತ್ ಆಫ್ರಿಕಾ
